ಬೆಂಗಳೂರು: ಜನರು ಎಲ್ಲಿಯವರೆಗೆ ಇಷ್ಟಪಡ್ತಾರೋ ಅಲ್ಲಿಯವರೆಗೆ ‘ಬಿಗ್ ಬಾಸ್’ ಶೋ ನಿರೂಪಣೆ ಮಾಡ್ತೀನಿ ಎಂದು ಹೇಳಿದ್ದ ಕಿಚ್ಚ ಸುದೀಪ್ ಅವರು ಈಗ ಏಕಾಏಕಿ ಮುಂದಿನ ಸೀಸನ್ ನಿರೂಪಣೆ ಮಾಡೋದಿಲ್ಲ ಎಂದು ಟ್ವೀಟ್ ಮಾಡಿದ್ದರು.
ಸುದೀಪ್ ಯಾಕೆ ಈಗ ಈ ನಿರ್ಧಾರ ತೆಗೆದುಕೊಂಡರು ಎಂಬ ಅನುಮಾನ ಶುರುವಾಗಿದೆ. ಈಗ ಬಿಗ್ ಬಾಸ್ ಕನ್ನಡ ಸೀಸನ್ 9 ಸ್ಪರ್ಧಿ, ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಅವರು ಈ ಕುರಿತು ಸೋಶಿಯಲ್ ಮೀಡಿಯಾ ಪೋಸ್ಟ್ ಹಂಚಿಕೊಂಡಿದ್ದಾರೆ. ಬಿಗ್ ಬಾಸ್ ಎಂಬ ಕಾರ್ಯಕ್ರಮ ನಡೆಸುವ ಕೆಲವು ಕನ್ನಡ ದ್ರೋಹಿಗಳ, ನಿಮ್ಮ ಕಿತ್ತೋದ್ ಆಟಕ್ಕೆ ಕಿಚ್ಚ ಸುದೀಪ್ ‘ಬಿಗ್ ಬಾಸ್’ ನಿರೂಪಕರಾಗಿ ನಿಲ್ಲಿಸಬೇಕಾಗಿದೆ. ಅವರಿಗೆ ಮಾಡಿದ ಅವಮಾನ ಸಹಿಸೋದಿಲ್ಲ. ಎ ಮುಂಬೈ ಮರಾಠಿ ಹಾಗೂ ತಮಿಳ್ ನಿರ್ದೇಶಕ ಮೊದಲು ಬಿಗ್ ಬಾಸ್ ಬಿಡಿ ಇಲ್ಲ ಬಿಗ್ ಬಾಸ್ ನಿಲ್ಲಬೇಕು, ಅಸಲಿ ವಿಷಯ ನಾಳೆ ಮಾತಾಡ್ತೀನಿ” ಎಂದು ರೂಪೇಶ್ ರಾಜಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
#BBK11 ಗೆ ತೋರಿದ ಉತ್ತಮ ಪ್ರತಿಕ್ರಿಯೆಗಾಗಿ ಎಲ್ಲರಿಗೂ ಧನ್ಯವಾದಗಳು. ನೀವೆಲ್ಲರೂ ನನಗೆ ಮತ್ತು ಕಾರ್ಯಕ್ರಮಕ್ಕೆ ತೋರಿದ ಪ್ರೀತಿಯ ಬಗ್ಗೆ ಟಿವಿಆರ್ (ಸಂಖ್ಯೆ)ಯಲ್ಲಿ ಕಾಣುತ್ತಿದೆ. ಈ 10 ಪ್ಲಸ್ 1 ವರ್ಷ ನಿಮ್ಮೊಂದಿಗೆ ಪಯಣ ಮಾಡಿದ್ದು ಉತ್ತಮವಾಗಿತ್ತು. ನಾನು ಈಗ ಏನು ಬೇರೆ ಕಡೆಗೆ ನನ್ನ ನಡೆಯನ್ನು ಮುಂದುವರಿಸಲು ಇದು ಸಮಯವಾಗಿದೆ. ಇದು BBK ಗೆ ಹೋಸ್ಟ್ ಆಗಿ ನನ್ನ ಕೊನೆಯ ಸೀಸನ್ ಆಗಿರುತ್ತದೆ ಮತ್ತು ನನ್ನ ನಿರ್ಧಾರವನ್ನು ನನ್ನ ಕಲರ್ಸ್ ಮತ್ತು ಇಷ್ಟು ವರ್ಷಗಳಿಂದ ಬಿಗ್‌ಬಾಸ್ ಅನ್ನು ಅನುಸರಿಸಿದ ಎಲ್ಲರೂ ಗೌರವಿಸುತ್ತಾರೆ ಎಂದು ನಾನು ನಂಬುತ್ತೇನೆ. ಈ ಸೀಸನ್ ಅನ್ನು ಅತ್ಯುತ್ತಮವಾಗಿ ಮಾಡೋಣ, ಮತ್ತು ನಾನು ಕೂಡ ಅತ್ಯುತ್ತಮವಾಗಿ ನಿಮ್ಮೆಲ್ಲರನ್ನು ರಂಜಿಸುತ್ತೇನೆ. ಲವ್ ಮತ್ತು ಹಗ್ ಇದಕ್ಕಾಗಿ ಎಲ್ಲರಿಗೂ ಧನ್ಯವಾದಗಳು ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದರು.