ಯುವ ಚಿತ್ರಕ್ಕೆ ರೋಹಿತ್ ಪದಕಿ ನಿರ್ದೇಶನ  
ಸಿನಿಮಾ ಸುದ್ದಿ

ಯುವ ರಾಜ್‌ಕುಮಾರ್ ಎರಡನೇ ಚಿತ್ರಕ್ಕೆ ರೋಹಿತ್ ಪದಕಿ ನಿರ್ದೇಶನ!

ಚಿತ್ರದ ಪೋಸ್ಟರ್ ಸಹ ಬಿಡುಗಡೆಯಾಗಿದ್ದು, ರಕ್ತಸಿಕ್ತವಾದ ಕೈಯಲ್ಲಿ ಮಚ್ಚನ್ನು ಹಿಡಿದುಕೊಂಡಿದ್ದಾರೆ ಯುವ. Sins aren’t always red ಎಂಬ ದಪ್ಪ ಅಡಿಬರಹವಿದೆ.

ನಟ ಯುವ ರಾಜ್‌ಕುಮಾರ್ ಅವರು ತಮ್ಮ ಮುಂದಿನ ಸಿನಿಮಾದ ಸಿದ್ಧತೆಯಲ್ಲಿದ್ದಾರೆ, ಯುವ ರಾಜ್‌ಕುಮಾರ್ ಹೊಸ ಸಿನಿಮಾಗೆ ರೋಹಿತ್ ಪದಕಿ ನಿರ್ದೇಶನ ಮಾಡಲಿದ್ದಾರೆ, ಯುವ ನಟನೆಯ ಹೊಸ ಸಿನಿಮಾಕ್ಕಾಗಿ PRK ಪ್ರೊಡಕ್ಷನ್ಸ್, KRG ಸ್ಟುಡಿಯೋಸ್ ಮತ್ತು ಜಯಣ್ಣ ಫಿಲ್ಮ್ಸ್ ಒಂದಾಗಿವೆ.

ಈ ಸಿನಿಮಾ ಬಗ್ಗೆ ದಸರಾ ಹಬ್ಬದಂದು ಘೋಷಣೆ ಮಾಡಲಾಗಿದೆ. ಯುವ 2 ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಅಪ್ ಡೇಟ್ ಹಂಚಿಕೊಂಡಿದ್ದಾರೆ. ಇನ್ನು ಚಿತ್ರದ ಪೋಸ್ಟರ್ ಸಹ ಬಿಡುಗಡೆಯಾಗಿದ್ದು, ರಕ್ತಸಿಕ್ತವಾದ ಕೈಯಲ್ಲಿ ಮಚ್ಚನ್ನು ಹಿಡಿದುಕೊಂಡಿದ್ದಾರೆ ಯುವ. Sins aren’t always red ಎಂಬ ದಪ್ಪ ಅಡಿಬರಹವಿದೆ. ಸದ್ಯ ರಕ್ತ ಚರಿತ್ರೆ ಕಥೆಯನ್ನು ರೋಹಿತ್ ಪದಕಿ ಹೇಳ್ತಾರಾ ಕಾದು ನೋಡಬೇಕಿದೆ.

ಯುವ ಚಿತ್ರದ ಮೂಲಕ ಪಾದಾರ್ಪಣೆ ಮಾಡಿದ ಯುವ ರಾಜ್‌ಕುಮಾರ್ ಈಗ ತಮ್ಮ ಎರಡನೇ ಪ್ರಾಜೆಕ್ಟ್‌ಗೆ ಸಜ್ಜಾಗಿದ್ದಾರೆ. ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವದ ಆಚರಣೆಯೊಂದಿಗೆ ಫಸ್ಟ್ ಲುಕ್ ಮತ್ತು ಅಧಿಕೃತ ಶೀರ್ಷಿಕೆ ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ಅನಾವರಣಗೊಳಿಸಲು ಚಿತ್ರ ನಿರ್ಮಾಪಕರು ಯೋಜಿಸಿದ್ದಾರೆ. ರತ್ನನ್ ಪ್ರಪಂಚ ಮತ್ತು ಉತ್ತರಕಾಂಡದಲ್ಲಿನ ಕೆಲಸಕ್ಕಾಗಿ ಹೆಸರುವಾಸಿಯಾದ ರೋಹಿತ್ ಪದಕಿ ಅವರು ಯುವ 2 ಗಾಗಿ ನಿರ್ದೇಶನದ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ ಎಂಬುದು ಖಚಿತವಾಗಿದೆ. ತಾರಾಗಣ, ಸಿಬ್ಬಂದಿ ಮತ್ತು ತಾಂತ್ರಿಕ ತಂಡದ ಬಗ್ಗೆ ಹೆಚ್ಚಿನ ವಿವರಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್