45 ಸಿನಿಮಾ ಆಡಿಯೋ ರೈಟ್ ಖರೀದಿಸಿದ ಆನಂದ್ ಆಡಿಯೋ  
ಸಿನಿಮಾ ಸುದ್ದಿ

'45' ಸಿನಿಮಾ ಆಡಿಯೋ ಹಕ್ಕು ಆನಂದ್ ಆಡಿಯೋ ಪಾಲು: ದಾಖಲೆ ಬೆಲೆಗೆ ಖರೀದಿ!

ಸೂರಜ್ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ಶ್ರೀಮತಿ ಉಮಾ ರಮೇಶ್ ರೆಡ್ಡಿ ಈ ಸಿನಿಮಾ ನಿರ್ಮಿಸುತ್ತಿದ್ದಾರೆ. ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ನಿರ್ಮಾಣವಾಗಿರುವ ಈ ಸಿನಿಮಾದಲ್ಲಿ ಶಿವರಾಜ್‌ಕುಮಾರ್‌, ಉಪೇಂದ್ರ ಮತ್ತು ರಾಜ್‌ ಬಿ ಶೆಟ್ಟಿ ಮುಖ್ಯಭೂಮಿಕೆಯಲ್ಲಿದ್ದಾರೆ.

ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ 45 ಸಿನಿಮಾ ಈಗಾಗಲೇ ಒಂದಷ್ಟು ಕಾರಣಕ್ಕೆ ಸುದ್ದಿಯಲ್ಲಿದೆ. 45 ಚಿತ್ರದ ಆಡಿಯೋ ರೈಟ್ಸ್ ಅನ್ನು ಪ್ರತಿಷ್ಟಿತ ಆನಂದ್ ಆಡಿಯೋ ಸಂಸ್ಥೆ ಪಡೆದುಕೊಂಡಿದೆ. ಚಿತ್ರದ ನಿರ್ದೇಶಕರೂ ಆಗಿರುವ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರೇ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ‌. ಭಾರಿ ಮೊತ್ತಕ್ಕೆ ಆಡಿಯೋ ‌ರೈಟ್ಸ್ ಮಾರಾಟವಾಗಿದ್ದು ಸದ್ಯದಲ್ಲೇ ಒಂದೊಂದೆ ಹಾಡುಗಳು ಬಿಡುಗಡೆಯಾಗಲಿದೆ.

ಸೂರಜ್ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ಶ್ರೀಮತಿ ಉಮಾ ರಮೇಶ್ ರೆಡ್ಡಿ ಈ ಸಿನಿಮಾ ನಿರ್ಮಿಸುತ್ತಿದ್ದಾರೆ. ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ನಿರ್ಮಾಣವಾಗಿರುವ ಈ ಸಿನಿಮಾದಲ್ಲಿ ಶಿವರಾಜ್‌ಕುಮಾರ್‌, ಉಪೇಂದ್ರ ಮತ್ತು ರಾಜ್‌ ಬಿ ಶೆಟ್ಟಿ ಮುಖ್ಯಭೂಮಿಕೆಯಲ್ಲಿದ್ದಾರೆ. ಈ ಸಿನಿಮಾದ ಕಥೆಯನ್ನು ಅನಿಮೇಷನ್‌ ಮೂಲಕವೇ ನಟರ ಮುಂದೆ ತೆರೆದಿಟ್ಟಿದ್ದಾರೆ.

ಚಿತ್ರದ ಆಡಿಯೋ ಲಾಂಚ್‌ಗೆ ನಿರ್ದೇಶಕರು ಸಜ್ಜಾಗಿದ್ದು, ಅಭಿಮಾನಿಗಳ ಉತ್ಸಾಹವನ್ನು ಹೆಚ್ಚಿಸಿದೆ. ತಾರಾಗಣದಿಂದಲೇ 45 ಸಿನಿಮಾ ಭಾರೀ ನಿರೀಕ್ಷೆ ಮೂಡಿಸಿದೆ. ಈ ಹಿಂದೆ ಹಲವು ಸದಭಿರುಚಿಯ ಸಿನಿಮಾಗಳನ್ನು ನೀಡಿರುವ ರಮೇಶ್ ರೆಡ್ಡಿ ಮತ್ತೊಂದು ಉತ್ತಮ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಇತ್ತೀಚೆಗೆ ಚಿತ್ರ ತಂಡ ಕ್ಲೈಮ್ಯಾಕ್ಸ್ ಸನ್ನಿವೇಶಗಳನ್ನು ಪೂರ್ಣಗೊಳಿಸಿದೆ.ಬೆಂಗಳೂರು ಸೇರಿದಂತೆ ವಿವಿಧ ಸ್ಥಳಗಳಲ್ಲಿ 30ದಿನಗಳ ಶೂಟಿಂಗ್ ಪೂರ್ಣಗೊಂಡಿದೆ. ಕೌಸ್ತುಭ ಮಣಿ ನಾಯಕಿಯಾಗಿ ನಟಿಸಿದ್ದು, ಸತ್ಯ ಹೆಗಡೆ ಛಾಯಾಗ್ರಹಣ ನಿರ್ವಹಿಸುತ್ತಿದ್ದಾರೆ. ಸಿನಿಮಾ ಪೋಸ್ಟ್-ಪ್ರೊಡಕ್ಷನ್ ಪ್ರಗತಿಯಲ್ಲಿದ್ದು, 2025 ರ ಆರಂಭದಲ್ಲಿ 45 ಸಿನಿಮಾ ಬಿಡುಗಡೆ ಮಾಡಲು ಚಿತ್ರ ತಂಡ ನಿರ್ಧರಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT