ಗಿರೀಶ್ ಕಾಸರವಳ್ಳಿ ನಿರ್ದೇಶನದ ಘಟಶ್ರಾದ್ಧ 
ಸಿನಿಮಾ ಸುದ್ದಿ

81ನೇ ವೆನಿಸ್ ಚಲನಚಿತ್ರೋತ್ಸವದಲ್ಲಿ ಗಿರೀಶ್ ಕಾಸರವಳ್ಳಿ 'ಘಟಶ್ರಾದ್ಧ' ಪ್ರದರ್ಶನ

81 ನೇ ವೆನಿಸ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಸೆಪ್ಟೆಂಬರ್ 3 ಮತ್ತು 4 ರಂದು ವೆನಿಸ್ ಕ್ಲಾಸಿಕ್ಸ್ ವಿಭಾಗದಲ್ಲಿ ಪ್ರದರ್ಶನಗೊಳ್ಳಲಿದೆ, ಈ ಮನ್ನಣೆಯು ಕನ್ನಡ ಚಿತ್ರರಂಗಕ್ಕೆ ಐತಿಹಾಸಿಕ ಕ್ಷಣವಾಗಿದೆ.

1977 ರಲ್ಲಿ ತೆರೆಕಂಡ ಗಿರೀಶ ಕಾಸರವಳ್ಳಿ ಅವರು ನಿರ್ದೇಶಿಸಿದ ರಾಷ್ಟ್ರಪ್ರಶಸ್ತಿ ವಿಜೇತ ‘ಘಟಶ್ರಾದ್ಧ’ ಸಿನಿಮಾ ವಿಶ್ವದ ಪ್ರತಿಷ್ಠಿತ ಚಿತ್ರೋತ್ಸವಗಳಲ್ಲಿ ಅಗ್ರಸ್ಥಾನ ಪಡೆದ ವೆನಿಸ್‌ ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನ ಕಾಣಲಿದೆ. ವೆನಿಸ್‌ ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳುತ್ತಿರುವ ಮೊದಲ ಕನ್ನಡ ಚಿತ್ರವೆಂಬ ಹೆಗ್ಗಳಿಕೆಗೂ ‘ಘಟಶ್ರಾದ್ಧ’ ಭಾಜನವಾಗಿದೆ. 81 ನೇ ವೆನಿಸ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಸೆಪ್ಟೆಂಬರ್ 3 ಮತ್ತು 4 ರಂದು ವೆನಿಸ್ ಕ್ಲಾಸಿಕ್ಸ್ ವಿಭಾಗದಲ್ಲಿ ಪ್ರದರ್ಶನಗೊಳ್ಳಲಿದೆ, ಈ ಮನ್ನಣೆಯು ಕನ್ನಡ ಚಿತ್ರರಂಗಕ್ಕೆ ಐತಿಹಾಸಿಕ ಕ್ಷಣವಾಗಿದೆ.

ತಮ್ಮ 26 ನೇ ವಯಸ್ಸಿನಲ್ಲಿ ಗಿರೀಶ್ ಕಾಸರವಳ್ಳಿ ನಿರ್ದೇಶಿಸಿದ ಈ ಚಿತ್ರವು ತನ್ನ ದಿಟ್ಟ ದೃಶ್ಯ ಶೈಲಿ ಮತ್ತು ಮನಮೋಹಕ ಕಥೆ ಹೇಳುವ ಮೂಲಕ ಕ್ರಾಂತಿಕಾರಿ ಸಿನಿಮಾವಾಗಿತ್ತು, ಕನ್ನಡ ಚಿತ್ರರಂಗದಲ್ಲಿ ಹೊಸ ಮಾನದಂಡಗಳನ್ನು ಸೃಷ್ಟಿಸಿತು. ಘಟಶ್ರಾದ್ಧವು ಸತ್ಯಜಿತ್ ರೇ, ಮೃಣಾಲ್ ಸೇನ್ ಮತ್ತು ಶ್ಯಾಮ್ ಬೆನಗಲ್ ಅವರಂತಹ ಚಲನಚಿತ್ರ ನಿರ್ಮಾಪಕರ ಮೇರುಕೃತಿಗಳ ಜೊತೆಗೆ ಸ್ಪರ್ಧಯೊಡ್ಡಿತು, ಜೊತೆಗೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಸ್ವರ್ಣ ಪದಕ ಗೆದ್ದುಕೊಂಡಿತು. ಭಾರತೀಯ ಚಿತ್ರರಂಗದ ಶತಮಾನೋತ್ಸವದ ಸಂದರ್ಭದಲ್ಲಿ ಈ ಸಿನಿಮಾವನ್ನು ಟಾಪ್ 20 ಭಾರತೀಯ ಅತ್ಯುತ್ತಮ ಚಿತ್ರಗಳಲ್ಲಿ ಒಂದೆಂದು ಪರಿಗಣಿಸಲಾಯಿತು.

'ಘಟಶ್ರಾದ್ಧ' ಚಿತ್ರ ನೋಡಿ ಮೆಚ್ಚಿದ್ದ ಹಾಲಿವುಡ್ ಚಿತ್ರರಂಗದ ಖ್ಯಾತ ನಿರ್ದೇಶಕರುಗಳಾದ 'ಟ್ಯಾಕ್ಸಿ ಡ್ರೈವರ್', 'ಡಿಪಾರ್ಟೆಡ್' ಚಿತ್ರ ಖ್ಯಾತಿಯ ಮಾರ್ಟಿನ್ ಸ್ಕಾರ್ಸೆಸ್ಸಿ ಹಾಗೂ 'ಸ್ಟಾರ್ ವಾರ್ಸ್' ಖ್ಯಾತಿಯ ಜಾರ್ಜ್ ಲ್ಯೂಕಾಸ್ ಈ ಚಿತ್ರದ ಪುನರ್ ರೂಪೀಕರಣಕ್ಕೆ ಮುಂದಾಗಿದ್ದರು. 'ಸೆಲ್ಯೂಲಾಯ್ದ್ ಮ್ಯಾನ್' ಚಿತ್ರಕ್ಕಾಗಿ ರಾಷ್ಟ್ರ ಪ್ರಶಸ್ತಿ ಪಡೆದ ಭಾರತೀಯ ಚಿತ್ರ ನಿರ್ದೇಶಕ ಶಿವೇಂದ್ರ ಸಿಂಗ್ ದುಂಗಾರ್‌ಪುರ್ ಅವರ ಸಿನಿಮಾ ಫೌಂಡೇಶನ್ ಈ ಇಡೀ ಪುನರ್ ನವೀಕರಣದ ರೂವಾರಿಯಾಗಿದ್ದರು.. ಚಿತ್ರ ನಿರ್ದೇಶಕರಾದ ಗಿರೀಶ್ ಕಾಸರವಳ್ಳಿಯವರನ್ನು ವಿಶೇಷ ಆಹ್ವಾನ ನೀಡಿ ಕರೆಸಿಕೊಳ್ಳಲಾಗುತ್ತಿದೆ. ಇದು ವೆನಿಸ್ ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳುತ್ತಿರುವ ಮೊದಲ ಕನ್ನಡ ಚಿತ್ರ ಎಂಬುದು ಮತ್ತೊಂದು ಹಿರಿಮೆ. ಡಾ ಯು ಆರ್ ಅನಂತ ಮೂರ್ತಿಯವರ ಸಣ್ಣಕತೆ ಆಧರಿಸಿ, ಚಿತ್ರಕಥೆಯನ್ನು ಬರೆದು 'ಘಟಶ್ರಾದ್ಧ' ಚಿತ್ರವನ್ನ ನಿರ್ದೇಶಿಸಿದವರು ಗಿರೀಶ್ ಕಾಸರವಳ್ಳಿ. ಎಸ್ ರಾಮಚಂದ್ರರ ಛಾಯಾಗ್ರಹಣ ಇದ್ದ ಈ ಚಿತ್ರಕ್ಕೆ ಬಿ ವಿ ಕಾರಂತ ಸಂಗೀತ ನೀಡಿದ್ದರು. ಕಲಾನಿರ್ದೇಶನ ಕೆ ವಿ ಸುಬ್ಬಣ್ಣನವರದಾಗಿತ್ತು. 'ಘಟಶ್ರಾದ್ಧ' ಸಿನಿಮಾವನ್ನು ಸದಾನಂದ ಸುವರ್ಣ ನಿರ್ಮಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT