ತದ್ವಿರುದ್ಧ ಸಿನಿಮಾ ಸ್ಟಿಲ್ 
ಸಿನಿಮಾ ಸುದ್ದಿ

ಹೊಸ ಚಿಗುರು ಹಳೇ ಬೇರು ಸಮ್ಮಿಶ್ರಣವೇ 'ತದ್ವಿರುದ್ಧ': ಸುಚೇಂದ್ರ ಪ್ರಸಾದ್

ಇದೊಂದು 90ರ ಕಾಲಘಟ್ಟದಲ್ಲಿ ನಡೆಯುವ ಕಥೆ‌. ಮರ್ಡರ್ ಮಿಸ್ಟರಿ ಕಥಾಹಂದರ ಹೊಂದಿರುವ ಚಿತ್ರವಾದರೂ ಕ್ರೌರ್ಯವನ್ನು ವೈಭವೀಕರಿಸಿಲ್ಲ. ಸುಚೇಂದ್ರ ಪ್ರಸಾದ್, ಸುಮನ್ ರಂಗನಾಥ್, ವಿಕ್ರಮ್ ಸೇರಿದಂತೆ ಐದು ಮುಖ್ಯಪಾತ್ರಗಳ ಸುತ್ತ ಈ ಚಿತ್ರದ ಕಥೆ ಸಾಗುತ್ತದೆ‌.

ವಿನೋದ್ ಜೆ ರಾಜ್ ನಿರ್ದೇಶನದ ತದ್ವಿರುದ್ಧ ಸಿನಿಮಾಗಾಗಿ ಸುಚೇಂದ್ರ ಪ್ರಸಾದ್ ಮತ್ತು ಸುಮನ್ ರಂಗನಾಥ್ ಒಂದಾಗಿದ್ದಾರೆ. 'ತದ್ವಿರುದ್ಧ' ಚಿತ್ರದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಯಾಯಿತು. ಟೀಸರ್‌ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ‌.

ಸ್ವಚ್ಛ ಕನ್ನಡದ ಮಾತಿನಿಂದ ಹಾಗೂ ತಮ್ಮ ಅಮೋಘ ಅಭಿನಯದಿಂದ ಜನಪ್ರಿಯರಾಗಿರುವ ಸುಚೇಂದ್ರ ಪ್ರಸಾದ್, ಹಿರಿಯ ನಟಿ ಸುಮನ್ ರಂಗನಾಥ್ ಹಾಗೂ ವಿಕ್ರಮ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ಈ ಚಿತ್ರವನ್ನು ಚಾರ್ಮಿಯನ್ ಮೋಷನ್ ಪಿಕ್ಚರ್ಸ್ ಸಂಸ್ಥೆ ನಿರ್ಮಾಣ ಮಾಡಿದೆ. ಕಥೆ, ಚಿತ್ರಕಥೆ, ಛಾಯಾಗ್ರಹಣ ಮತ್ತು ಸಂಕಲನ ನಿರ್ವಹಿಸಿದ್ದಾರೆ ನಿರ್ದೇಶಕರು, ವಾಸ್ತವಕ್ಕೆ ವಿರುದ್ಧವಾಗಿ ನಡೆದುಕೊಳ್ಳುವುದೇ 'ತದ್ವಿರುದ್ಧ'. ಇದೊಂದು 90ರ ಕಾಲಘಟ್ಟದಲ್ಲಿ ನಡೆಯುವ ಕಥೆ‌. ಮರ್ಡರ್ ಮಿಸ್ಟರಿ ಕಥಾಹಂದರ ಹೊಂದಿರುವ ಚಿತ್ರವಾದರೂ ಕ್ರೌರ್ಯವನ್ನು ವೈಭವೀಕರಿಸಿಲ್ಲ. ಸುಚೇಂದ್ರ ಪ್ರಸಾದ್, ಸುಮನ್ ರಂಗನಾಥ್, ವಿಕ್ರಮ್ ಸೇರಿದಂತೆ ಐದು ಮುಖ್ಯಪಾತ್ರಗಳ ಸುತ್ತ ಈ ಚಿತ್ರದ ಕಥೆ ಸಾಗುತ್ತದೆ‌. ಸಕಲೇಶಪುರದಲ್ಲೇ ಪೂರ್ತಿ ಚಿತ್ರೀಕರಣ ನಡೆದಿದೆ. ಯಾವುದೇ ಕೊರತೆ ಬಾರದ ಹಾಗೆ ನಿರ್ಮಾಪಕರು ಚಿತ್ರ ನಿರ್ಮಾಣ ಮಾಡಿದ್ದಾರೆ. ಕಲಾವಿದರು ಹಾಗೂ ತಂತ್ರಜ್ಞರು ಸಹಕಾರ ನೀಡಿದ್ದಾರೆ‌‌. ಹಾಡಿಲ್ಲದ ಈ ಚಿತ್ರದಲ್ಲಿ ಹಿನ್ನೆಲೆ ಸಂಗೀತವೇ ಹೈಲೆಟ್'' ಎಂದರು ನಿರ್ದೇಶಕ ವಿನೋದ್‌ ಜೆ ರಾಜ್. ಕಥೆ, ಚಿತ್ರಕಥೆ, ಛಾಯಾಗ್ರಹಣ, ಸಂಕಲನದ ಜವಾಬ್ದಾರಿ ಹೊತ್ತುಕೊಂಡು ಯಶಸ್ವಿಯಾಗಿ ನಿಭಾಯಿಸಿರುವ ನಿರ್ದೇಶಕರು ಅಕ್ಟೋಬರ್ ತಿಂಗಳಲ್ಲಿ ಚಿತ್ರವನ್ನ ತೆರೆಗೆ ತರಲಿದ್ದಾರೆ.

ನಿರ್ದೇಶಕರು ಹೇಳಿದ ತಕ್ಷಣವೇ ಕಥೆ ಇಷ್ಟವಾಯಿತು. ನನ್ನ ಪಾತ್ರ ಚೆನ್ನಾಗಿದೆ‌. ಸಸ್ಪೆನ್ಸ್ ಚಿತ್ರವಾಗಿರುವುದರಿಂದ ಕಥೆಯ ಬಗ್ಗೆ ಹೆಚ್ಚು ಹೇಳುವ ಹಾಗಿಲ್ಲ. ಎಲ್ಲರೂ ನಮ್ಮ ಚಿತ್ರವನ್ನು ನೋಡಿ'' ಎಂದರು ನಟಿ ಸುಮನ್ ರಂಗನಾಥ್. ಹೊಸ ಚಿಗುರು ಹಳೇ ಬೇರು ಸಮ್ಮಿಶ್ರಣವೇ ಈ ಚಿತ್ರ. ಸಿದ್ದ ಸೂತ್ರಗಳನ್ನು ಪಕ್ಕಕ್ಕಿರಿಸಿ ಮಾಡಿರುವ ಚಿತ್ರವಿದು. ಹಾಗಾಗಿ ಸ್ವಲ್ಪ ಈ ಚಿತ್ರ ಭಿನ್ನ. ಸಿನಿಮಾ ತಂತ್ರವನ್ನು ಬಿಟ್ಟು ಬೇರೆ ಯಾವ ತಂತ್ರಗಾರಿಕೆಯನ್ನು ನಿರ್ದೇಶಕರು ಈ ಚಿತ್ರದಲ್ಲಿ ಹೇರಿಲ್ಲ. ಹಾಗಾಗಿ ಇದು ವಿಭಿನ್ನ ಅಂತಲೂ ಹೇಳಬಹುದು. ಈ ವಿಭಿನ್ನ ಕಥೆಯ ಚಿತ್ರದಲ್ಲಿ ನಟಿಸಿರುವುದಕ್ಕೆ ಖುಷಿಯಿದೆ'' ಎಂದು ಸುಚೇಂದ್ರ ಪ್ರಸಾದ್ ವಿವರಿಸಿದ್ದಾರೆ. ತಾರಾಗಣದಲ್ಲಿ ಐಶ್ವರ್ಯಾ ಬಿ ಶೆಟ್ಟಿ, ಸುವಿನ್ ಗೌಡ, ಪೂಜಾ ಗೌಡ ಮತ್ತು ಅಭಿಲಾಷ್ ಪ್ರಮುಖ ಪಾತ್ರಗಳಲ್ಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT