ಡಾರ್ಲಿಂಗ್ ಕೃಷ್ಣ ಹಂಚಿಕೊಂಡಿರುವ ಪೋಸ್ಟ್ 
ಸಿನಿಮಾ ಸುದ್ದಿ

ಅಮ್ಮನಾದ ಮಿಲನಾ ನಾಗರಾಜ್‌: ತಾಯಿ ಮಗು ಕ್ಷೇಮ- ಡಾರ್ಲಿಂಗ್‌ ಕೃಷ್ಣ

ಮಿಲನಾ ನಾಗರಾಜ್ ಅವರು ತಾಯಿ ಆಗಿದ್ದಾರೆ. ಈ ಖುಷಿ ಸುದ್ದಿಯನ್ನು ಡಾರ್ಲಿಂಗ್ ಕೃಷ್ಣ ಅವರು ಸೋಶಿಯಲ್ ಮೀಡಿಯಾ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ

ಬೆಂಗಳೂರು: ಸ್ಯಾಂಡಲ್‌ವುಡ್‌ನ ಕ್ಯೂಟ್‌ ಕಪಲ್‌ ಮಿಲನಾ ನಾಗರಾಜ್‌ ಹಾಗೂ ಡಾರ್ಲಿಂಗ್‌ ಕೃಷ್ಣ ತಮ್ಮ ಮೊದಲನೆಯ ಮಗುವನ್ನು ಬರಮಾಡಿಕೊಂಡಿದ್ದಾರೆ. ಫೆಬ್ರವರಿ 14, 2021 ರಲ್ಲಿ ಮದುವೆಯಾಗಿದ್ದ ಈ ಜೋಡಿ, ಮದುವೆಯಾಗಿ ಮೂರು ವರ್ಷಗಳ ನಂತರ ತಮ್ಮ ಮೊದಲನೆಯ ಮಗುವಿಗೆ ಜನ್ಮ ನೀಡಿದ್ದಾರೆ.

ಹೌದು, ಮಿಲನಾ ನಾಗರಾಜ್ ಅವರು ತಾಯಿ ಆಗಿದ್ದಾರೆ. ಈ ಖುಷಿ ಸುದ್ದಿಯನ್ನು ಡಾರ್ಲಿಂಗ್ ಕೃಷ್ಣ ಅವರು ಸೋಶಿಯಲ್ ಮೀಡಿಯಾ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಮಿಲನಾ ನಾಗರಾಜ್ ಅವರಿಗೆ ಹೆಣ್ಣುಮಗು ಜನಿಸಿದೆ. ಈ ವಿಚಾರವನ್ನು ದಂಪತಿ ರಿವೀಲ್ ಮಾಡಿದ್ದಾರೆ. ಮಗು ಹಾಗೂ ತಾಯಿಯ ಆರೋಗ್ಯ ಉತ್ತಮವಾಗಿದೆ ಎಂದು ಡಾರ್ಲಿಂಗ್ ಕೃಷ್ಣ ಅವರು ಮಾಹಿತಿ ಹಂಚಿಕೊಂಡಿದ್ದಾರೆ.ಮಿಲನಾ ನಾಗರಾಜ್ ಅವರನ್ನು ಡಾರ್ಲಿಂಗ್ ಕೃಷ್ಣ ಅವರು ಹೊಗಳಿದ್ದಾರೆ. ಅದೇ ರೀತಿ ಮಗಳು ಹುಟ್ಟಿದ್ದಕ್ಕೆ ಡಾರ್ಲಿಂಗ್ ಕೃಷ್ಣ ಅವರಿಗೆ ಸಾಕಷ್ಟು ಖುಷಿ ಆಗಿದೆ. ಹೆಣ್ಣು ಮಗು ಜನಿಸಬೇಕು ಎಂದು ಅವರ ಆಸೆ ಆಗಿತ್ತಂತೆ. ಈ ಆಸೆ ಈಡೇರಿದೆ.

ಮಿಲನಾಗೆ ಸೋಶಿಯಲ್ ಮೀಡಿಯಾದಲ್ಲಿ ಶುಭಾಶಯಗಳ ಸುರಿಮಳೆಯೇ ಬಂದಿದೆ. ಅವರಿಗೆ ಎಲ್ಲರೂ ಶುಭಾಶಯ ತಿಳಿಸುತ್ತಾ ಇದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

NICE ವಿವಾದ: ದೇವೇಗೌಡರು ಬೇಕಿದ್ರೆ ಕೋರ್ಟ್‌ಗೆ ಹೋಗಲಿ, ಉಪವಾಸ ಮಾಡಲಿ: ಮಾಜಿ ಪ್ರಧಾನಿ ಪತ್ರಕ್ಕೆ CM ಡಿಕೆಶಿ ತಿರುಗೇಟು

ಸ್ವಚ್ಛ ವಾಯು ಸರ್ವೇಕ್ಷಣ 2026: ಬೆಂಗಳೂರು, ಶ್ರೀನಗರ ಹಿಂದಿಕ್ಕಿದ ದೆಹಲಿ; ಅತ್ಯಂತ ಸ್ವಚ್ಛ ಗಾಳಿ ಯಾವ ನಗರದಲ್ಲಿದೆ ಗೊತ್ತಾ?

ಸತ್ಯ ನಿಕೇತನ ಪಿಜಿ ಕುಸಿತದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ದೆಹಲಿ ಹೈಕೋರ್ಟ್ ಆದೇಶ; ದುರಂತಕ್ಕೆ ಮಾಲೀಕನಷ್ಟೇ ಅಲ್ಲ MCD, DU ಸಹ ಹೊಣೆ!

ರನ್‌ವೇಯಿಂದ ಜಾರಿದ ಅಮೆಜಾನ್ ಕಾರ್ಗೋ ವಿಮಾನ; ವಾಹನಗಳಿಗೆ ಡಿಕ್ಕಿ, ಕನಿಷ್ಠ ಐವರು ಸಾವು!

Varanasi: ತೆಲುಗು ರಾಜ್ಯಗಳಲ್ಲಿ ಬರೋಬ್ಬರಿ 320 ಕೋಟಿಗೆ ಥಿಯೇಟ್ರಿಕಲ್ ಹಕ್ಕುಗಳ ಮಾರಾಟ? ರಾಜಮೌಳಿಗೆ ತಲೆಬಿಸಿ!