ವಿನಾಯಕನ್ 
ಸಿನಿಮಾ ಸುದ್ದಿ

ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ 'ಜೈಲರ್' ಚಿತ್ರದ ಖಳನಟ ವಿನಾಯಕನ್ ಬಂಧನ

ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಘಟನೆ ನಡೆದಿದ್ದು, ಅಲ್ಲಿ ಆತನ ಕುಡಿತದ ಸ್ಥಿತಿ ಮತ್ತು ಅಸಂಬದ್ಧ ವರ್ತನೆಯು ಭದ್ರತಾ ಪಡೆಗಳು ಕ್ರಮ ಕೈಗೊಳ್ಳುವಂತೆ ಮಾಡಿದೆ.

ದಕ್ಷಿಣ ಚಿತ್ರರಂಗದ ಖ್ಯಾತ ನಟ ವಿನಾಯಕನ್ ಇತ್ತೀಚೆಗೆ ವಿವಾದಾತ್ಮಕ ಸನ್ನಿವೇಶವನ್ನು ಎದುರಿಸಬೇಕಾಯಿತು. ಸೂಪರ್‌ಸ್ಟಾರ್ ರಜನಿಕಾಂತ್ ಅವರ 'ಜೈಲರ್' ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದ ನಟನನ್ನು ವಿಮಾನ ನಿಲ್ದಾಣದಲ್ಲಿ ಕುಡಿದು ಗಲಾಟೆ ಮಾಡುತ್ತಿದ್ದಾಗ ಬಂಧಿಸಲಾಗಿದೆ.

ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಘಟನೆ ನಡೆದಿದ್ದು, ಅಲ್ಲಿ ಆತನ ಕುಡಿತದ ಸ್ಥಿತಿ ಮತ್ತು ಅಸಂಬದ್ಧ ವರ್ತನೆಯು ಭದ್ರತಾ ಪಡೆಗಳು ಕ್ರಮ ಕೈಗೊಳ್ಳುವಂತೆ ಮಾಡಿದೆ. ವಿನಾಯಕನ್ ಮದ್ಯ ಸೇವಿಸಿ ವಿಮಾನ ನಿಲ್ದಾಣವನ್ನು ತಲುಪಿದ್ದು ಅಲ್ಲಿ ತುಂಬಾ ಅಸಭ್ಯವಾಗಿ ವರ್ತಿಸಿದ್ದರು ಎಂದು ಹೇಳಲಾಗುತ್ತಿದೆ.

ವರದಿಗಳ ಪ್ರಕಾರ, ಅವರು CISF (ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್) ಜೊತೆಗೆ ವಾಗ್ವಾದ ನಡೆಸಿದ್ದು ಭದ್ರತಾ ತಪಾಸಣೆಗೆ ಅಡ್ಡಿಪಡಿಸಿದರು. ಅವರ ಅನಿರೀಕ್ಷಿತ ವರ್ತನೆಯು ವಿಮಾನ ನಿಲ್ದಾಣದಲ್ಲಿ ಅವ್ಯವಸ್ಥೆಯನ್ನು ಸೃಷ್ಟಿಸಿತು. ಇತರ ಪ್ರಯಾಣಿಕರು ಸಹ ಅನಾನುಕೂಲತೆಯನ್ನು ಎದುರಿಸಬೇಕಾಯಿತು. ಸದ್ಯ ವಿನಾಯಕ್ ಟಿಕೆಯನ್ನು ಠಾಣೆಗೆ ಕರೆದೊಯ್ದಿದ್ದು, ಆತನನ್ನು ವಿಚಾರಣೆಗೊಳಪಡಿಸಲಾಗಿದೆ. ಘಟನೆಯ ಸಂಪೂರ್ಣ ತನಿಖೆ ನಡೆಸಲಾಗುವುದು ಎಂದರು.

ಈಗ ಈ ವಿಚಾರದಲ್ಲಿ ಮುಂದಿನ ಕ್ರಮದ ಜವಾಬ್ದಾರಿ ಹೈದರಾಬಾದ್ ಪೊಲೀಸರ ಮೇಲಿದೆ. ಸದ್ಯ ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದು, ವಿನಾಯಕ್ ವಿರುದ್ಧ ಯಾವ ಕಾನೂನು ಕ್ರಮ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಈ ಘಟನೆಯು ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಜನರನ್ನು ಬೆಚ್ಚಿಬೀಳಿಸಿದೆ ಮಾತ್ರವಲ್ಲದೆ ಅವರ ಅಭಿಮಾನಿಗಳು ಮತ್ತು ಚಿತ್ರರಂಗದವರಲ್ಲಿ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT