ಟಾಮಿ ಸಿನಿಮಾ ಸ್ಟಿಲ್ 
ಸಿನಿಮಾ ಸುದ್ದಿ

ಸುದೀಪ್ ಶಿಷ್ಯನ ಹೊಸ ಸಾಹಸ 'ಟಾಮಿ': ನಿರ್ದೇಶನದ ಜೊತೆಗೆ ನಟನೆಗಿಳಿದ 'ಆಶು'!

ಕಿಚ್ಚ ಸುದೀಪ್ ನಟನೆಯ ‘ಮುಕುಂದ ಮುರಾರಿ’, ರೆಬಲ್ ಸ್ಟಾರ್ ಅಂಬರೀಶ್ ಹಾಗೂ ಸುದೀಪ್ ನಟನೆಯ ‘ಅಂಬಿ ನಿಂಗೆ ವಯಸ್ಸಾಯ್ತೊ’, ‘ಕೋಟಿಗೊಬ್ಬ 3’ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ ಆಶು.

‘ಟಾಮಿ’ ಶ್ವಾನ ಪ್ರಿಯರಿಗೆ ಈ ಹೆಸರು ಮತ್ತಷ್ಟು ಆಪ್ತ. ಈ ಚಿತ್ರಕ್ಕೆ ಆಶು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ನಿರ್ದೇಶಕ ನಾಯಕ ಆಶು ಅವರಿಗೆ ‘ಟಾಮಿ’ ಮೊದಲ ಸಿನಿಮಾ. ಮೊದಲ ಬಾರಿಗೆ ಡೈರೆಕ್ಟರ್​​​ ಕ್ಯಾಪ್ ತೊಡುವ ಜೊತೆಗೆ ಫಸ್ಟ್ ಟೈಮ್ ತೆರೆ ಮೇಲೆ ನಾಯಕನಾಗಿ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆ ಸಹಜವಾಗಿ ಪ್ರೇಕ್ಷಕರಲ್ಲಿ ಕುತೂಹಲ ಮೂಡಿದೆ. ಆದರೆ ಅವರಿಗೆ ಚಿತ್ರರಂಗವೇನು ಹೊಸದೇನಲ್ಲ.

ಕಳೆದ ಏಳೆಂಟು ವರ್ಷಗಳಿಂದ ಸ್ಯಾಂಡಲ್ ವುಡ್ ನಲ್ಲಿ ಅನೇಕ ಸಿನಿಮಾಗಳಿಗೆ ಅದರಲ್ಲೂ ಕಿಚ್ಚ ಸುದೀಪ್ ನಟನೆಯ ಚಿತ್ರಗಳಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ. ಕಿಚ್ಚ ಸುದೀಪ್ ನಟನೆಯ ‘ಮುಕುಂದ ಮುರಾರಿ’, ರೆಬಲ್ ಸ್ಟಾರ್ ಅಂಬರೀಶ್ ಹಾಗೂ ಸುದೀಪ್ ನಟನೆಯ ‘ಅಂಬಿ ನಿಂಗೆ ವಯಸ್ಸಾಯ್ತೊ’, ‘ಕೋಟಿಗೊಬ್ಬ 3’ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ ಆಶು.

ಸದ್ಯ ರಿಲೀಸ್ ಆಗಿರುವ ಪೋಸ್ಟರ್ ನಲ್ಲಿ ನಾಯಕ ಆಶು, ಜೊತೆಯಲ್ಲಿ ನಾಯಿ ಹಾಗೂ ಆರ್ ಎಕ್ಸ್ ಬೈಕ್ ನೋಡಬಹುದು. ಪೋಸ್ಟರ್ ನೋಡುತ್ತಿದ್ದರೆ ನಾಯಕ ನಾಯಿ ಪ್ರೇಮಿ ಜೊತೆಗೆ ಆರ್ ಎಕ್ಸ್ ಬೈಕ್ ನ ಲವರ್ ಕೂಡ ಆಗಿರುತ್ತಾನೆ ಎನ್ನುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ನಾಯಕನ ರಗಡ್​ ಲುಕ್ ನೋಡಿದರೆ ಇದು ಆಕ್ಷನ್ ಸಿನಿಮಾ ಇರಬಹುದೆಂಬ ಅನುಮಾನವೂ ಕಾಣುತ್ತಿದೆ. ‘ಟಾಮಿ’ ಸಿನಿಮಾದಲ್ಲಿ ಬಹುತೇಕ ಹೊಸಬರೇ ಇದ್ದಾರೆ. ಎಲಿಪಾಸ್ ಇಂಡಿಯಾ ಎಂಟರ್ಟೈನ್ಮೆಂಟ್ ಬ್ಯಾನರ್ ಅಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ. ಚಿತ್ರಕ್ಕೆ ಸಚಿನ್ ಶ್ಯಾಮ್ ಸುಂದರ್ ಹಾಗೂ ಅನೇಕ ಸ್ನೇಹಿತರು ಸೇರಿ ಬಂಡವಾಳ ಹೂಡುತ್ತಿದ್ದಾರೆ. ಎಡಗೈಯೇ ಅಪಘಾತಕ್ಕೆ ಕಾರಣ ಸಿನಿಮಾ ಖ್ಯಾತಿಯ ಸಂಗೀತ ನಿರ್ದೇಶಕ ಪ್ರದ್ಯುತನ್ ‘ಟಾಮಿ’ ಸಿನಿಮಾಗೂ ಸಂಗೀತ ನೀಡುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ