ನಟಿ ರಶ್ಮಿಕಾ ಮಂದಣ್ಣ 
ಸಿನಿಮಾ ಸುದ್ದಿ

ಜೀವನ ತುಂಬ ಕ್ಷಣಿಕ, ನಾಳೆ ಇರುತ್ತೋ ಇಲ್ಲವೋ ಗೊತ್ತಿಲ್ಲ: ಅಪಘಾತದ ಬೆನ್ನಲ್ಲೇ ನಟಿ ರಶ್ಮಿಕಾ ಪೋಸ್ಟ್​

ನಾನು ತುಂಬಾ ದಿನಗಳಿಂದ ಸಾಮಾಜಿಕ ಜಾಲತಾಣದಿಂದ ದೂರ ಉಳಿದಿದ್ದೇನೆ. ಇದಕ್ಕೆ ಬಲವಾದ ಕಾರಣ ಕೂಡ ಇದೆ ಎನ್ನುವ ಮೂಲಕ ಇತ್ತೀಚೆಗಷ್ಟೇ ತನಗೆ ಅಪಘಾತವಾಯಿತು ಎಂದು ಇನ್‌ಸ್ಟಾಗ್ರಾಂನಲ್ಲಿ ರಶ್ಮಿಕಾ ಬಹಿರಂಗಪಡಿಸಿದ್ದಾರೆ.

ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರು ಇತ್ತೀಚಿಗೆ ಹೆಚ್ಚು ಆ್ಯಕ್ಟೀವ್​ ಆಗಿರಲಿಲ್ಲ. ಈ ನಡುವೆ ಸೋಶಿಯಲ್​ ಮೀಡಿಯಾದಲ್ಲಿ ಮತ್ತು ಸಾರ್ವಜನಿಕವಾಗಿ ಅವರು ಹೆಚ್ಚು ಕಾಣಿಸಿಕೊಂಡಿರಲಿಲ್ಲ. ಅದಕ್ಕೆ ಕಾರಣ ಏನು ಎಂಬುದನ್ನು ಈಗ ಅವರು ತಿಳಿಸಿದ್ದಾರೆ.

‘ಕಳೆದ ತಿಂಗಳು ನನಗೆ ಚಿಕ್ಕ ಅಪಘಾತ ಆಯಿತು. ವೈದ್ಯರ ಸಲಹೆಯಂತೆ ನಾನು ಮನೆಯಲ್ಲೇ ಇದ್ದು ಚೇತರಿಸಿಕೊಂಡೆ. ಈಗ ನಾನು ಚೆನ್ನಾಗಿದ್ದೇನೆ’ ಎಂದು ರಶ್ಮಿಕಾ ಮಂದಣ್ಣ ಅವರು ಅಭಿಮಾನಿಗಳ ಜೊತೆ ಮಾಹಿತಿ ಹಂಚಿಕೊಂಡಿದ್ದಾರೆ. ನಾನು ತುಂಬಾ ದಿನಗಳಿಂದ ಸಾಮಾಜಿಕ ಜಾಲತಾಣದಿಂದ ದೂರ ಉಳಿದಿದ್ದೇನೆ. ಇದಕ್ಕೆ ಬಲವಾದ ಕಾರಣ ಕೂಡ ಇದೆ ಎನ್ನುವ ಮೂಲಕ ಇತ್ತೀಚೆಗಷ್ಟೇ ತನಗೆ ಅಪಘಾತವಾಯಿತು ಎಂದು ಇನ್‌ಸ್ಟಾಗ್ರಾಂನಲ್ಲಿ ರಶ್ಮಿಕಾ ಬಹಿರಂಗಪಡಿಸಿದ್ದಾರೆ.

ಒಂದು ತಿಂಗಳು ಜಾಲತಾಣದಲ್ಲಿ ಆ್ಯಕ್ಟಿವ್ ಆಗಿರಲಿಲ್ಲ. ಸಣ್ಣ ಅಪಘಾತವೇ ಇದಕ್ಕೆ ಕಾರಣ. ವೈದ್ಯರ ಸಲಹೆಯಂತೆ ನಾನು ಮನೆಯಲ್ಲೇ ಇದ್ದು ವಿಶ್ರಾಂತಿ ಪಡೆಯುತ್ತಿದ್ದೇನೆ. ಸದ್ಯದಲ್ಲೇ ಮತ್ತೆ ಬಿಜಿಯಾಗುತ್ತೇನೆ. ಬದುಕು ಬಹಳ ಅಮೂಲ್ಯವಾಗಿದ್ದು, ತುಂಬಾ ಹುಷಾರಾಗಿರಿ ಎಂದು ಅಭಿಮಾನಿಗಳಿಗೆ ಸಲಹೆ ನೀಡಿದ್ದಾರೆ. ಜೀವನದಲ್ಲಿ ಏನಾಗುತ್ತದೆ ಎಂದು ಯಾರಿಂದಲೂ ಹೇಳಲು ಸಾಧ್ಯವಿಲ್ಲ. ಏಕೆಂದರೆ, ಜೀವನ ತುಂಬಾ ಅನಿರೀಕ್ಷಿತವಾಗಿದೆ. ನಾಳೆ ಇರುತ್ತೋ ಇಲ್ಲವೋ ಗೊತ್ತಿಲ್ಲ, ನೆಮ್ಮದಿಯಿಂದ ಬದುಕಬೇಕು ಎಂದು ಇನ್​ಸ್ಟಾಗ್ರಾಂ ಪೋಸ್ಟ್​ನಲ್ಲಿ ರಶ್ಮಿಕಾ ಬರೆದುಕೊಂಡಿದ್ದಾರೆ. ಅಲ್ಲದೆ, ಶೀಘ್ರದಲ್ಲೇ ಅಪ್​ಡೇಟ್​ ಕೊಡುವುದಾಗಿ ತಿಳಿಸಿದ್ದಾರೆ. ಸದ್ಯ ಹಲವು ಸಿನಿಮಾಗಳಲ್ಲಿ ರಶ್ಮಿಕಾ ಮಂದಣ್ಣ ಅವರು ಬ್ಯುಸಿ ಆಗಿದ್ದಾರೆ. ‘ಪುಷ್ಪ 2’, ‘ಸಿಕಂದರ್​’, ‘ಛಾವ’ ಮುಂತಾದ ಬಹುನಿರೀಕ್ಷಿತ ಸಿನಿಮಾಗಳು ಅವರ ಕೈಯಲ್ಲಿ ಇವೆ. ಹೊಸ ಹೊಸ ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಯುದ್ಧನೌಕೆಗಳ ಕಳುಹಿಸಿ': ಇರಾನ್ ಹೆಡೆಮುರಿ ಕಟ್ಟಲು ಜಗತ್ತಿಗೆ Donald Trump ಸಂದೇಶ!

Jammu- Kashmir: ಪೂಂಚ್‌ನಲ್ಲಿ ಉಗ್ರ ವಿರೋಧಿ ಕಾರ್ಯಾಚರಣೆ, ಸೇನೆಯ JCO ಹುತಾತ್ಮ

ನೌಕಾಪಡೆ ಭದ್ರತೆಯಲ್ಲಿ Hormuz ಜಲಸಂಧಿ ದಾಟಿದ ಭಾರತ ಮೂಲದ LPG tanker!

ರಷ್ಯಾ ಮೇಲೂ ಡ್ರೋನ್ ದಾಳಿ: 16 ಮಾನವರಹಿತ ಡ್ರೋನ್ ಗಳ ಹೊಡೆದುರುಳಿಸಿದ Moscow!

'ನಾನು ಕೂಡ ಪರಪುರುಷನ ಜತೆ ಹೋದರೆ ಒಪ್ಪಿಕೊಳ್ಳುತ್ತಾರೆಯೇ?': ನಟ ಜಯಂ ರವಿ ವಿರುದ್ಧ ಮಾಜಿ ಪತ್ನಿ ಆರತಿ ಕಿಡಿ!

SCROLL FOR NEXT