ಸರ್ವೇ ನಂಬರ್ 45 ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

‘ಸರ್ವೇ ನಂಬರ್ 45’ ಚಿತ್ರದ ಮೂಲಕ ನಿರ್ದೇಶನಕ್ಕೆ ಶಿವಕುಮಾರ್ ಎಂ ಶೆಟ್ಟಿಹಳ್ಳಿ ಪಾದಾರ್ಪಣೆ

ಚಿತ್ರದ ಚಿತ್ರೀಕರಣ ಈಗಾಗಲೇ ಆರಂಭವಾಗಿದ್ದು, ಮೈಸೂರು, ಹಾಸನ, ಮಂಡ್ಯದಲ್ಲಿ ಎರಡು ಹಂತಗಳಲ್ಲಿ ಚಿತ್ರೀಕರಣ ನಡೆಸಲು ಚಿತ್ರತಂಡ ಯೋಜನೆ ರೂಪಿಸಿದೆ.

ಹೊಸಬರೇ ಸೇರಿಕೊಂಡು ನಿರ್ಮಿಸುತ್ತಿರುವ ‘ಸರ್ವೇ ನಂಬರ್ 45’ ಚಿತ್ರಕ್ಕೆ ಶಿವಕುಮಾರ್ ಎಂ ಶೆಟ್ಟಿಹಳ್ಳಿ ಅವರು ಆ್ಯಕ್ಷನ್ ಕಟ್ ಹೇಳುತ್ತಿದ್ದು, ಈ ಮೂಲಕ ಸ್ಯಾಂಡಲ್'ವುಡ್'ಗೆ ನಿರ್ದೇಶಕರಾಗಿ ಪದಾರ್ಪಣೆ ಮಾಡುತ್ತಿದ್ದಾರೆ.

ಭೂಮಿ, ಜಾಗಕ್ಕೆ ಸರ್ವೇ ನಂಬರ್ ಎಂದು ಸರ್ಕಾರವು ನೀಡಿರುತ್ತದೆ. ಇದಕ್ಕೆ ಸಂಬಂಧಿಸಿದ ಕಥೆ ಚಿತ್ರದ್ದಾಗಿದೆ. ಕೆಟ್ಟದ್ದನ್ನು ಮಾಡಲು ಮುಂದಾದರೆ ಅನಾಹುತಗಳು ಕಟ್ಟಿಟ್ಟ ಬುತ್ತಿ. ಒಳಿತನ್ನು ಬಯಸಿದರೆ ಒಳ್ಳೆಯದೇ ಆಗುತ್ತದೆ ಎಂಬ ಸಂದೇಶವನ್ನು ಚಿತ್ರತಂಡ ನೀಡಲು ಹೊರಟಿದೆ.

ಚಿತ್ರದ ಚಿತ್ರೀಕರಣ ಈಗಾಗಲೇ ಆರಂಭವಾಗಿದ್ದು, ಮೈಸೂರು, ಹಾಸನ, ಮಂಡ್ಯದಲ್ಲಿ ಎರಡು ಹಂತಗಳಲ್ಲಿ ಚಿತ್ರೀಕರಣ ನಡೆಯಲು ಚಿತ್ರತಂಡ ಯೋಜನೆ ರೂಪಿಸಿದೆ.

ವಾರಣಾದಿ ಸಿನಿ ಬ್ಯಾನರ್ ನಿರ್ಮಿಸಿರುವ ಈ ಚಿತ್ರದಲ್ಲಿ ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಗಿಲ್ಲಿ ನಟ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಬಾಲನಟಿಯಾಗಿ ಫೇಮಸ್​ ಆಗಿದ್ದ ರೀಯಾ ಭಾಸ್ಕರ್ ಅವರು ಗೌಡರ ಮಗಳ ಪಾತ್ರದಲ್ಲಿ ನಟಿಸಿದ್ದಾರೆ.

ಜಗದೀಶ್ ಕೊಪ್ಪ, ಮುನಿ, ಸಂಜಯ್ ಪಾಟೀಲ್, ಟೋನಿತಾ, ಮೈತ್ರಿ, ರಾಜವ್ ಬಾಲೆ, ತೇಜು ಮೈಸೂರು, ಪ್ರಕಾಶ್ ಬಾನಾಳು, ಸುರೇಶ್ ಕೋಲಾರ, ರಂಗರಾಜು ಹುಲಿದುರ್ಗ ಸೇರಿದಂತೆ ಹಲವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಚಿತ್ರಕ್ಕೆ ಚಕ್ರಿ ಕಿರಿಸಾವೆ ಸಂಭಾಷಣೆ ಬರೆದಿದ್ದರೆ, ವಿಶಾಲ್ ಆಲಾಪ್ ಅವರು ಸಂಗೀತ ನೀಡುತ್ತಿದ್ದಾರೆ. ದೀಪಕ್ ಕುಮಾರ್ ಜಿ.ಕೆ. ಅವರು ಛಾಯಾಗ್ರಹಣದ ಜವಾಬ್ದಾರಿ ಹೊತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!