ನೃತ್ಯ ನಿರ್ದೇಶಕ ಜಾನಿ 
ಸಿನಿಮಾ ಸುದ್ದಿ

ಲೈಂಗಿಕ ದೌರ್ಜನ್ಯ ಪ್ರಕರಣ: ಜನಪ್ರಿಯ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಬಂಧನ

ಇನ್ನೊಂದು ಕಡೆಗೆ ಜಾನಿ ಮಾಸ್ಟರ್ ವಿರುದ್ಧ ಪೋಕ್ಸೊ ಪ್ರಕರಣ ಕೂಡ ಇವರ ಮೇಲೆ ದಾಖಲಾಗಿದೆ. ಮಹಿಳಾ ನೃತ್ಯ ನಿರ್ದೇಶಕಿಯೊಬ್ಬರು ಚಿತ್ರೀಕರಣದ ವೇಳೆ ಜಾನಿ ಮಾಸ್ಟರ್ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿ ದೂರು ನೀಡಿದ್ದರು.

ಲೈಂಗಿಕ ದೌರ್ಜನ್ಯ ಪ್ರಕರಣದ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ಜನಪ್ರಿಯ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಅವರನ್ನು ಬಂಧಿಸಲಾಗಿದೆ. ಯುವತಿ ಜಾನಿ ಮಾಸ್ಟರ್ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು.

ಯುವತಿಯ ದೂರಿನ ಹಿನ್ನೆಲೆಯಲ್ಲಿ ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ವಿರುದ್ಧ ಜೀರೋ ಎಫ್‌ಐಆರ್ ದಾಖಲಾಗಿತ್ತು. ಆ ಬಳಿಕ ನೃತ್ಯ ನಿರ್ದೇಶಕ ತಲೆ ಮರೆಸಿಕೊಂಡಿದ್ದರು. ಮೂರು ದಿನಗಳಿಂದ ಹುಡುಕಾಡುತ್ತಿದ್ದ ಹೈದರಾಬಾದ್‌ನ ಪೊಲೀಸರು ನಾಲ್ಕು ತಂಡಗಳಾಗಿ ಶೋಧ ನಡೆಸಿದ್ದರು. ಇಂದು (ಸೆಪ್ಟೆಂಬರ್ 19) ಬೆಳಗ್ಗೆ ಗೋವಾದಲ್ಲಿ ಹೈದರಾಬಾದ್‌ ಪೊಲೀಸರು ಬಂಧಿಸಿದ್ದಾರೆ. ಇನ್ನೊಂದು ಕಡೆಗೆ ಜಾನಿ ಮಾಸ್ಟರ್ ವಿರುದ್ಧ ಪೋಕ್ಸೊ ಪ್ರಕರಣ ಕೂಡ ಇವರ ಮೇಲೆ ದಾಖಲಾಗಿದೆ. ಮಹಿಳಾ ನೃತ್ಯ ನಿರ್ದೇಶಕಿಯೊಬ್ಬರು ಚಿತ್ರೀಕರಣದ ವೇಳೆ ಜಾನಿ ಮಾಸ್ಟರ್ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿ ದೂರು ನೀಡಿದ್ದರು. ಅಲ್ಲದೆ ಔಟ್ ಡೋರ್ ಶೂಟಿಂಗ್ ವೇಳೆ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾಗಿ ಆರೋಪ ಮಾಡಿದ್ದಾರೆ.

ಈ ದೂರಿನ ಬೆನ್ನಲ್ಲೇ ಪೊಲೀಸರು ಜಾನಿ ಮಾಸ್ಟರ್ ವಿರುದ್ಧ ಸೆಕ್ಷನ್ 376, 506, 323 (2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ನರಸಿಂಗಿ ಠಾಣೆಯ ಪೊಲೀಸರಿಂದ ತನಿಖೆ ನಡೆಸಲಾಗುತ್ತಿದ್ದು, ಝೀರೊ ಎಫ್‌ಐಆರ್ ಕೂಡ ದಾಖಲಾಗಿತ್ತು. ಜಾನಿ ಮಾಸ್ಟರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ ಯುವತಿಯನ್ನು ವಿಚಾರಣೆ ಮಾಡಿದ್ದರು. ಆಕೆಯ ಮನೆಯಲ್ಲಿಯೇ ಸುಮಾರು ಮೂರು ಗಂಟೆಗಳಿಗೂ ಅಧಿಕ ಕಾಲ ವಿಚಾರಣೆ ನಡೆಸಿ, ಘಟನೆ ಬಗ್ಗೆ ಮಾಹಿತಿ ಕಲೆ ಹಾಕಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಯೋಗೀಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್‌; ಅ.27ಕ್ಕೆ ವಿಚಾರಣೆ ಮುಂದೂಡಿಕೆ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!