ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಸಿನಿಮಾ ಸುದ್ದಿ

ಪ್ರಭು ಮುಂಡ್ಕುರ್ ಅಭಿನಯದ 'ಮರ್ಫಿ' ಚಿತ್ರ ಅಕ್ಟೋಬರ್ 18ಕ್ಕೆ ತೆರೆಗೆ

ಚಿತ್ರದ ಶೂಟಿಂಗ್ ಮುಗಿಸಿರುವ ಪ್ರಚಾರದಲ್ಲಿ ಬ್ಯುಸಿಯಾಗಿರುವ ಚಿತ್ರ ತಂಡ, ಮರ್ಫಿ ಚಿತ್ರದ ಡ್ಯಾನ್ಸಿಂಗ್ ನಂಬರ್ ಹಾಡನ್ನು ಅನಾವರಣಗೊಳಿಸಿದೆ.

ಮರ್ಫಿ ಚಿತ್ರದ ಸ್ಟಿಲ್.
Manjula VN
Updated On : 23 Sept 2024, 1:17 pm

ನಟ ಪ್ರಭು ಮುಂಡ್ಕರ್ ನಟನೆಯ ಮರ್ಫಿ ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು, ಅಕ್ಟೋಬರ್ 18ಕ್ಕೆ ಚಿತ್ರ ತೆರೆಗೆ ಬರುತ್ತಿದೆ.

ಚಿತ್ರದ ಶೂಟಿಂಗ್ ಮುಗಿಸಿರುವ ಪ್ರಚಾರದಲ್ಲಿ ಬ್ಯುಸಿಯಾಗಿರುವ ಚಿತ್ರ ತಂಡ, ಮರ್ಫಿ ಚಿತ್ರದ ಡ್ಯಾನ್ಸಿಂಗ್ ನಂಬರ್ ಹಾಡನ್ನು ಅನಾವರಣಗೊಳಿಸಿದೆ.

ಮೊಗಾಚಿ ಎಂಬ ಹಾಡಿಗೆ ಧನಂಜಯ್ ರಂಜನ್ ಪದಗೀಚಿದ್ದು, ಅರ್ಜುನ್ ಜನ್ಯ ಟ್ಯೂನ್ ಹಾಕಿದ್ದಾರೆ. ಗೋವಾದ ಪೋರ್ಚುಗೀಸ್ ಮತ್ತು ಕೊಂಕಣಿ ಸಂಸ್ಕೃತಿಯನ್ನು ಬಿಂಬಿಸಿರುವ ಹಾಡಿಗೆ ರಜತ್ ಹೆಗ್ಡೆ ಮತ್ತು ನಾಡಿಯಾ ರೆಬೆಲೊ ಧ್ವನಿಯಾಗಿದ್ದಾರೆ. ಮಾಧುರಿ ಪರಶುರಾಮ್ ನೃತ್ಯ ಸಂಯೋಜನೆ ಹಾಡಿನ ತೂಕ ಹೆಚ್ಚಿಸಿದೆ.

Advertisement

Advertisement

400 ವರ್ಷಗಳಷ್ಟು ಹಳೆಯದಾದ ಗೋವಾದ ಬಂಗಲೆಯ ಹಿನ್ನೆಲೆಯಲ್ಲಿ ನಿರ್ಮಿಸಲಾದ ಈ ಹಾಡು ಗೋವಾದ ಜೀವನದ ಸಾರವನ್ನು ಬಿಂಬಿಸುತ್ತಿದೆ.

Also Read

ಪ್ರೀತಿ, ಭಾವನೆ, ನೆನಪುಗಳ ಮೇಲೆ ಸಾಗುವ ಚಿತ್ರ 'ಮರ್ಫಿ'!

ರೊಮ್ಯಾಂಟಿಕ್ ಡ್ರಾಮಾ ಎಳೆಯ ಸಿನಿಮಾದಲ್ಲಿ ದೊಡ್ಡ ತಾರಾಬಳಗ ಇದೆ. ಪ್ರಭು ಮುಂಡ್ಕುರ್ ಜೊತೆ ರೋಶಿನಿ ಪ್ರಕಾಶ್, ಇಳಾ ವೀರಮಲ್ಲ ಹಾಗೂ ದತ್ತಣ್ಣ, ಅಶ್ವಿನಿ ರಾವ್ ಪಲ್ಲಕ್ಕಿ, ಮಹಾಂತೇಶ್ ಹೀರೇಮಠ್, ರಾಮಪ್ರಸಾದ್ ಬಾಣಾವರ ಸೇರಿದಂತೆ ಹಲವರು ಬಣ್ಣ ಹಚ್ಚಿದ್ದಾರೆ.

ಸೋಮಣ್ಣ ಟಾಕೀಸ್ ಮತ್ತು ವರ್ಣಸಿಂಧು ಸ್ಟುಡಿಯೋಸ್ ಬ್ಯಾನರ್ ಅಡಿ ಮರ್ಫಿ ಸಿನಿಮಾವನ್ನು ರಾಮ್ ಕೋ ಸೋಮಣ್ಣ ಹಾಗೂ ಬಿಎಸ್‌ಪಿ ವರ್ಮಾ ನಿರ್ಮಾಣ ಮಾಡಿದ್ದಾರೆ. ಸೆನ್ಸಾರ್ ಪರೀಕ್ಷೆಯಲ್ಲಿ ಯು ಸರ್ಟಿಫಿಕೇಟ್​ನೊಂದಿಗೆ ಸಿನಿಮಾ ಪಾಸಾಗಿದೆ. ಸಿನಿಮಾದಲ್ಲಿ ಎಂಟರ್​ಟೈನ್ಮೆಂಟ್​ ಜೊತೆ ಜೊತೆಗೆ ಎಮೋಷನಲ್ ಅಂಶಗಳನ್ನೂ ಸಹ ಅಚ್ಚುಕಟ್ಟಾಗಿ ಕಟ್ಟಿ ಕೊಡಲಾಗಿದ್ದು, ಮನೆಮಂದಿ ಕುಳಿತು ನೋಡುವಂತಹ ಸಿನಿಮಾ ಎನ್ನುವುದು ಚಿತ್ರತಂಡದ ಅಭಿಪ್ರಾಯ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments