ಸುದರ್ಶನ್ ಮತ್ತು ದರ್ಶನ್  
ಸಿನಿಮಾ ಸುದ್ದಿ

ಹಿರಿಯ ನಟ ಸುದರ್ಶನ್ ಪತ್ನಿಯ ನೆರವಿಗೆ ನಿಂತ ದರ್ಶನ್‌ : ಶೈಲಶ್ರೀ ಆಶ್ರಮದ ಖರ್ಚು-ವೆಚ್ಚ ಭರಿಸುತ್ತಿರುವ ದಾಸ

ಕನ್ನಡ ಚಿತ್ರರಂಗಕ್ಕೆ ಭದ್ರ ಬುನಾದಿ ಹಾಕಿಕೊಟ್ಟ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ಆರ್.ಎನ್. ನಾಗೇಂದ್ರರಾಯರ ಮುದ್ದಿನ ಸೊಸೆ ಇಲ್ಲೇ ಈ ಕಾಂಕ್ರೀಟ್ ಕಾಡಿನ ನಡುವೆ ಕಳೆದು ಹೋಗಿದ್ದಾರೆ.

ಬೆಂಗಳೂರು: ನಟ ದರ್ಶನ್‌, ಆಶ್ರಮದ ಪಾಲಾಗಿದ್ದ ಹಿರಿಯ ನಟ ಸುದರ್ಶನ್‌ ಪತ್ನಿ ಶೈಲಶ್ರೀ ಅವರ ನೆರವಿಗೆ ನಿಂತಿದ್ದು, ಯಾರೂ ಇಲ್ಲದೇ ಆಶ್ರಮ ಪಾಲಾಗಿದ್ದ ಅವರ ಖರ್ಚುಗಳನ್ನು ನೋಡಿಕೊಳ್ಳುತ್ತಿದ್ದಾರೆ.

ಈ ಬಗ್ಗೆ ನಿರ್ದೇಶಕ ಹಾಗೂ ಹಿರಿಯ ಪತ್ರಕರ್ತ ಗಣೇಶ್‌ ಕಾಸರಗೋಡು ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಒಂದು ಕಾಲದಲ್ಲಿ ಕನ್ನಡ ಚಿತ್ರರಂಗವನ್ನಾಳಿದ ಕಲಾವಿದರ ಕುಟುಂಬದ ಕುಡಿಯೊಂದು ನೆಲೆ ಬೆಲೆಯಿಲ್ಲದೇ ಇದೇ ಬೆಂಗಳೂರಿನ ಆಶ್ರಮಕ್ಕೆ ಸೇರಿಕೊಂಡು ಆಶ್ರಯ ಪಡೆದಿರುವ ದುರಂತ ಸುದ್ದಿಯೊಂದರ ಹಿಂದೆ ಬಿದ್ದಿದ್ದೇನೆ.

ಕನ್ನಡ ಚಿತ್ರರಂಗಕ್ಕೆ ಭದ್ರ ಬುನಾದಿ ಹಾಕಿಕೊಟ್ಟ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ಆರ್.ಎನ್. ನಾಗೇಂದ್ರರಾಯರ ಮುದ್ದಿನ ಸೊಸೆ ಇಲ್ಲೇ ಈ ಕಾಂಕ್ರೀಟ್ ಕಾಡಿನ ನಡುವೆ ಕಳೆದು ಹೋಗಿದ್ದಾರೆ. ಸುದರ್ಶನ್ ಅವರ ಸಾವಿನ ನಂತರ ದಿಕ್ಕಿಲ್ಲದ ಪರದೇಶಿಯಾಗಿ ಏಕಾಂಗಿ ಬದುಕು ಕಂಡುಕೊಂಡಿದ್ದ ಶೈಲಶ್ರೀ ಮೇಡಂ ಸೈಲೆಂಟ್ ಆಗಿ ಆಶ್ರಮ ಸೇರಿಕೊಂಡಿರುವ ಹೃದಯ ವಿದ್ರಾವಕ ಸುದ್ದಿಯೊಂದು ಬಂದಿದೆ.

ಈ ಮೊದಲು ಅಪಾರ್ಟ್​ಮೆಂಟ್ ಒಂದರಲ್ಲಿ ಶೈಲಶ್ರೀ ಅವರು ವಾಸವಿದ್ದರು. ಆದರೆ, ಅದರ ಮಾಲೀಕರು ಬಿಲ್ಡಿಂಗ್ ನೆಲಸಮ ಮಾಡಿದ್ದರಿಂದ ಶೈಲಶ್ರೀ ಅವರು ಬೇರೆ ನೆಲೆ ಕಂಡುಕೊಳ್ಳಬೇಕಿತ್ತು. ಆಗ ಹಿರಿಯ ನಟಿಯೊಬ್ಬರು ಶೈಲಶ್ರೀ ಸಹಾಯಕ್ಕೆ ಬಂದರು. ಅವರ ಸಲಹೆಯಂತೆ ಆಶ್ರಮ ಸೇರಿದರು. ಆರಂಭದಲ್ಲಿ ಖರ್ಚು ವೆಚ್ಚಗಳನ್ನು ಹಿರಿಯ ನಟಿ ನೋಡಿಕೊಳ್ಳುತ್ತಿದ್ದರು. ಆದರೆ, ತಿಂಗಳುಗಳು ಉರುಳಿದಂತೆ ಇದು ಸಾಧ್ಯವಾಗಿಲ್ಲ. ಆಗ ಸಹಾಯಕ್ಕೆ ಬಂದಿದ್ದು ದರ್ಶನ್. ಶೈಲಶ್ರೀ ಅವರ ಕೊನೆಗಾಲದವರೆಗೂ ಸಹಾಯ ಮಾಡಲು ದರ್ಶನ್ ಒಪ್ಪಿ ಮುಂದೆ ಬಂದಿದ್ದಾರೆ ಎಂದು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

SCROLL FOR NEXT