ನಿಮ್ದೆ ಕಥೆ ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

'ಲವ್ ಮಾಕ್‌ಟೇಲ್' ಖ್ಯಾತಿಯ ಅಭಿಲಾಷ್ ದಳಪತಿ, ರಾಷಿಕಾ ಶೆಟ್ಟಿ ನಟನೆಯ 'ನಿಮ್ದೆ ಕಥೆ' ನಾಳೆ ತೆರೆಗೆ

ಈ ಚಿತ್ರದಲ್ಲಿ ಸಿಹಿ ಕಹಿ ಚಂದ್ರು, 'ಕಾಮಿಡಿ ಕಿಲಾಡಿಗಳು' ರಿಯಾಲಿಟಿ ಶೋ ಖ್ಯಾತಿಯ ಮನೋಹರ್ ಗೌಡ, ಕೆವಿ ಮಂಜಯ್ಯ ಮತ್ತು ಜ್ಯೋತಿ ಮಾರೂರ್ ಮುಂತಾದವರು ನಟಿಸಿದ್ದಾರೆ.

ರಾಘವೇಂದ್ರ ರಾಜ್ ನಿರ್ದೇಶಿಸಿರುವ ಚೊಚ್ಚಲ ಚಿತ್ರ 'ನಿಮ್ದೇ ಕಥೆ' ಏಪ್ರಿಲ್ 4 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಚಿತ್ರದಲ್ಲಿ 'ಲವ್ ಮಾಕ್‌ಟೇಲ್' ಚಿತ್ರದ ಪಾತ್ರಕ್ಕೆ ಹೆಸರುವಾಸಿಯಾದ ಅಭಿಲಾಷ್ ದಳಪತಿ ಮತ್ತು ಯೋಗರಾಜ್ ಭಟ್ ನಿರ್ದೇಶನದ 'ಮನದ ಕಡಲು' ಚಿತ್ರದಲ್ಲಿ ನಟಿಸಿದ್ದ ರಾಷಿಕಾ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಇದು ಹಾಸ್ಯಮಯ, ಭಾವನಾತ್ಮಕ ಹಾಗೂ ಸ್ವಲ್ಪ ಸಸ್ಪೆನ್ಸ್ ಹೊಂದಿರುವ ಚಿತ್ರ. ಬೆಂಗಳೂರು ಮತ್ತು ಮೈಸೂರು ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ. ಇದು ವೀಕ್ಷಕರಿಗೆ ಮನರಂಜನೆಯ ರಸದೌತಣ ನೀಡುತ್ತದೆ ಎಂದು ನಿರ್ದೇಶಕರು ಹೇಳುತ್ತಾರೆ.

ಈ ಚಿತ್ರದಲ್ಲಿ ಸಿಹಿ ಕಹಿ ಚಂದ್ರು, 'ಕಾಮಿಡಿ ಕಿಲಾಡಿಗಳು' ರಿಯಾಲಿಟಿ ಶೋ ಖ್ಯಾತಿಯ ಮನೋಹರ್ ಗೌಡ, ಕೆವಿ ಮಂಜಯ್ಯ ಮತ್ತು ಜ್ಯೋತಿ ಮಾರೂರ್ ಮುಂತಾದವರು ನಟಿಸಿದ್ದಾರೆ.

ಶ್ರೀನಿವಾಸ್ ರೆಡ್ಡಿ ಮತ್ತು ಅರವಿಂದ್ ಯುಎಸ್ ನಿರ್ಮಿಸಿರುವ 'ನಿಮ್ದೆ ಕಥೆ' ಚಿತ್ರಕ್ಕೆ ಪ್ರವೀಣ್ ನಿಕೇತನ್ ಅವರ ಸಂಗೀತ ಸಂಯೋಜನೆ, ಪ್ರಶಾಂತ್ ಸಾಗರ್ ಅವರ ಛಾಯಾಗ್ರಹಣ ಮತ್ತು ಸುನಿಲ್ ಎಸ್ ಅವರ ಸಂಕಲನವಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ