ಪಾರು ಪಾರ್ವತಿ ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

ಬಿಗ್ ಬಾಸ್ ಖ್ಯಾತಿಯ ದೀಪಿಕಾ ದಾಸ್ ನಟನೆಯ 'ಪಾರು ಪಾರ್ವತಿ' ಪ್ರೈಮ್ ವಿಡಿಯೋದಲ್ಲಿ ಲಭ್ಯ!

ಜನವರಿ 31ರಂದು ಕರ್ನಾಟಕದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಈ ಚಿತ್ರ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆಯಿತು.

ರೋಹಿತ್ ಕೀರ್ತಿ ನಿರ್ದೇಶನದ ಬಿಗ್ ಬಾಸ್ ಮಾಜಿ ಸ್ಪರ್ಧಿ ಮತ್ತು ನಟಿ ದೀಪಿಕಾ ದಾಸ್ ಅಭಿನಯದ ಇತ್ತೀಚೆಗಷ್ಟೇ ಬಿಡುಗಡೆಯಾದ '#ಪಾರು ಪಾರ್ವತಿ' ಚಿತ್ರ ಇದೀಗ ಪ್ರೈಮ್ ವಿಡಿಯೋದಲ್ಲಿ ವೀಕ್ಷಣೆಗೆ ಲಭ್ಯವಿದೆ. ದೀಪಿಕಾ ದಾಸ್ ಹೊರತಾಗಿ, ಚಿತ್ರದ ತಾರಾಗಣದಲ್ಲಿ ಪೂನಂ ಸಿರ್ನಾಯಕ್ ಮತ್ತು ಫವಾಜ್ ಅಶ್ರಫ್ ಪ್ರಮುಖ ಪಾತ್ರಗಳಲ್ಲಿದ್ದಾರೆ.

ಇದೊಂದು ಪ್ರಯಾಣ ಆಧರಿತ ಚಿತ್ರವಾಗಿದ್ದು, ಬೆಂಗಳೂರು, ಗೋವಾ, ಮಹಾರಾಷ್ಟ್ರ, ರಾಜಸ್ಥಾನ ಮತ್ತು ಉತ್ತರಾಖಂಡದಾದ್ಯಂತ ಚಿತ್ರಿಸಲಾಗಿದೆ. #ಪಾರು ಪಾರ್ವತಿ ವಾಸ್ತವ ಮತ್ತು ಭಾವನಾತ್ಮಕ ಪ್ರಯಾಣವನ್ನು ಒಳಗೊಂಡಿದೆ. ವೈವಿಧ್ಯಮಯ ಭೂದೃಶ್ಯಗಳು ಮತ್ತು ಆಂತರಿಕ ರೂಪಾಂತರಗಳನ್ನು ಸೆರೆಹಿಡಿಯುತ್ತದೆ.

ಚಿತ್ರದ ಟ್ರೇಲರ್ ಅನ್ನು ನಟ ಕಿಚ್ಚ ಸುದೀಪ್ ಬಿಡುಗಡೆ ಮಾಡಿ, ತಂಡಕ್ಕೆ ಶುಭ ಹಾರೈಸಿದ್ದರು. ಜನವರಿ 31ರಂದು ಕರ್ನಾಟಕದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಈ ಚಿತ್ರ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆಯಿತು.

Eighteen Thirty Six Pictures ಬ್ಯಾನರ್ ಅಡಿಯಲ್ಲಿ ಪಿಬಿ ಪ್ರೇಮನಾಥ್ ನಿರ್ಮಿಸಿರುವ ಈ ಚಿತ್ರಕ್ಕೆ ಅಬಿನ್ ರಾಜೇಶ್ ಅವರ ಛಾಯಾಗ್ರಹಣ, ಆರ್. ಹರಿ ಅವರ ಸಂಗೀತ ಮತ್ತು ಸಿಕೆ ಕುಮಾರ್ ಅವರ ಸಂಕಲನವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ ಶಿವಕುಮಾರ್, ಪರಸ್ಪರ ಆಲಿಂಗನ..!

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

SCROLL FOR NEXT