ಸಿನಿಮಾ ಸುದ್ದಿ

ಮಚ್ಚು ಹಿಡಿದು ರೀಲ್ಸ್ ಪ್ರಕರಣ: ಮತ್ತೆ ಪರಪ್ಪನ ಅಗ್ರಹಾರ ಜೈಲು ಸೇರಿದ ರಜತ್

ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಜತ್ ಮತ್ತೆ ಪರಪ್ಪನ ಅಗ್ರಹಾರ ಜೈಲು ಸೇರಿಸಿದ್ದಾರೆ. ಹೌದು ಕೆಲ ಜೈಲಿನಲ್ಲಿ ಇದ್ದು ಹೊರಬಂದಿದ್ದ ರಜತ್ ಜಾಮೀನಿನ ಷರತ್ತುಗಳನ್ನು ಪೂರೈಸದ ಕಾರಣ...

ಬೆಂಗಳೂರು: ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಜತ್ ಮತ್ತೆ ಪರಪ್ಪನ ಅಗ್ರಹಾರ ಜೈಲು ಸೇರಿಸಿದ್ದಾರೆ. ಹೌದು ಕೆಲ ಜೈಲಿನಲ್ಲಿ ಇದ್ದು ಹೊರಬಂದಿದ್ದ ರಜತ್ ಜಾಮೀನಿನ ಷರತ್ತುಗಳನ್ನು ಪೂರೈಸದ ಕಾರಣ ಇಂದು ಪೊಲೀಸರು ಮತ್ತೆ ಬಂಧಿಸಿ, ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದರು.

ವಿಚಾರಣೆ ನಡೆಸಿದ ಕೋರ್ಟ್ ರಜತ್​ಗೆ ಏಪ್ರಿಲ್ 29ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ಮಾಜಿ ಬಿಗ್​ಬಾಸ್ ಸ್ಪರ್ಧಿಗಳಾದ ರಜತ್ ಮತ್ತು ವಿನಯ್ ಅವರು ಇತ್ತೀಚೆಗೆ ಮಚ್ಚು ಹಿಡಿದುಕೊಂಡು ರೀಲ್ಸ್ ಮಾಡಿದ್ದರು. ವಿಡಿಯೋ ವೈರಲ್ ಆಗಿದ್ದು ಸಾರ್ವಜನಿಕವಾಗಿ ತೀವ್ರ ಆಕ್ರೋಶಕ್ಕೆ ಕಾರಣವಾಯಿತು. ಹೀಗಾಗಿ ಪೊಲೀಸರು ಶಸ್ತ್ರಾಸ್ತ್ರ ಕಾಯ್ದೆ ಅಡಿ ದೂರು ದಾಖಲಿಸಿಕೊಂಡು ಇಬ್ಬರನ್ನೂ ಬಂಧಿಸಿದ್ದರು. ಕೆಲ ದಿನ ಜೈಲಿನಲ್ಲಿದ್ದ ವಿನಯ್ ಹಾಗೂ ರಜತ್, ಜಾಮೀನಿನ ಮೇಲೆ ಹೊರಬಂದಿದ್ದರು.

ಜಾಮೀನು ನೀಡಿದ್ದ ಕೋರ್ಟ್ ವಿಚಾರಣೆಗೆ ಖುದ್ದು ಹಾಜರಾತಿ ಸೇರಿದಂತೆ ಕೆಲ ಷರತ್ತುಗಳನ್ನು ವಿಧಿಸಿತ್ತು. ಆದರೆ ರಜತ್, ವಿಚಾರಣೆಗೆ ಹಾಜರಾಗದ ಕಾರಣ ಅವರನ್ನು ಪೊಲೀಸರು ಬಂಧಿಸಿ ಬೆಂಗಳೂರಿನ 24ನೇ ಎಸಿಜೆಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ನ್ಯಾಯಾಲಯವು ಏಪ್ರಿಲ್ 29ರ ವರೆಗೆ ರಜತ್​ಗೆ ನ್ಯಾಯಾಂಗ ಬಂಧನ ವಿಧಿಸಿದ್ದು, ಮುಂದಿನ ಎಂಟು ದಿನಗಳ ಕಾಲ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರಬೇಕಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾದಿಂದ ತೈಲ ಆಮದು: ಭಾರತದ ಮೇಲೆ ಶೇ.100 ರಷ್ಟು ಸುಂಕ ವಿಧಿಸಲು ಅಮೆರಿಕ ಸಂಸದರ ಪ್ರಸ್ತಾಪ!

'ತೀವ್ರ ಧ್ರುವೀಕರಣಗೊಂಡ ಜಗತ್ತು, ಪಶ್ಚಿಮ ಏಷ್ಯಾ ಸಂಘರ್ಷದ ನಡುವೆಯೂ ಬ್ರಿಕ್ಸ್ ಶೃಂಗಸಭೆ ಯಶಸ್ವಿ-ಎಸ್ ಜೈಶಂಕರ್

ಶೇ. 20ರಷ್ಟು ಅಲ್ಪ ಸಂಖ್ಯಾತರು ಸಸ್ಯಾಹಾರಿಗಳು: ಬ್ರಿಕ್ಸ್ ಸಸ್ಯಾಹಾರಿ ಮೆನು ಸಂಬಂದ ಓವೈಸಿ ಪ್ರತಿಕ್ರಿಯೆ

ಸಮುದ್ರ ಅಡ್ಡವಿರದಿದ್ದರೆ ನೆಹರೂ- ಗಾಂಧಿ ಕುಟುಂಬ ಅರಬ್‌ ದೇಶಗಳಲ್ಲೂ ಚುನಾವಣೆಗೆ ನಿಲ್ತಿತ್ತು: ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್!

ಇನ್ಸ್ ಪೆಕ್ಟರ್ ಧನಂಜಯ್ ಧಮ್ಕಿಗೆ ಸೆಡ್ಡು: ಪೊಲೀಸ್ ಠಾಣೆಯ 200 ಮೀಟರ್ ಅಂತರದಲ್ಲೇ ಮಹಾಗಣಪತಿ ಪ್ರತಿಷ್ಠಾಪನೆ! ಶೋಭಾಯಾತ್ರೆಗೆ ಸಜ್ಜು