ಅನುರಾಗ್‌ ಕಶ್ಯಪ್‌ 
ಸಿನಿಮಾ ಸುದ್ದಿ

ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜನೆ ಮಾಡುತ್ತೇನೆ, ಏನಿವಾಗ? ನಿರ್ದೇಶಕ ಅನುರಾಗ್‌ ಕಶ್ಯಪ್‌ ಉದ್ಧಟತನ

ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜನೆ ಮಾಡುತ್ತೇನೆ, ಏನಿವಾಗ?'' ಎಂದು ಅವರು ಸೋಶೀಯಲ್‌ ಮೀಡಿಯಾದಲ್ಲಿ ಪ್ರಶ್ನಿಸುವ ಮೂಲಕ ಉದ್ಧಟತನ ಮೆರೆದಿದ್ದಾರೆ.

ಮುಂಬೈ: ಬಾಲಿವುಡ್‌ ನಿರ್ದೇಶಕ, ನಟ ಅನುರಾಗ್‌ ಕಶ್ಯಪ್‌ ಮತ್ತು ವಿವಾದಕ್ಕೆ ಬಿಟ್ಟಿರಲಾರದ ನಂಟು. ಆಗಾಗ ತಮ್ಮ ಹೇಳಿಕೆಯಿಂದ ವಿವಾದ ಸೃಷ್ಟಿಸುವ ಅವರು ಇದೀಗ ಮತ್ತೊಮ್ಮೆ ಹಲವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜನೆ ಮಾಡುತ್ತೇನೆ, ಏನಿವಾಗ?'' ಎಂದು ಅವರು ಸೋಶೀಯಲ್‌ ಮೀಡಿಯಾದಲ್ಲಿ ಪ್ರಶ್ನಿಸುವ ಮೂಲಕ ಉದ್ಧಟತನ ಮೆರೆದಿದ್ದಾರೆ. ಸದ್ಯ ಅವರ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಸೋಶಿಯಲ್‌ ಮೀಡಿಯಾದಲ್ಲಿ ಅನುರಾಗ್‌ ಕಶ್ಯಪ್‌ನನ್ನು ಬಂಧಿಸಿ ಎನ್ನುವ ಕೂಗು ವ್ಯಾಪಕವಾಗಿ ಕೇಳಿ ಬಂದಿದೆ. ಜತೆಗೆ ದೂರೂ ದಾಖಲಾಗಿದೆ.

ಜಾತಿ ವ್ಯವಸ್ಥೆ ವಿರುದ್ದ ಹೋರಾಡಿದ ಮಹಾರಾಷ್ಟ್ರದ ಸಾಮಾಜಿಕ ಕಾರ್ಯಕರ್ತರಾದ ಜ್ಯೋತಿರಾವ್‌ ಫುಲೆ ಮತ್ತು ಸಾವಿತ್ರಿಭಾಯಿ ಫುಲೆ ಅವರ ಜೀವನವನ್ನಾಧರಿಸಿ ಹಿಂದಿಯಲ್ಲಿ 'ಫುಲೆ' ಚಿತ್ರ ನಿರ್ಮಾಣವಾಗಿದೆ. ರೋಹನ್‌ ಸಿಪ್ಪಿ ನಿರ್ದೇಶನದ ಈ ಚಿತ್ರದಲ್ಲಿನ ವಿವದಾತ್ಮಕ, ಜಾತಿ ವ್ಯವಸ್ಥೆಯನ್ನು ಸೂಚಿಸುವ ಭಾಗಗಳನ್ನು ತೆಗೆದು ಹಾಕುವಂತೆ ಸೆನ್ಸಾರ್‌ ಮಂಡಳಿ ಸೂಚಿಸಿತ್ತು.

ಇದರಿಂದ ಏ. 11ರಂದು ರಿಲೀಸ್‌ ಆಗಬೇಕಿದ್ದ ಚಿತ್ರದ ಬಿಡುಗಡೆಯನ್ನು ಮುಂದೂಡಲಾಗಿದೆ. ಈ ಬಗ್ಗೆ ಕಿಡಿ ಕಾರಿದ ಅನುರಾಗ್‌ ಕಶ್ಯಪ್‌ ನಾಲಗೆ ಹರಿಯಬಿಟ್ಟಿದ್ದಾರೆ. ಈ ಸಂಬಂಧ ಅನುರಾಗ್ ಕಶ್ಯಪ್ ವಿರುದ್ಧ ದೂರು ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!