ಸಿನಿಮಾ ಸುದ್ದಿ

ಹೋಟೆಲ್ ನ 3ನೇ ಮಹಡಿಯಿಂದ ಜಿಗಿದು ಪರಾರಿಯಾಗಿದ್ದ ಮಲಯಾಳಂ ಖ್ಯಾತ ನಟ ಶೈನ್ ಟಾಮ್ ಚಾಕೊ ಬಂಧನ!

ಚಾಕೊ ಶನಿವಾರ ಕೊಚ್ಚಿ ನಗರ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾದರು. ಉನ್ನತ ಪೊಲೀಸ್ ಮೂಲಗಳ ಪ್ರಕಾರ, ನಟನಿಗೆ ಜಾಮೀನು ಸಿಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಕೊಚ್ಚಿ: ಮಾದಕವಸ್ತು ಪ್ರಕರಣದಲ್ಲಿ ಮಲಯಾಳಂ ಚಲನಚಿತ್ರ ನಟ ಶೈನ್ ಟಾಮ್ ಚಾಕೊ ಅವರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಕೊಚ್ಚಿಯ ಹೋಟೆಲ್ ಒಂದರಿಂದ ಮಾದಕವಸ್ತು ದಾಳಿಯ ಸಂದರ್ಭದಲ್ಲಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು ನಾಲ್ಕು ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ ಆತನ ಬಂಧನ ನಡೆದಿದೆ.

ಅವರ ವಿರುದ್ಧ ಮಾದಕ ದ್ರವ್ಯ ಮತ್ತು ಮನೋವಿಕೃತಿ ಪದಾರ್ಥಗಳ (NDPS) ಕಾಯ್ದೆಯ ಸೆಕ್ಷನ್ 27 (ಯಾವುದೇ ಮಾದಕ ದ್ರವ್ಯ ಅಥವಾ ಮನೋವಿಕೃತಿ ವಸ್ತುವಿನ ಸೇವನೆ) ಮತ್ತು 29ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವೈದ್ಯಕೀಯ ಪರೀಕ್ಷೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ನೀಡಿದ ಔಪಚಾರಿಕ ನೋಟಿಸ್‌ಗೆ ಪ್ರತಿಕ್ರಿಯೆಯಾಗಿ, ಚಾಕೊ ಶನಿವಾರ ಕೊಚ್ಚಿ ನಗರ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾದರು. ಉನ್ನತ ಪೊಲೀಸ್ ಮೂಲಗಳ ಪ್ರಕಾರ, ನಟನಿಗೆ ಜಾಮೀನು ಸಿಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಬುಧವಾರ ರಾತ್ರಿ, ಪೊಲೀಸ್ ತಂಡ ಹೋಟೆಲ್‌ಗೆ ಭೇಟಿ ನೀಡಿದ್ದ ವಿಚಾರ ತಿಳಿದ ಕೂಡಲೇ ಶೈನ್‌ ಮೂರನೇ ಮಹಡಿಯಲ್ಲಿರುವ ತನ್ನ ಕೋಣೆಯ ಕಿಟಕಿಯಿಂದ ಎರಡನೇ ಮಹಡಿಗೆ ಹಾರಿದ್ದರು. ನಂತರ ಅದೇ ಮಹಡಿಯಲ್ಲಿ ನಿರ್ಮಿಸಲಾದ 'ಈಜುಕೊಳ'ದ ಮೂಲಕ ಮೆಟ್ಟಿಲುಗಳ ಕೆಳಗೆ ಇಳಿದು ಓಡಿಹೋದನು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT