ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು 
ಸಿನಿಮಾ ಸುದ್ದಿ

Money laundering case: ಟಾಲಿವುಡ್ ಸೂಪರ್ ಸ್ಟಾರ್ Mahesh Babuಗೆ ಸಂಕಷ್ಟ, ED ನೋಟಿಸ್!

ಆಂಗ್ಲ ಪತ್ರಿಕೆಯೊಂದು ವರದಿ ಮಾಡಿರುವಂತೆ, 'ಸಾಯಿ ಸೂರ್ಯ ಡೆವಲಪರ್ಸ್ ಮತ್ತು ಸುರಾನಾ ಗ್ರೂಪ್ ಪ್ರಾರಂಭಿಸಿದ ರಿಯಲ್ ಎಸ್ಟೇಟ್ ಯೋಜನೆಗಳನ್ನು ಪ್ರಚಾರ ಮಾಡಲು ಮಹೇಶ್ ಅನುಮೋದನೆ ನೀಡಿದ್ದರು.

ಹೈದರಾಬಾದ್: ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬುಗೆ ಜಾರಿ ನಿರ್ದೇಶನಾಲಯ ಶಾಕ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.

ಮನಿಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಟಾಲಿವುಡ್​ನ ಸ್ಟಾರ್ ನಟ ಮಹೇಶ್ ಬಾಬುಗೆ (Mahesh Babu) ಜಾರಿ ನಿರ್ದೇಶನಾಲಯ (ಇಡಿ) ನೋಟಿಸ್ ಕೊಟ್ಟಿದೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಸುರಾನ ಗ್ರೂಪ್ ಮತ್ತು ಸಾಯಿಸೂರ್ಯ ಡೆವಲಪರ್ಸ್ ಪ್ರಕರಣದಲ್ಲಿ ಇದೇ 28ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ನಲ್ಲಿ ತಿಳಿಸಲಾಗಿದೆ.

ಈ ಸಂಸ್ಥೆಯ ಪ್ರಚಾರಕ್ಕಾಗಿ ಮಹೇಶ್ ಬಾಬು ಅವರು 3.4 ಕೋಟಿ ರೂ.ಗಳನ್ನು ತೆಗೆದುಕೊಂಡಿದ್ದರು ಎನ್ನಲಾಗಿದೆ.

ಆಂಗ್ಲ ಪತ್ರಿಕೆಯೊಂದು ವರದಿ ಮಾಡಿರುವಂತೆ, 'ಸಾಯಿ ಸೂರ್ಯ ಡೆವಲಪರ್ಸ್ ಮತ್ತು ಸುರಾನಾ ಗ್ರೂಪ್ ಪ್ರಾರಂಭಿಸಿದ ರಿಯಲ್ ಎಸ್ಟೇಟ್ ಯೋಜನೆಗಳನ್ನು ಪ್ರಚಾರ ಮಾಡಲು ಮಹೇಶ್ ಅನುಮೋದನೆ ನೀಡಿದ್ದರು.

ಮಹೇಶ್ ಬಾಬು ಈ ಜಾಹಿರಾತು ಒಪ್ಪಂದಕ್ಕಾಗಿ 5.9 ಕೋಟಿ ರೂ.ಗಳನ್ನು ಪಡೆದಿದ್ದು, ಈ ಪೈಕಿ ಚೆಕ್ ಮೂಲಕ 3.4 ಕೋಟಿ ರೂ.ಗಳು ಮತ್ತು ನಗದು ಮೂಲಕ 2.5 ಕೋಟಿ ರೂ.ಗಳನ್ನು ಪಡೆದಿದ್ದಾರೆ. ಈಗ, ನಗದು ಪಾವತಿ ಇಡಿ ಪರಿಶೀಲನೆಗೆ ಒಳಪಟ್ಟಿದೆ.

ವಂಚನೆ ಆರೋಪ

ಸುರಾನ ಗ್ರೂಪ್ ಮತ್ತು ಸಾಯಿಸೂರ್ಯ ಡೆವಲಪರ್ಸ್ ಸಂಸ್ಥೆಗಳ ವಿರುದ್ಧ ಇದೀಗ ವಂಚನೆ ಆರೋಪ ಕೇಳಿಬಂದಿದ್ದು, ತೆಲಂಗಾಣ ಪೊಲೀಸರು ಭಾಗ್ಯನಗರ ಪ್ರಾಪರ್ಟೀಸ್ ಲಿಮಿಟೆಡ್‌ನ ನರೇಂದ್ರ ಸುರಾನ ಮತ್ತು ಸಾಯಿ ಸೂರ್ಯ ಡೆವಲಪರ್ಸ್‌ನ ಸತೀಶ್ ಚಂದ್ರ ಗುಪ್ತಾ ವಿರುದ್ಧ ಹಲವು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.

ಈ ಇಬ್ಬರು ಅನಧಿಕೃತ ಲೇಔಟ್‌ಗಳಲ್ಲಿ ಪ್ಲಾಟ್‌ಗಳನ್ನು ಮಾರಾಟ ಮಾಡುವ ಮೂಲಕ, ಒಂದೇ ಪ್ಲಾಟ್‌ಗಳನ್ನು ಹಲವು ಬಾರಿ ಮರುಮಾರಾಟ ಮಾಡುವ ಮೂಲಕ ಮತ್ತು ನೋಂದಣಿಗಳ ಬಗ್ಗೆ ಸುಳ್ಳು ಭರವಸೆಗಳನ್ನು ನೀಡುವ ಮೂಲಕ ಖರೀದಿದಾರರನ್ನು ವಂಚಿಸಿದ್ದಾರೆ ಎಂಬ ಆರೋಪವಿದೆ.

ಇಡಿ ಶೋಧ

ಏಪ್ರಿಲ್ 16ರಂದು ಇಡಿ ಅಧಿಕಾರಿಗಳು ಹೈದರಾಬಾದ್‌ನಲ್ಲಿ ಶೋಧ ನಡೆಸಿದ್ದರು. ಸುರಾನ ಗ್ರೂಪ್ ಮತ್ತು ಸಾಯಿಸೂರ್ಯ ಡೆವಲಪರ್ಸ್ ಕಚೇರಿಗಳು ಹಾಗೂ ಈ ಕಂಪನಿಗಳ ಮುಖ್ಯಸ್ಥರ ಮನೆಗಳ ಮೇಲೆ ದಾಳಿ ನಡೆಸಿತ್ತು. ಇದಾದ ಬೆನ್ನಲ್ಲೇ ಇಡಿ ಆಧಿಕಾರಿಗಳು ಮಹೇಶ್ ಬಾಬುಗೆ ನೋಟಿಸ್ ಜಾರಿ ಮಾಡಿದ್ದು, ಏಪ್ರಿಲ್ 28ರ ಬೆಳಿಗ್ಗೆ 10:30ಕ್ಕೆ ಮಹೇಶ್ ಬಾಬು ಹೈದರಾಬಾದ್​ನಲ್ಲಿ ವಿಚಾರಣೆಗೆ ಹಾಜರಾಗಬೇಕಿದೆ.

ಸಂಕಷ್ಟ ತಂದ ಜಾಹಿರಾತು

ಮಹೇಶ್ ಬಾಬು ತಮ್ಮ ಪತ್ನಿ ಮತ್ತು ಮಕ್ಕಳೊಂದಿಗೆ ಸಾಯಿಸೂರ್ಯ ಡೆವಲಪರ್ಸ್ ಜಾಹೀರಾತಿನಲ್ಲಿ ನಟಿಸಿದ್ದರು. ಇದೇ ಜಾಹಿರಾತು ವಿಚಾರವಾಗಿ ಇದೀಗ ಮಹೇಶ್ ಬಾಬು ಅವರಿಗೆ ಸಂಕಷ್ಟ ಎದುರಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Cash for query: ಟಿಎಂಸಿ ಸಂಸದೆ ಮಹುವಾ ಮೊಯಿತ್ರಾಗೆ ಸಂಕಷ್ಟ; ಆರೋಪ ಪಟ್ಟಿ ಸಲ್ಲಿಸಲು ಸಿಬಿಐಗೆ ಲೋಕಪಾಲ ಅನುಮತಿ!

9 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಶಾಲಾ ಶಿಕ್ಷಕ, BJP ನಾಯಕ ಪದ್ಮರಾಜನ್ ಗೆ ಸಾಯೋವರೆಗೂ ಜೈಲು!

ಬಿಹಾರ ಚುನಾವಣೆ ಸೋಲಿನ ಬೆನ್ನಲ್ಲೇ 'ಮಹಾಘಟಬಂಧನ್' ಗೆ ತಿಲಾಂಜಲಿ; ಏಕಾಂಗಿ ಸ್ಪರ್ಧೆಗೆ ಕಾಂಗ್ರೆಸ್ 'ಮಹಾ' ನಿರ್ಧಾರ!

ಬಿಹಾರದಲ್ಲಿ ಟೈಗರ್‌ ಅಬಿ ಜಿಂದಾ ಹೈ (ನೇರ ನೋಟ)

ಬಿಹಾರ ಚುನಾವಣೆ: 3 ಲಕ್ಷ ಮತಗಳ ಏರಿಕೆ ಬಗ್ಗೆ ಕಾಂಗ್ರೆಸ್ ನಿಂದ ಮತ್ತೆ ಕಿರಿಕ್; ಚುನಾವಣಾ ಆಯೋಗ ಹೇಳಿದ್ದೇನು?

SCROLL FOR NEXT