ಸಿನಿಮಾ ಸುದ್ದಿ

ರೇಣುಕಸ್ವಾಮಿ ಕೊಲೆ ಕೇಸ್: ಜಾಮೀನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ಮುಂದೂಡಿದ 'ಸುಪ್ರೀಂ'; ದರ್ಶನ್‌ಗೆ 21 ದಿನ ರಿಲೀಫ್!

ರೇಣುಕಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ ಗೆ ಸೇರಿದಂತೆ ಇತರ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಸಲ್ಲಿಸಲಾಗಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸರ್ವೋಚ್ಛ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಮೇ 14ಕ್ಕೆ ಮುಂದೂಡಿದೆ.

ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ ಗೆ ಸೇರಿದಂತೆ ಇತರ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಸಲ್ಲಿಸಲಾಗಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸರ್ವೋಚ್ಛ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಮೇ 14ಕ್ಕೆ ಮುಂದೂಡಿದೆ. ಹೀಗಾಗಿ ದರ್ಶನ್‌ ತೂಗುದೀಪಗೆ 21 ದಿನ ರಿಲೀಫ್‌ ಸಿಕ್ಕಿದೆ.

ಬೆಂಗಳೂರು ನಗರ ಪೊಲೀಸರು ಹೈಕೋರ್ಟ್‌ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ಇಂದು ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮಹದೇವನ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ವಕೀಲರ ವಾದ ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ಮೇ 14ಕ್ಕೆ ಮುಂದೂಡಿದೆ.

ಕಳೆದ ಡಿಸೆಂಬರ್‌ 13ರಂದು ಕರ್ನಾಟಕ ಹೈಕೋರ್ಟ್ ದರ್ಶನ್, ಪವಿತ್ರಗೌಡ, ಪ್ರದೂಶ್, ಜಗದೀಶ್, ಲಕ್ಷ್ಮಣ್, ಅನುಕುಮಾರ್ ಹಾಗೂ ನಾಗರಾಜುಗೆ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ಬೆಂಗಳೂರು ನಗರ ಪೊಲೀಸರು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದರು. ಈ ಹಿಂದೆ ಏಪ್ರಿಲ್‌ 2ರಂದು ವಿಚಾರಣೆ ನಡೆಸಿದ್ದ ನ್ಯಾಯಪೀಠ ಏಪ್ರಿಲ್‌ 22ಕ್ಕೆ ಮುಂದೂಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

NCERT ಪಠ್ಯಪುಸ್ತಕ ವಿವಾದ: ನಾವು ನ್ಯಾಯಾಂಗವನ್ನು ಗೌರವಿಸುತ್ತೇವೆ; ಬಿಜೆಪಿ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT