ಗಾಯಕಿ ಪೃಥ್ವಿ ಭಟ್ ,  
ಸಿನಿಮಾ ಸುದ್ದಿ

ಕ್ಷಮಿಸಿಬಿಡಿ ಅಪ್ಪ, ಮನೆಯಿಂದ ಓಡಿ ಹೋಗಿ ಮದುವೆಯಾದ ಪೃಥ್ವಿ ಭಟ್: ಮಗಳಿಗೆ ವಶೀಕರಣ ಮಾಡಿದ್ದಾರೆ- ಗಾಯಕಿ ತಂದೆ ಆರೋಪ

ಜೀ ವಾಹಿನಿಯಲ್ಲೇ ಪ್ರೊಡಕ್ಷನ್ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಅಭಿಷೇಕ್ ಎನ್ನುವವರ ಜೊತೆ ಮಾರ್ಚ್ 27ರಂದು ವಿವಾಹವಾಗಿದ್ದು, ಇಪ್ಪತ್ತು ದಿನಗಳ ನಂತರ ಗಾಯಕಿಯ ತಂದೆ ಆಕ್ರೋಶ ಹೊರಹಾಕಿದ್ದಾರೆ.

ಕನ್ನಡ ವಾಹಿನಿಯ ಸರಿಗಮಪ ರಿಯಾಲಿಟಿ ಶೋನಲ್ಲಿ ಗಾಯಕಿಯಾಗಿ ಮಿಂಚಿದ್ದ, ಯುವ ಗಾಯಕಿ ಪೃಥ್ವಿ ಭಟ್ ಮನೆಯವರ ವಿರೋಧದ ನಡುವೆ ಪ್ರೇಮವಿವಾಹ ಆಗಿದ್ದಾರೆ.

ಜೀ ವಾಹಿನಿಯಲ್ಲೇ ಪ್ರೊಡಕ್ಷನ್ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಅಭಿಷೇಕ್ ಎನ್ನುವವರ ಜೊತೆ ಮಾರ್ಚ್ 27ರಂದು ವಿವಾಹವಾಗಿದ್ದು, ಇಪ್ಪತ್ತು ದಿನಗಳ ನಂತರ ಗಾಯಕಿಯ ತಂದೆ ಆಕ್ರೋಶ ಹೊರಹಾಕಿದ್ದಾರೆ.

ನನ್ನ ಮಗಳಿಗೆ ಹವ್ಯಕ ಹುಡುಗನನ್ನೇ ಹುಡುಕಿ ಮದುವೆ ಮಾಡುವ ಕನಸು ಹೊತ್ತಿದ್ದೆ. ಈ ವಿಷಯವನ್ನು ಜೀ ಕನ್ನಡವಾಹಿನಿಯ ಸರಿಗಮಪ ಶೋನಲ್ಲಿ ಜ್ಯೂರಿಯಾಗಿರೋ ಸಂಗೀತ ಶಿಕ್ಷಕ ನರಹರಿ ದೀಕ್ಷಿತ್ ಎನ್ನುವವರಿಗೆ ತಿಳಿಸಿದ್ದೆ. ಅವರು ಪೃಥ್ವಿ ಭಟ್ ಪ್ರೇಮಿಸುತ್ತಿರುವ ಹುಡುಗನ ಬಗ್ಗೆ ತಿಳಿಸಿದ್ದರು. ನಾನು ನನ್ನ ಮಗಳನ್ನು ಕೇಳಿದಾಗ, ನೀವು ತೋರಿಸಿದ ಹುಡುಗನ ಜೊತೆಯೇ ಮದುವೆ ಆಗುತ್ತೇನೆ ಅಂತ ದೇವರ ಮೇಲೆ ಪ್ರಮಾಣ ಮಾಡಿದ್ದಳು.

ನಾನು ಶಿವಪ್ರಸಾದ್‌, ಗಾಯಕಿ ಪ್ರಥ್ವಿ ಭಟ್‌ ಅಪ್ಪ. ನನ್ನ ಮಗಳು ಕಳೆದ ತಿಂಗಳು ಇಪ್ಪತ್ತೇಳನೇ ತಾರೀಖಿನಂದು ದೇವಸ್ಥಾನದಲ್ಲಿ ಯಾರನ್ನೋ ಮದುವೆಯಾಗಿ ನಮ್ಮನ್ನು ಬಿಟ್ಟು ಹೋಗಿದ್ದಾಳೆ. ನಮ್ಮ ಸಂಪರ್ಕದಲ್ಲಿ ಇಲ್ಲ ಈಗ ಅವಳು. ಮುಖ್ಯವಾದ ವಿಷಯ ಅಂದರೆ ಅವಳನ್ನು ಧಾರೆ ಎರೆದು ಮದುವೆ ಮಾಡಿಕೊಟ್ಟಿದ್ದು, ನಮ್ಮ ಗಿರಿ ನಗರ ವಲಯದ ನಿವಾಸಿ. ಭಯಂಕರ ಸಂಗೀತ ಶಿಕ್ಷಕ. ಮಹಾ ದುಷ್ಟ. ನರಹರಿ ದೀಕ್ಷಿತ್‌ ಎಂಬಾತ. ಈ ನರಹರಿ ದೀಕ್ಷಿತ್‌ ಬಂದು ಹೋದ ಮೇಲೆ ಅವಳ ವರ್ತನೆಯಲ್ಲಿ ತುಂಬಾ ಬದಲಾವಣೆ ಆಗಿದೆ ಮಾತ್ರ. ಒಂದು ರೀತಿ ವಶೀಕರಣ ಆದವರ ರೀತಿ ಇದ್ದಳು ಅವಳು. ಅದು ಸ್ವಲ್ಪ ನಾನು ಈ ವಿಷಯದಲ್ಲಿ ನಾನು ಸ್ವಲ್ಪ ಸೀರಿಯಸ್​ ಆಗಿ ಆಲೋಚನೆ ಮಾಡಬೇಕಿತ್ತು. ಅದು ನನ್ನ ಕಡೆಯಿಂದ ತಪ್ಪಾಗಿದೆ. ಶಿವಪ್ರಸಾದ್​​, ಪೃಥ್ವಿ ಭಟ್​​ ತಂದೆ.

ಮಗಳನ್ನು ಕೂರಿಸಿಕೊಂಡು ಮಾತಾಡಿದಾಗ, ಹುಡುಗನೊಬ್ಬ ನನ್ನ ಹಿಂದೆ ಬಿದ್ದಿರೋದು ನಿಜ. ಆದರೆ, ನೀವು ಇಷ್ಟಪಟ್ಟರೆ ಮಾತ್ರ ಮುಂದುವರೆಯುವೆ. ಇಲ್ಲದಿದ್ದರೆ, ನೀವು ತೋರಿಸಿದ ಹುಡುಗನ ಜೊತೆಯೇ ಹೊಸ ಜೀವನಕ್ಕೆ ಕಾಲಿಡುತ್ತೇನೆ ಅಂತ ಪೃಥ್ವಿ ಭಟ್ ತಂದೆ ತಾಯಿಯ ಮೇಲೆ ಪ್ರಮಾಣ ಮಾಡಿದ್ದರಂತೆ. ಆ ಪ್ರಮಾಣ ಮುರಿದುಕೊಂಡು ಮದುವೆ ಆಗಿದ್ದಾರೆ. ಹಾಗಾಗಿ ಆಕೆ ನನ್ನ ಮನೆಗೆ ಬರೋದು ಬೇಡ ಅಂತ ತಿಳಿಸಿದ್ದಾಗಿ ಪೃಥ್ವಿ ಅವರ ತಂದೆಯು ಹೇಳಿಕೊಂಡಿದ್ದಾರೆ.

ಹವ್ಯಕ ಸಮಾಜವು ನರಹರಿ ದೀಕ್ಷಿತ್ ಅಂಥವರಿಗೆ ಪ್ರೋತ್ಸಾಹ ಮಾಡಬಾರದು ಅಂತ ಪೃಥ್ವಿ ತಂದೆ ಮನವಿ ಮಾಡಿಕೊಂಡಿದ್ದಾರೆ. ಇದ್ದೊಬ್ಬ ಮಗಳ ಧಾರೆಯರೆಯದಂತೆ ನರಹರಿ ಮಾಡಿದ್ದಾರೆ. ನಾನು ನೋವಿನಿಂದಲೇ ಈ ಸಂಗತಿಯನ್ನು ಹಂಚಿಕೊಳ್ಳುತ್ತಿರುವೆ ಅಂತ ಆಡಿಯೋವೊಂದನ್ನು ಮಾಡಿ, ಹವ್ಯಕ ಗ್ರೂಪ್‌ನಲ್ಲಿ ಪೋಸ್ಟ್ ಮಾಡಿದ್ದಾರೆ ಪೃಥ್ವಿ ತಂದೆ. ಆ ಆಡಿಯೋ ಈಗ ವೈರಲ್ ಆಗಿದೆ.

ಆದರೆ ಈ ಬಗ್ಗೆ ಪೃಥ್ವಿ ಭಟ್ ಸ್ಪಷ್ಟನೆ ನೀಡಿದ್ದಾರೆ. ಹಾಯ್​ ಅಪ್ಪಾ. ಸಾರಿ ನೀವು ಆಲ್​ರೆಡಿ ಎರಡು ದಿನದಿಂದ ಹವ್ಯಕ ಗ್ರುಪ್​ಲ್ಲಿ ಮತ್ತೆ ಬೇರೆ ಬೇರೆ ಗ್ರುಪ್​ಲ್ಲಿ ನರಹರಿ ದೀಕ್ಷಿತ್​ ಸರ್​ ಬಗ್ಗೆ ಮತ್ತೆ ನನ್ನ ಬಗ್ಗೆ ಆಡಿಯೋ ಮೆಸೇಜ್​ ಎಲ್ಲಾ ಕಳಿಸುತ್ತಿದ್ದಿ. ಈ ವಿಷಯದಲ್ಲಿ ನರಹರಿ ದೀಕ್ಷಿತ್​ರದ್ದು ಏನೂ ತಪ್ಪಿಲ್ಲ. ನಾನು ಮೊದಲು ಹೇಳ್ದಂಗೆ, ಈಗಲೂ ಹೇಳ್ತಿದ್ದೀನಿ, ದೀಕ್ಷಿತ್​ ಸರ್​ದು ಎಂಥದ್ದು ತಪ್ಪಿಲ್ಲ. ಮಾರ್ಚ್​ 7ಕ್ಕೆ ದೀಕ್ಷಿತ್​ ಸರ್​ ಮನೆಗೆ ಬಂದಿದ್ದು, ಈ ವಿಷಯ ಬಗ್ಗೆ ಮಾತ್ನಾಡಿದ್ರು.

ಆಗ ನಾನು ಅವರ ಎದುರೇ ಮತ್ತೆ ನಿಮ್ಮಗಳ ಎದುರೇ ನನಗೆ ಅಭಿ ಇಷ್ಟ ಅಂತನೇ ಹೇಳಿದ್ದು. ಅವತ್ತು ನಿಮ್ಮ ಮೇಲಿನ ಭಯಕ್ಕೆ ನಾನು ಸುಮ್ಮನಾದೆ, ಆದರೆ ನನ್ನ ಮನಸಿನಲ್ಲಿ ಅಭಿ ಇದ್ದರು- ಪೃಥ್ವಿ ಭಟ್​​, ಯುವ ಗಾಯಕಿ. ಶಿವಪ್ರಸಾದ್​​​ರ ಆಡಿಯೋ ವೈರಲ್ ಆಗ್ತಿದ್ದಂತೆ ಪೃಥ್ವಿ ಭಟ್​ರದ್ದು ಎನ್ನಲಾದ ಆಡಿಯೋ ಹರಿದಾಡ್ತಿದೆ.. ತಂದೆಯ ಆರೋಪಕ್ಕೆ ಮಗಳು ಕೂಡ ಸ್ಪಷ್ಟೀಕರಣ ಕೊಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT