ಎಕ್ಕ ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

ಯುವ ರಾಜ್‌ಕುಮಾರ್ ಹುಟ್ಟುಹಬ್ಬಕ್ಕೆ ಟೀಸರ್ ರಿಲೀಸ್; ಪುನೀತ್ ರಾಜ್‌ಕುಮಾರ್ ನಟನೆಯ 'ಜಾಕಿ' ಚಿತ್ರ ನೆನಪಿಸಿದ 'ಎಕ್ಕ'!

ಡಾಲಿ ಧನಂಜಯ್ ನಟನೆಯ 'ರತ್ನನ್ ಪ್ರಪಂಚ' ಸಿನಿಮಾ ನಿರ್ದೇಶಿಸಿದ್ದ ರೋಹಿತ್ ಪದಕಿ ಈ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದು, ಚಿತ್ರದಲ್ಲಿ ಸಂಪದ ಮತ್ತು ಸಂಜನಾ ಆನಂದ್ ನಾಯಕಿಯರಾಗಿ ನಟಿಸಿದ್ದಾರೆ.

ಜೂನ್ 6ರಂದು ಯುವ ರಾಜ್‌ಕುಮಾರ್ ಅಭಿನಯದ ಎಕ್ಕ ಚಿತ್ರ ಬಿಡುಗಡೆಗೆ ಸಜ್ಜಾಗಿದ್ದು, ಏಪ್ರಿಲ್ 23ರಂದು ನಟ ಯುವ ರಾಜ್‌ಕುಮಾರ್ ಅವರು ಜನ್ಮದಿನ ಆಚರಿಸಿಕೊಂಡಿದ್ದು, ಏಪ್ರಿಲ್ 24ರಂದು ಡಾ. ರಾಜ್‌ಕುಮಾರ್ ಅವರ ಹುಟ್ಟುಹಬ್ಬದಂದು ಚಿತ್ರತಂಡ ಟೀಸರ್ ಬಿಡುಗಡೆ ಮಾಡಿದೆ.

ಮುಖಕ್ಕೆ ಬಣ್ಣ ಬಳಿದುಕೊಂಡು, ತಲೆಗೆ ಟೋಪಿ, ಒರಟಾದ ವೇಷಭೂಷಣದೊಂದಿಗೆ ಮಾಸ್ ಡೈಲಾಗ್ ಹೊಡೆಯುತ್ತಾ ಪೊರಕೆಯೊಳಗೆ ಗನ್ ಇಟ್ಟು ಶೂಟ್ ಮಾಡುವ ದೃಶ್ಯದಲ್ಲಿ ಯುವ ಕಾಣಿಸಿಕೊಂಡಿದ್ದಾರೆ. ಇದು ಒಂದು ಕ್ಷಣ ಪುನೀತ್ ರಾಜ್‌ಕುಮಾರ್ ಅವರ ಜಾಕಿ ಚಿತ್ರವನ್ನು ನೆನಪಿಸುತ್ತದೆ.

ಈ ಟೀಸರ್ ತನ್ನದೇ ಆದ ಹೊಸ ಪರಿಮಳವನ್ನು ತಂದಿದ್ದು, ಗಾಢವಾದ, ದಿಟ್ಟ ಮತ್ತು ಉದ್ವಿಗ್ನತೆಯಿಂದ ತುಂಬಿದೆ. ಯುವ ಕತ್ತಿಯನ್ನು ಹಿಡಿದು ಮಾಸ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

ಡಾಲಿ ಧನಂಜಯ್ ನಟನೆಯ 'ರತ್ನನ್ ಪ್ರಪಂಚ' ಸಿನಿಮಾ ನಿರ್ದೇಶಿಸಿದ್ದ ರೋಹಿತ್ ಪದಕಿ ಈ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದು, ಚಿತ್ರದಲ್ಲಿ ಸಂಪದ ಮತ್ತು ಸಂಜನಾ ಆನಂದ್ ನಾಯಕಿಯರಾಗಿ ನಟಿಸಿದ್ದಾರೆ. ಜೊತೆಗೆ ಅತುಲ್ ಕುಲಕರ್ಣಿ ಮತ್ತು ಡೆಡ್ಲಿ ಆದಿತ್ಯ ಪ್ರಮುಖ ಪಾತ್ರಗಳಲ್ಲಿದ್ದಾರೆ. ಚಿತ್ರಕ್ಕೆ ಚರಣ್ ರಾಜ್ ಸಂಗೀತ, ಸತ್ಯ ಹೆಗ್ಡೆ ಛಾಯಾಗ್ರಹಣ ಮತ್ತು ದೀಪು ಎಸ್ ಕುಮಾರ್ ಅವರ ಸಂಕಲನವಿದೆ.

ಈ ಚಿತ್ರವನ್ನು ಕೆಆರ್‌ಜಿ ಸ್ಟುಡಿಯೋಸ್‌ನ ಕಾರ್ತಿಕ್ ಗೌಡ ಮತ್ತು ಯೋಗಿ ಜಿ. ರಾವ್, ಜಯಣ್ಣ ಫಿಲ್ಮ್ಸ್‌ನ ಜಯಣ್ಣ ಮತ್ತು ಭೋಗೇಂದ್ರ ಮತ್ತು ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರ ಪಿಆರ್‌ಕೆ ಪ್ರೊಡಕ್ಷನ್ಸ್ ಸಹಯೋಗದೊಂದಿಗೆ ನಿರ್ಮಿಸಲಾಗಿದೆ. ಎಕ್ಕ ಈಗ ಚಿತ್ರೀಕರಣದ ಅಂತಿಮ ಹಂತದಲ್ಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ