71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಪ್ರಾದೇಶಿಕ ಚಿತ್ರ ವಿಭಾಗಗಳಲ್ಲಿ ಕನ್ನಡ ಸೇರಿದಂತೆ ಒಟ್ಟು 13 ಪ್ರಾದೇಶಿಕ ಭಾಷೆಗಳ 13 ಸಿನಿಮಾಗಳಿಗೆ ರಾಷ್ಟ್ರಪ್ರಶಸ್ತಿ ಘೋಷಿಸಲಾಗಿದೆ.
ಕೊಡಗು ಜಿಲ್ಲೆ ಮಡಿಕೇರಿಯ ಯಶೋದ ಪ್ರಕಾಶ್ ಕೊಟ್ಟುಕತ್ತೀರ ಅವರು ನಿರ್ಮಿಸಿ, ನಿರ್ದೇಶಿಸಿರುವ 'ಕಂದೀಲು' ಚಿತ್ರವು (Kandeelu kannada film) ಫೀಚರ್ ಫಿಲ್ಮ್ ವಿಭಾಗದಲ್ಲಿ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಗೆದ್ದಿದೆ.
ಇನ್ನು ಬೆಸ್ಟ್ ಸ್ಕ್ರಿಪ್ಟ್ (ನಾನ್ ಫೀಚರ್ ಫಿಲ್ಮ್) ವಿಭಾಗದಲ್ಲಿ ಮೈಸೂರಿನ ಚಿದಾನಂದ ನಾಯಕ್ ಅವರ ನಿರ್ದೇಶನದ ಕಿರುಚಿತ್ರ 'Sunflowers Were the First Ones to Know' ಪ್ರಶಸ್ತಿಗೆ ಆಯ್ಕೆಯಾಗಿದೆ.
‘ಕಂದೀಲು’ ಸಿನಿಮಾವನ್ನು ಕೆ ಯಶೋಧಾ ಪ್ರಕಾಶ್ ನಿರ್ದೇಶನ ಮಾಡಿದ್ದಾರೆ. ಸ್ವಸ್ತಿಕ್ ಎಂಟರ್ಟೈನ್ಮೆಂಟ್ ಅವರು ಸಿನಿಮಾ ನಿರ್ಮಾಣ ಮಾಡಿದ್ದಾರೆ. ಕಂದೀಲು' ಗ್ರಾಮವೊಂದರ ಕಥೆಯಾಗಿದ್ದು, ರೈತ ಹಾಗೂ ಆತನ ಕುಟುಂಬದ ಸುತ್ತ ಸುತ್ತುತ್ತದೆ. ಈ ಸಿನಿಮಾ ಹಲವರ ಜೀವನಾಧಾರಿತ ಕಥೆಯಿಂದ ಪ್ರೇರಣೆ ಪಡೆದಿದೆ.
'ಸನ್ಫ್ಲವರ್ಸ್ ವೇರ್ ದಿ ಫಸ್ಟ್ ಒನ್ಸ್ ಟು ನೋ' ಬೆಸ್ಟ್
ಚಿದಾನಂದ ಅವರ 'ಸನ್ಫ್ಲವರ್ಸ್ ವರ್ ದಿ ಫಸ್ಟ್ ಒನ್ಸ್ ಟು ನೋ' (Sunflowers Were The First Ones to Know) ಪ್ರತಿಷ್ಠಿತ ಕೇನ್ಸ್ ಫಿಲ್ಮ್ ಫೆಸ್ಟಿವಲ್ನಲ್ಲಿ 'ಲಾ ಸಿನೆಫ್ ಪ್ರಶಸ್ತಿ' ಮುಡಿಗೇರಿಸಿಕೊಂಡಿತ್ತು. ಇದೀಗ ಪ್ರತಿಷ್ಠಿತ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ದೊರೆತಿದೆ.