ಚಂದ್ರಶೇಖರ್‌ ಸಿದ್ಧಿ  
ಸಿನಿಮಾ ಸುದ್ದಿ

ಮಾನಸಿಕ ಖಿನ್ನತೆ: ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ್‌ ಸಿದ್ಧಿ ಆತ್ಮಹತ್ಯೆ

ಮಗನನ್ನು ಶಾಲೆಯಿಂದ ಕರೆದುಕೊಂಡು ಮನೆಗೆ ಬಂದಿದ್ದ ಚಂದ್ರಶೇಖರ್, ಬಳಿಕ ಶೌಚಾಲಯಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವ ಮರಳಿ ಬಂದಿರಲಿಲ್ಲ.

ಬೆಂಗಳೂರು: ಕಾಮಿಡಿ ಕಿಲಾಡಿಗಳು ಶೋ ಮೂಲಕ ಪ್ರೇಕ್ಷಕರನ್ನು ನಕ್ಕು ನಲಿಸಿದ್ದ ಯಲ್ಲಾಪುರ ತಾಲೂಕಿನ ಚಿಮ್ಮಳ್ಳಿ ಗ್ರಾಮದ ಚಂದ್ರಶೇಖರ್ ಸಿದ್ದಿ (31) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಬೆಳಕಿಗೆ ಬಂದಿದೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ವಜ್ರಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಮನಳ್ಳಿಯ ಸಿದ್ದಿ ಜನಾಂಗಕ್ಕೆ ಸೇರಿದ್ದ ಚಂದ್ರಶೇಖರ್‌ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಚಂದ್ರಶೇಖರ್, ಕಬ್ಬಿಗೆ ಗ್ರಾಮಕ್ಕೆ ಪತ್ನಿಯೊಂದಿಗೆ ಕೆಲಸಕ್ಕೆಂದು ಹೋಗಿ ಅಲ್ಲೇ ಉಳಿದುಕೊಂಡಿದ್ದರು. ಮಗನನ್ನು ಶಾಲೆಯಿಂದ ಕರೆದುಕೊಂಡು ಮನೆಗೆ ಬಂದಿದ್ದ ಚಂದ್ರಶೇಖರ್, ಬಳಿಕ ಶೌಚಾಲಯಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವ ಮರಳಿ ಬಂದಿರಲಿಲ್ಲ.

ಆತನ ಪತ್ನಿ ಹುಡುಕಾಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ. ಕಳೆದ 2-3 ತಿಂಗಳಿನಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಚಂದ್ರಶೇಖರ್ ಸಿದ್ದಿಗೆ ಕಾರವಾರದ ಕ್ರೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು ಎಂದು ತಿಳಿದು ಬಂದಿದೆ. ಈ ಬಗ್ಗೆ ಚಂದ್ರಶೇಖರ್ ತಾಯಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಝೀ ಕನ್ನಡ ವಾಹಿನಿಯ ಕಾಮಿಡಿ ಕಿಲಾಡಿಗಳು ಶೋನಲ್ಲಿ ಕೆಲ ಕಾಲ ಕಾಣಿಸಿಕೊಂಡಿದ್ದ ಈತ ಜನರನ್ನು ರಂಜಿಸಿ ಗಮನ ಸೆಳೆದಿದ್ದ. ಕೆಲ ಧಾರಾವಾಹಿಗಳಲ್ಲಿಯೂ ಸಹಪಾತ್ರಗಳಲ್ಲಿ ನಟಿಸಿದ್ದರು. ಬಳಿಕ ಹೆಚ್ಚಿನ ಅವಕಾಶಗಳು ಸಿಗದೆ, ಊರಿನ ಕಡೆ ಆಗಮಿಸಿದ್ದ ಚಂದ್ರಶೇಖರ್, ಕೂಲಿ ಮಾಡಿಕೊಂಡು ಜೀವನ ನಡೆಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ರಂಗಭೂಮಿ ಪ್ರತಿಭೆ ಚಂದ್ರಶೇಖರ ಸಿದ್ಧಿ ಅವರು ನೀನಾಸಂ ಸಂಸ್ಥೆಯಲ್ಲಿ ನಟನೆಯನ್ನು ಕಲಿತಿದ್ದರು. ನಂತರ 2020ರಲ್ಲಿ ಜೀ ಕನ್ನಡ ವಾಹಿನಿಯ 'ಕಾಮಿಡಿ ಕಿಲಾಡಿಗಳು' ಸೀಸನ್ 3 ಶೋಗೆ ಸ್ಪರ್ಧಿಯಾಗಿ ಎಂಟ್ರಿ ನೀಡಿದ್ದರು. ಅಲ್ಲಿ ಅವರಿಗೆ ಸಾಕಷ್ಟು ಜನಮನ್ನಣೆ ಸಿಕ್ಕಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್