ಲ್ಯಾಂಡ್ ಲಾರ್ಡ್ ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

‘Landlord' ಆಡಿಯೋ ರೈಟ್ಸ್ ದಾಖಲೆ ಮೊತ್ತಕ್ಕೆ ಮಾರಾಟ

ಸೆಟ್ಟೇರಿದಾಗ್ಲೇ ಭಾರಿ ಸದ್ದು ಮಾಡಿದ್ದ ಈ ಚಿತ್ರದ ಬಹುತೇಕ ಚಿತ್ರೀಕರಣ ಪೂರ್ಣಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಬಿರುಸಿನಿಂದ ಸಾಗಿದೆ.

ಸ್ಯಾಂಡಲ್ ವುಡ್ ನಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಮೂಡಿಸಿರುವ ದುನಿಯಾ ವಿಜಯ್ ಅಭಿನಯದ ಲ್ಯಾಂಡ್ ಲಾರ್ಡ್ ಚಿತ್ರದ ಆಡಿಯೋ ರೈಟ್ಸ್ ಆನಂದ್ ಆಡಿಯೋ ಪಾಲಾಗಿದೆ. ದಾಖಲೆ ಮೊತ್ತಕ್ಕೆ ಚಿತ್ರದ ಆಡಿಯೋ ರೈಟ್ಸ್ ಮಾರಾಟವಾಗಿದೆ.

ಸಾರಥಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಹೇಮಂತ್ ಗೌಡ ಕೆ.ಎಸ್ ಮತ್ತು ಕೆ.ವಿ. ಸತ್ಯಪ್ರಕಾಶ್ ನಿರ್ಮಿಸಿರುವ ಈ ಚಿತ್ರವನ್ನು ಜಡೇಶಾ ಕೆ. ಹಂಪಿ ನಿರ್ದೇಶಿಸಿದ್ದಾರೆ.

ಸೆಟ್ಟೇರಿದಾಗ್ಲೇ ಭಾರಿ ಸದ್ದು ಮಾಡಿದ್ದ ಈ ಚಿತ್ರದ ಬಹುತೇಕ ಚಿತ್ರೀಕರಣ ಪೂರ್ಣಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಬಿರುಸಿನಿಂದ ಸಾಗಿದೆ.

ಈ ನಡುವೆ ಚಿತ್ರತಂಡ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಸಂತಸದ ಸುದ್ದಿಯೊಂದನ್ನ ಹಂಚಿಕೊಂಡಿದೆ. ಆನಂದ್ ಆಡಿಯೋ ಕಂಪನಿ ಲ್ಯಾಂಡ್ ಲಾರ್ಡ್ ಚಿತ್ರದ ಆಡಿಯೋ ಹಕ್ಕುಗಳನ್ನ ದಾಖಲೆಯ ಬೆಲೆಗೆ ಖರೀದಿಸಿದೆ ಎಂದು ತಿಳಿಸಿದೆ. ಆ ವಿಚಾರವನ್ನ ಚಿತ್ರತಂಡ ಮೋಷನ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ವಿಶೇಷವಾಗಿ ಹಂಚಿಕೊಂಡಿದೆ.

ಆನಂದ್ ಆಡಿಯೋ ಪಾಲಿಗಿದು ಲಕ್ಕಿ ಮತ್ತು ಹಿಟ್ ಕಾಂಬಿನೇಷಶನ್ ಆಗಿದೆ. ದುನಿಯಾ ವಿಜಯ್ ಅವರ ಸಾಲು ಸಾಲು ಸಿನಿಮಾಗಳು ಆನಂದ್ ಆಡಿಯೋ ಕಂಪನಿಗೆ ಒಳ್ಳೆಯ ವ್ಯಾಪಾರವನ್ನ ಮಾಡಿಕೊಟ್ಟಿವೆ. ಅಜನೀಶ್ ಲೋಕನಾಥ್ ಹಾಗೂ ಜಡೇಶ ಕೆ. ಹಂಪಿ ಅವ್ರ ಕಾಂಬಿನೇಶನ್ ಸಿನಿಮಾಗಳು ಆನಂದ್ ಆಡಿಯೋ ಆಯ್ಕೆಯ ಸಕ್ಸಸ್ ಫುಲ್ ಸಿನಿಮಾಗಳಾಗಿವೆ. ಇದರಂತೆ ಆನಂದ್ ಆಡಿಯೋ ಕಂಪನಿ ಲ್ಯಾಂಡ್ ಲಾರ್ಡ್ ಆಡಿಯೋ ಹಕ್ಕನ್ನ ದೊಡ್ಡ ಮೊತ್ತ ಕೊಟ್ಟು ಖರೀದಿಸಿದೆ.

ಈ ಆಲ್ಬಂ ತುಂಬಾ ವಿಶೇಷತೆಗಳಿಂದ ಕೂಡಿದ್ದು, ಹಿನ್ನೆಲೆ ಸಂಗೀತ ಚಿತ್ರದ ಹೈಲೈಟ್ ಗಳಲ್ಲಿ ಒಂದಾಗಿರಲಿದೆಯಂತೆ. ಲ್ಯಾಂಡಲ್ ಲಾರ್ಡ್ ಚಿತ್ರದಲ್ಲಿ ವಿಜಯ್ ಹಿರಿಯ ಮಗಳು ರಿತನ್ಯ ವಿಜಯ್ ಅಭಿನಯಿಸಿರುವುದು ವಿಶೇಷ. ರಚಿತಾರಾಮ್ ಈ ಚಿತ್ರದಲ್ಲಿ ವಿಜಯ್ ಅವರಿಗೆ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಇತರ ಪ್ರಮುಖ ಪಾತ್ರವರ್ಗ ಕುರಿತ ಮಾಹಿತಿಗಳನ್ನು ಚಿತ್ರ ತಂಡ ಬಹಿರಂಗಪಡಿಸಿಲ್ಲ, ಆದರೆ, ಶೀಘ್ರದಲ್ಲೇ ಚಿತ್ರ ಬಿಡುಗಡೆ ಮಾಡುವ ಸುಳಿವನ್ನು ಚಿತ್ರತಂಡ ನೀಡಿದೆ. ಅಂದುಕೊಂಡಂತೆ ಆದರೆ, ದಸರಾ ಅಥವಾ ದೀಪಾವಳಿ ಹಬ್ಬಕ್ಕೆ ಚಿತ್ರ ಪ್ರೇಕ್ಷಕರೆದುರಿಗೆ ಬರುವ ಸಾಧ್ಯತೆಗಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರತಿಪಕ್ಷಗಳು ಸಂಪುಟದಿಂದ ವಜಾಕ್ಕೆ ಆಗ್ರಹಿಸುತ್ತಿರುವ ಮಧ್ಯೆ ಸಚಿವ ಬಿ. ನಾಗೇಂದ್ರಗೆ ಹೈಕೋರ್ಟ್ ಬಿಗ್ ರಿಲೀಫ್!

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

'JDS ಪಾದಯಾತ್ರೆಯ ಬಂಡವಾಳ ಬಯಲು ಮಾಡಿದ ವಿಜಯೇಂದ್ರ': ಕಾಂಗ್ರೆಸ್​​ನಿಂದ ವಿಡಿಯೋ ಬಿಡುಗಡೆ!

ವಿದ್ಯಾರ್ಥಿಗಳ ಪ್ರತಿಭಟನೆಯ ಕುರಿತು ಚರ್ಚೆಗೆ ಅಮಿತ್ ಶಾ ಉತ್ತರಿಸುತ್ತಾರೆ, ಆದರೆ...: ಕಿರಣ್ ರಿಜಿಜು

ಅಮೃತ್ ಭಾರತ್ ಯೋಜನೆಗೆ ವೇಗದ ಕೊರತೆ? ಕರ್ನಾಟಕದ 61 ರೈಲು ನಿಲ್ದಾಣಗಳಲ್ಲಿ 12 ಮಾತ್ರ ಮೇಲ್ದರ್ಜೆಗೆ