ಪವನ್ ಒಡೆಯರ್, ಪ್ರಜ್ವಲ್ ಮತ್ತು ಶಿವರಾಜ್ ಕುಮಾರ್ 
ಸಿನಿಮಾ ಸುದ್ದಿ

ಪವನ್ ಒಡೆಯರ್-ಶಿವಣ್ಣ ಕಾಂಬಿನೇಷನ್ ಸಿನಿಮಾದಲ್ಲಿ ಪ್ರಜ್ವಲ್ ದೇವರಾಜ್?

ಮತ್ತೊಂದು ಪ್ರಮುಖ ಪಾತ್ರಕ್ಕಾಗಿ ಪ್ರಜ್ವಲ್ ದೇವರಾಜ್ ಅವರೊಂದಿಗೆ ನಿರ್ಮಾಪಕರು ಮಾತುಕತೆ ನಡೆಸುತ್ತಿದ್ದಾರೆ ಎಂದು ಸಿನಿಮಾ ಎಕ್ಸ್‌ಪ್ರೆಸ್‌ಗೆ ಮೂಲಗಳು ತಿಳಿಸಿವೆ.

ಶಿವರಾಜ್‌ಕುಮಾರ್ ಸದ್ಯ ವಿವಿಧ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾಕೆ. ನಿರ್ದೇಶಕ ಪವನ್ ಒಡೆಯರ್ ಜೊತೆಗಿನ ಮುಂದಿನ ಸಿನಿಮಾ ಚಿತ್ರೀಕರಣವನ್ನು ಪ್ರಾರಂಭಿಸಲು ಸಜ್ಜಾಗುತ್ತಿದ್ದಾರೆ, ಈ ಪ್ರಾಜೆಕ್ಟ್ ಶೀಘ್ರದಲ್ಲೇ ಚಿತ್ರೀಕರಣ ಪ್ರಾರಂಭವಾಗುವ ನಿರೀಕ್ಷೆಯಿದೆ.

ಈ ಚಿತ್ರವನ್ನು ಅಪೇಕ್ಷಾ ಪವನ್ ಒಡೆಯರ್ ಮತ್ತು ಪವನ್ ಒಡೆಯರ್ ತಮ್ಮ ಒಡೆಯರ್ ಮೂವೀಸ್ ಬ್ಯಾನರ್ ಅಡಿಯಲ್ಲಿ ಆರ್ನಾ ಕ್ರಿಯೇಟಿವ್ಸ್ ಸಹಯೋಗದೊಂದಿಗೆ ನಿರ್ಮಿಸುತ್ತಿದ್ದಾರೆ. ಶಿವರಾಜ್‌ಕುಮಾರ್ ಹೊರತುಪಡಿಸಿ, ಉಳಿದ ಪಾತ್ರವರ್ಗದ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ.

ಆದರೆ ಮತ್ತೊಂದು ಪ್ರಮುಖ ಪಾತ್ರಕ್ಕಾಗಿ ಪ್ರಜ್ವಲ್ ದೇವರಾಜ್ ಅವರೊಂದಿಗೆ ನಿರ್ಮಾಪಕರು ಮಾತುಕತೆ ನಡೆಸುತ್ತಿದ್ದಾರೆ ಎಂದು ಸಿನಿಮಾ ಎಕ್ಸ್‌ಪ್ರೆಸ್‌ಗೆ ಮೂಲಗಳು ತಿಳಿಸಿವೆ. ನಟ ಮತ್ತು ನಿರ್ದೇಶಕರು ಈಗಾಗಲೇ ಭೇಟಿಯಾಗಿ ಆರಂಭಿಕ ಚರ್ಚೆ ನಡೆಸಿದ್ದಾರೆ. ಮಾತುಕತೆಗಳು ಈಗ ಅಂತಿಮ ಹಂತಕ್ಕೆ ಸಾಗುತ್ತಿವೆ ಎಂದು ಮೂಲಗಳು ತಿಳಿಸಿವೆ. ಒಂದು ವೇಳೆ ಎಲ್ಲವೂ ಅಂದುಕೊಂಡಂತೆ ನಡೆದರೆ, ಪ್ರಜ್ವಲ್ ಹ್ಯಾಟ್ರಿಕ್ ಹೀರೋ ಜೊತೆ ಮೊದಲ ಬಾರಿಗೆ ಪರದೆ ಹಂಚಿಕೊಳ್ಳುತ್ತಾರೆ.

ಪ್ರಸ್ತುತ ಕರಾವಳಿ ಹಾಗೂ ಗುರುದತ್ತ ಗಾಣಿಗ ನಿರ್ದೇಶನದ ಸಿನಿಮಾ ಹಾಗೂ ಚೀತಾ ಚಿತ್ರದಲ್ಲಿ ಪ್ರಜ್ವಲ್ ನಟಿಸುತ್ತಿದ್ದಾರೆ. ಪವನ್ ಒಡೆಯರ್ ನಿರ್ದೇಶನದ ಶಿವರಾಜ್‌ಕುಮಾರ್ ಅವರೊಂದಿಗೆ ಮತ್ತೊಂದು ಸೇರ್ಪಡೆಯಾಗಬಹುದು. ಆದರೆ ಶಿವರಾಜ್‌ಕುಮಾರ್ ಚಿತ್ರ ತಡವಾಗುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. 45 ಮತ್ತು ಸರ್ವೈವರ್ ಬಿಡುಗಡೆಗಾಗಿ ಶಿವಣ್ಣ ಕಾಯುತ್ತಿದ್ದಾರೆ. ಪ್ರಸ್ತುತ ರಾಮ್ ಚರಣ್ ಜೊತೆ ತೆಲುಗಿನ ಪೆದ್ದಿ ಚಿತ್ರೀಕರಣದಲ್ಲಿದ್ದಾರೆ. ಶಿವಣ್ಣ ಶೀಘ್ರದಲ್ಲೇ ಪವನ್ ಒಡೆಯರ್ ಸಿನಿಮಾ ಚಿತ್ರೀಕರಣ ಪ್ರಾರಂಭಿಸಲಿದ್ದಾರೆ, ನಂತರ ಶ್ರೀನಿ ಅವರ ಎ ಫಾರ್ ಆನಂದ್ ಮತ್ತು ಇತರ ಪ್ರಾಜೆಕ್ಟ್ ಕಡೆ ಗಮನ ಹರಸಿಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ತಮಿಳುನಾಡಿನಲ್ಲಿ ಬದಲಾದ ರಾಜಕೀಯ ಸಮೀಕರಣ: ವಿಜಯ್ ಜೊತೆ ಬಿಜೆಪಿ ಮಾತುಕತೆ? ಕಾಲ್ತುಳಿತ ಘಟನೆಯ ನಂತರ TVKಗೆ ಪ್ರಮುಖ ಭರವಸೆ?

Bengaluru: ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ, ಗಂಭೀರ ಗಾಯ, ಆಸ್ಪತ್ರೆಗೆ ದಾಖಲು!

148 ವರ್ಷಗಳಲ್ಲಿ ಇದೇ ಮೊದಲು... ವೆಸ್ಟ್ ಇಂಡೀಸ್ ವಿರುದ್ಧ ಶತಕ ಸಿಡಿಸಿ ಅತ್ಯಪರೂಪ, ವಿಚಿತ್ರ ದಾಖಲೆ ಬರೆದ KL Rahul

ಡಲ್ಲಾಸ್‌ನ ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಹೈದರಾಬಾದ್ ವ್ಯಕ್ತಿಗೆ ಗುಂಡಿಕ್ಕಿ ಹತ್ಯೆ

ತಕ್ಷಣ ದಾಳಿ ನಿಲ್ಲಿಸುವಂತೆ ಟ್ರಂಪ್ ಆದೇಶಕ್ಕೆ ಡೋಂಟ್ ಕೇರ್: ಇಸ್ರೇಲ್ ದಾಳಿಗೆ ಇಬ್ಬರು ಮಕ್ಕಳು ಸೇರಿ ಏಳು ಮಂದಿ ಪ್ಯಾಲೆಸ್ತೀನಿಯರು ಬಲಿ

SCROLL FOR NEXT