ನಟಿ ರಮ್ಯಾ 
ಸಿನಿಮಾ ಸುದ್ದಿ

'Actor Darshan ಕಷ್ಟಪಟ್ಟು ಮೇಲೆ ಬಂದಿದ್ರು.. ಆದ್ರೆ ಜೀವನ ಹಾಳು ಮಾಡಿಕೊಂಡ್ರು': ನಟಿ Ramya

ದೂರು ಕೊಟ್ಮೇಲೆ ಬ್ಯಾಡ್‌ ಕಾಮೆಂಟ್ಸ್‌ ಬರ್ತಿಲ್ಲ. ಎಷ್ಟೋ ಜನ ಪೋನ್ ಸ್ವಿಚ್ ಆಫ್‌ ಮಾಡಿ ಮನೆ ಬಿಟ್ಟಿದ್ದಾರೆ.

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೆ ಜೈಲಾಪಾಲಾಗಿರುವ ನಟ ದರ್ಶನ್ ವಿಚಾರವಾಗಿ ಮತ್ತೆ ನಟಿ ರಮ್ಯಾ ಮಾತನಾಡಿದ್ದು, 'ಜೀವನ ಹಾಳು ಮಾಡಿಕೊಡ್ರು' ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ನಟಿ ರಮ್ಯಾ, 'ಚಿತ್ರರಂಗಕ್ಕೆ ದರ್ಶನ್‌ (Actor Darshan) ಲೈಟ್‌ಬಾಯ್‌ ಆಗಿ ಬಂದ್ರೂ ಕಷ್ಟಪಟ್ಟು ಮೇಲೆ ಬಂದಿದ್ರು. ಆದ್ರೆ ಜೀವನ ಹಾಳುಮಾಡಿಕೊಂಡ್ರು. ಹೀಗೆ ಆಗದೇ ಇದ್ದಿದ್ದರೇ ಇನ್ನಷ್ಟು ದೊಡ್ಡ ಮಟ್ಟಕ್ಕೆ ಬೆಳೆಯಬಹುದಿತ್ತು ಎಂದು ಹೇಳಿದ್ದಾರೆ.

ಅಂತೆಯೇ ದರ್ಶನ್ ಅಭಿಮಾನಿಗಳ ವಿವಾದ ಕುರಿತು ಮಾತನಾಡಿದ ನಟಿ ರಮ್ಯಾ, ' ನಾನು ಹೇಳಬೇಕಾದ್ದನ್ನೆಲ್ಲ ಹೇಳಿದ್ದೀನಿ. ದೂರು ಕೊಟ್ಮೇಲೆ ಬ್ಯಾಡ್‌ ಕಾಮೆಂಟ್ಸ್‌ ಬರ್ತಿಲ್ಲ. ಎಷ್ಟೋ ಜನ ಪೋನ್ ಸ್ವಿಚ್ ಆಫ್‌ ಮಾಡಿ ಮನೆ ಬಿಟ್ಟಿದ್ದಾರೆ. ಇನ್ನಷ್ಟು ಮಂದಿ ಅರೆಸ್ಟ್ ಆಗಿದ್ದಾರೆ ಎಂದರು.

ಇದೇ ವೇಳೆ ನಟ ದರ್ಶನ್ ಮತ್ತು ಗ್ಯಾಂಗ್ ನ ಜಾಮೀನು ರದ್ದು ಮಾಡಿದ ಸುಪ್ರೀಂ ಕೋರ್ಟ್ ತೀರ್ಪಿನ ಕುರಿತು ಮಾತನಾಡಿದ ರಮ್ಯಾ, 'ಸುಪ್ರೀಂ ಕೋರ್ಟ್‌ ತೀರ್ಪು ಸ್ವಾಗತಿಸುವುದಾಗಿ ಹೇಳಿದರು. 'ಸುಪ್ರೀಂ ತೀರ್ಪಿನಿಂದ ರೇಣುಕಾಸ್ವಾಮಿ ಹೆಂಡತಿ ಮಗುವಿಗೆ ನ್ಯಾಯ ಸಿಕ್ಕಿದೆ. ಈ ಬೆಳವಣಿಗೆಯಿಂದ ಹೆಣ್ಣುಮಕ್ಕಳಿಗೆ ಧೈರ್ಯ ಬಂದಿದೆ. ಎಲ್ಲ ಒಳ್ಳೆಯದಾಗಿದೆ ಅಂದುಕೊಳ್ತೀನಿ ಎಂದು ಹೇಳಿದರು.

ಇನ್ನೂ ದರ್ಶನ್‌ ಪತ್ನಿ ವಿಜಯಲಕ್ಷ್ಮಿ, ಸೋಶಿಯಲ್ ಮೀಡಿಯಾ ಹ್ಯಾಂಡಲ್ ಜವಾಬ್ದಾರಿ ಹೊತ್ತ ವಿಚಾರಕ್ಕೆ ಪ್ರತಿಕ್ರಿಯಿಸಿ, ಈ ನಡೆಯನ್ನು ಸ್ವಾಗತಿಸುತ್ತೀನಿ ಅಂದರು. ಇದು ಒಳ್ಳೆ ಬೆಳವಣಿಗೆ, ಅಭಿಮಾನಿಗಳಿಗೆ ವಿಜಯಲಕ್ಷ್ಮಿ ಈ ಮೂಲಕ ಒಳ್ಳೆ ಸಂದೇಶ ಕೊಡಬಹುದು. ಅವರು ಸಹ ಹೆಣ್ಣು, ಹೀಗಾಗಿ ಇದು ಒಳ್ಳೆ ಬೆಳವಣಿಗೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರತಿಪಕ್ಷಗಳು ಸಂಪುಟದಿಂದ ವಜಾಕ್ಕೆ ಆಗ್ರಹಿಸುತ್ತಿರುವ ಮಧ್ಯೆ ಸಚಿವ ಬಿ. ನಾಗೇಂದ್ರಗೆ ಹೈಕೋರ್ಟ್ ಬಿಗ್ ರಿಲೀಫ್!

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ ಹೋಗಿದ್ದ ಟೆಕ್ಕಿ ನಾಪತ್ತೆ: ಲ್ಯಾಪ್‌ಟಾಪ್‌ನಲ್ಲಿ ಶಾಂತಲಾ ಡ್ರಾಪ್‌ ಪಾಯಿಂಟ್‌ ಸರ್ಚ್‌; ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ!

ರಷ್ಯಾ ಮೇಲೆ ಉಕ್ರೇನ್ ಭೀಕರ ದಾಳಿ: 13 ಮಂದಿ ಬಲಿ, 75 ಜನರಿಗೆ ಗಾಯ; ಇದು 4 ವರ್ಷಗಳಲ್ಲೇ ಅತ್ಯಂತ ಡೆಡ್ಲಿ ಅಟ್ಯಾಕ್!

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

'ಬಸವಣ್ಣನನ್ನೇ ಬಿಡಲಿಲ್ಲ.. ನಾನ್ಯಾರು..'; ‘ಅವರಿಗೆ ಸಚಿವ ಸ್ಥಾನ ಸಿಗದಿರಲು ನಾನು ಕಾರಣ ಅಲ್ಲ’ ಎಂದ ಎಂಬಿ ಪಾಟೀಲ್ ಸ್ಪಷ್ಟನೆ, Video