ಕನ್ನಡ ಚಿತ್ರರಂಗದ ಇತ್ತೀಚಿನ ಹಿಟ್ ಚಿತ್ರ 'ಸು ಫ್ರಮ್ ಸೋ', ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ಕಂಡ ಬಳಿಕ ಇದೀಗ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಿಗೆ ಕಾಲಿಡಲು ಸಜ್ಜಾಗಿದೆ. ಜುಲೈ 25 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ 'ಸು ಫ್ರಮ್ ಸೋ' ಚಿತ್ರವು ಗಲ್ಲಾಪೆಟ್ಟಿಗೆಯಲ್ಲಿ ಯಶಸ್ಸು ಕಂಡಿತು. ಕಡಿಮೆ ಬಜೆಟ್‌ನಲ್ಲಿ ನಿರ್ಮಾಣಗೊಂಡಿದ್ದ ಈ ಚಿತ್ರ ಇದೀಗ ಒಟಿಟಿಯಲ್ಲಿ ಬಿಡುಗಡೆಯಾಗುತ್ತಿದೆ.
123Telugu ವರದಿ ಪ್ರಕಾರ, ಈ ಚಿತ್ರದ ಡಿಜಿಟಲ್ ಹಕ್ಕುಗಳನ್ನು ಜಿಯೋ ಹಾಟ್‌ಸ್ಟಾರ್ ಅಧಿಕೃತವಾಗಿ ಪಡೆದುಕೊಂಡಿದೆ. ಕಲರ್ಸ್ ಕನ್ನಡ ಈ ಚಿತ್ರದ ಸ್ಯಾಟಲೈಟ್ ಹಕ್ಕುಗಳನ್ನು ಪಡೆದುಕೊಂಡಿದೆ. ಎಲ್ಲ ಭಾಷೆಗಳ OTT ಮತ್ತು ಸ್ಯಾಟಲೈಟ್ ಹಕ್ಕುಗಳು ಸುಮಾರು 5.5 ಕೋಟಿ ರೂ. ಜೊತೆಗೆ GST ಗೆ ಮಾರಾಟವಾಗಿವೆ ಎನ್ನಲಾಗಿದೆ. ತೆಲುಗು ಆವೃತ್ತಿಯು ಸ್ಟಾರ್ ಮಾದಲ್ಲಿ ಪ್ರಸಾರವಾಗಲಿದೆ.
ಫಿಲ್ಮ್ ಟ್ರೇಡ್ ಪೋರ್ಟಲ್ Sacnilk ಪ್ರಕಾರ, ಈ ಚಿತ್ರವು ಭಾರತದಲ್ಲಿ 78.82 ಕೋಟಿ ರೂ. ನಿವ್ವಳ ಗಳಿಕೆ ಕಂಡಿದೆ. ವಿಶ್ವದಾದ್ಯಂತ 106.08 ಕೋಟಿ ರೂ. ಕಲೆಕ್ಷನ್ ಮಾಡಿದೆ.
ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿರುವ ಜೆಪಿ ತುಮಿನಾಡ್ ಪ್ರಮುಖ ಪಾತ್ರದಲ್ಲಿಯೂ ನಟಿಸಿದ್ದಾರೆ. ನಿರ್ಮಾಣದ ಜೊತೆಗೆ ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಇದರೊಂದಿಗೆ, ಶನೀಲ್ ಗೌತಮ್, ಸಂಧ್ಯಾ ಅರಕೆರೆ, ಪ್ರಕಾಶ್ ತುಮಿನಾಡ್, ದೀಪಕ್ ರೈ ಪಣಾಜೆ, ಮೈಮ್ ಪ್ರಸಾದ್ ಮತ್ತು ಪುಷ್ಪರಾಜ್ ಬೋಳಾರ್ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಸುಮೇಧ್ ಕೆ ಅವರ ಸಂಗೀತ ಸಂಯೋಜನೆ ಮತ್ತು ಎಸ್ ಚಂದ್ರಶೇಖರನ್ ಅವರ ಛಾಯಾಗ್ರಹಣವಿದೆ.