ಕಾಂತಾರ ಚಾಪ್ಟರ್ 1 ಚಿತ್ರದ ಪೋಸ್ಟರ್ 
ಸಿನಿಮಾ ಸುದ್ದಿ

ಬಿಡುಗಡೆಗೆ ಮುನ್ನವೇ ದಾಖಲೆ: Telugu ರಾಜ್ಯಗಳಲ್ಲಿ 100 ಕೋಟಿಗೆ ಬಿಕರಿಯಾದ ಕನ್ನಡದ ಮೊದಲ ಚಿತ್ರ Kantara: Chapter 1!

ದೈವಿಕ ಪ್ರಧಾನ ಚಿತ್ರ ಕಾಂತಾರ: ಒಂದು ದಂತಕಥೆ 2022ರಲ್ಲಿ ಬಿಡುಗಡೆಯಾಗಿ ಭರ್ಜರಿ ಕಲೆಕ್ಷನ್ ಮಾಡಿತ್ತು.

ಬಿಡುಗಡೆಗೂ ಮುನ್ನವೇ ಕಾಂತಾರ ಚಾಪ್ಟರ್​ 1 ದೇಶಾದ್ಯಂತ ಸಂಚಲನ ಮೂಡಿಸಿದೆ. ಅಕ್ಟೋಬರ್ 2ರಂದು ಜಗತ್ತಿನಾದ್ಯಂತ ಏಕಕಾಲಕ್ಕೆ ಚಿತ್ರ ಬಿಡುಗಡೆಗೆ ಹೊಂಬಾಳೆ ಫಿಲ್ಮ್ಸ್ ತಯಾರಿ ನಡೆಸುತ್ತಿದೆ. ಸದ್ಯ ಚಿತ್ರೀಕರಣ ಪೂರ್ಣಗೊಂಡಿದ್ದು ಎಡಿಟಿಂಗ್ ಕೆಲಸ ನಡೆಯುತ್ತಿದೆ. ನಿರ್ದೇಶಕ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ದೈವಿಕ ಪ್ರಧಾನ ಚಿತ್ರ ಕಾಂತಾರ: ಒಂದು ದಂತಕಥೆ 2022ರಲ್ಲಿ ಬಿಡುಗಡೆಯಾಗಿ ಭರ್ಜರಿ ಕಲೆಕ್ಷನ್ ಮಾಡಿತ್ತು. 15 ಕೋಟಿಯಲ್ಲಿ ನಿರ್ಮಾಣವಾಗಿದ್ದ ಚಿತ್ರ ದೇಶಾದ್ಯಂತ 450 ಕೋಟಿ ರೂಪಾಯಿ ಗಳಿಸಿ ಕನ್ನಡ ಚಿತ್ರರಂಗ ಇತಿಹಾಸದಲ್ಲಿ ಹೊಸ ಭಾಷ್ಯ ಬರೆದಿತ್ತು.

ಇನ್ನು 2025ರ ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಚಿತ್ರವಾಗಿರುವ ಕಾಂತಾರ ಚಾಪ್ಟರ್ 1 ಬಿಡುಗಡೆಗೂ ಮುನ್ನವೇ ತೆಲುಗಿನ ರೈಟ್ಸ್ ಬಿಕರಿಯಾಗಿದೆ. ಮಾಹಿತಿ ಪ್ರಕಾರ, 100 ಕೋಟಿಗೂ ಹೆಚ್ಚು ಮೊತ್ತಕ್ಕೆ ಥಿಯೇಟರ್ ರೈಟ್ಸ್ ಬಿಕರಿಯಾಗಿದೆ. ತೆಲಂಗಾಣದ ನಿಜಾಮ್ ಭಾಗದ ರೈಟ್ಸ್ 40 ಕೋಟಿ, ಕರಾವಳಿ ಆಂಧ್ರದ ರೈಟ್ಸ್ 45 ಕೋಟಿ ಹಾಗೂ ಇತರೆ 15 ಕೋಟಿಗೆ ಬಿಕರಿಯಾಗಿದ್ದು ಒಟ್ಟಾರೆ 100 ಕೋಟಿ ಬಾಚಿಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran war: ಬುಶೆಹರ್ ಅಣುಸ್ಥಾವರದ ಮೇಲೆ ಅಮೆರಿಕ-ಇಸ್ರೇಲ್ ಕ್ಷಿಪಣಿ ದಾಳಿ, ಓರ್ವ ಸಾವು

ಇರಾನ್-ಇಸ್ರೇಲ್ ಯುದ್ಧದ ನಡುವೆ ಭಾರತದ ರಕ್ಷಣಾ ರಫ್ತು ಇತಿಹಾಸದಲ್ಲೇ ದಾಖಲೆಯ ಏರಿಕೆ!, ಖರೀದಿದಾರರು ಯಾರು?

ಭಾರತದತ್ತ ಹೊರಟಿದ್ದ ಇರಾನ್ ತೈಲ ಹೊತ್ತ ಹಡಗು ಏಕಾಏಕಿ ಚೀನಾಗೆ ರೀ-ರೂಟ್; ಕೇಂದ್ರ ಹೇಳಿದ್ದೇನು?

Iran war ನಡುವೆಯೂ ಭಾರತ ದೇಶೀಯ ಮತ್ತು ಬಾಹ್ಯ ಸವಾಲುಗಳ ಯಶಸ್ವಿಯಾಗಿ ನಿರ್ವಹಿಸಿದೆ: EAM Jaishankar

'ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ': AAP ಆರೋಪಗಳನ್ನು ತಳ್ಳಿಹಾಕಿದ ರಾಘವ್ ಚಡ್ಡಾ

SCROLL FOR NEXT