ಹಾಡಿನಲ್ಲಿ ದರ್ಶನ್  
ಸಿನಿಮಾ ಸುದ್ದಿ

ಜೈಲಲ್ಲಿದ್ರೂ ಕಡಿಮೆಯಾಗಿಲ್ಲ ಡಿ ಬಾಸ್ ಕ್ರೇಝ್: 'ದಿ ಡೆವಿಲ್' ಹಾಡಿಗೆ ಫ್ಯಾನ್ಸ್ ಫಿದಾ

ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನದಲ್ಲಿ ದೀಪಕ್ ಬ್ಲೂ ಹಾಡಿಗೆ ಧ್ವನಿಯಾಗಿದ್ದಾರೆ.

ನಟ ದರ್ಶನ್ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೆ ಜೈಲುಪಾಲಾಗಿದ್ದಾರೆ. ಈ ಮಧ್ಯೆ ಇಂದು ಅವರ ಬಹುನಿರೀಕ್ಷಿತ ಚಿತ್ರ ‘ದಿ ಡೆವಿಲ್’ ಸಿನಿಮಾದ ಬಿಡುಗಡೆಗೆ ಸಿದ್ಧತೆ ನಡೆಯುತ್ತಿದೆ.

ಅದರ ಮೊದಲ ಹಂತವಾಗಿ ಚಿತ್ರದ ಮೊದಲ ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಸಾಹಿತ್ಯ ಹಾಡು ಇಂದು ಬಿಡುಗಡೆಯಾಗಿದೆ. ಎಂದಿನಂತೆ ದರ್ಶನ್ ಸ್ಟೈಲ್ ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಹಾಡು ಬಿಡುಗಡೆಯಾದ ಒಂದೇ ಗಂಟೆಯಲ್ಲಿ 8 ಲಕ್ಷಕ್ಕೂ ಅಧಿಕ ಮಂದಿ ಯೂಟ್ಯೂಬ್ ನಲ್ಲಿ ವೀಕ್ಷಣೆ ಮಾಡಿದ್ದಾರೆ.

ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನದಲ್ಲಿ ದೀಪಕ್ ಬ್ಲೂ ಹಾಡಿಗೆ ಧ್ವನಿಯಾಗಿದ್ದಾರೆ.

ದರ್ಶನ್ ಜೊತೆ ನಾಯಕಿಯರಾಗಿ ರಚನಾ ರೈ, ಶರ್ಮಿಳಾ ಮಾಂಡ್ರೆ ಮುಂತಾದವರು ‘ದಿ ಡೆವಿಲ್’ ಸಿನಿಮಾದಲ್ಲಿ ನಟಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರಿಗೆ ಈ ಮೊದಲು ಹೈಕೋರ್ಟ್ ಜಾಮೀನು ನೀಡಿತ್ತು. ಆಗ ‘ದಿ ಡೆವಿಲ್’ ಸಿನಿಮಾದ ಶೂಟಿಂಗ್ ಮತ್ತು ಡಬ್ಬಿಂಗ್ ಕೆಲಸಗಳನ್ನು ಅವರು ಮುಗಿಸಿಕೊಟ್ಟರು.

ಅಂದುಕೊಂಡಂತೆ ಆಗಿದ್ದರೆ, ಆಗಸ್ಟ್ 15ರಂದು ಈ ಹಾಡು ಬಿಡುಗಡೆ ಆಗಬೇಕಿತ್ತು. ಆದರೆ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್‌ ರದ್ದುಗೊಳಿಸಿದ ಕಾರಣದಿಂದಾಗಿ, ಆಗಸ್ಟ್ 14ರಂದು ದರ್ಶನ್ ಮತ್ತೆ ಜೈಲುಪಾಲಾದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

ಶ್ರೀಶೈಲ: ಹೋಟೆಲ್‌ನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ; ಕಾರಣ ನಿಗೂಢ