ಡೆವಿಲ್ 
ಸಿನಿಮಾ ಸುದ್ದಿ

‘ಡೆವಿಲ್': ನಾಳೆ ಮಧ್ಯಾಹ್ನ 1:05 ರಿಂದ ಅಡ್ವಾನ್ಸ್ ಬುಕ್ಕಿಂಗ್ ಓಪನ್! ಈಗಿನಿಂದಲೇ ಅಭಿಮಾನಿಗಳ ಭರ್ಜರಿ ಸಿದ್ಧತೆ; Video

ಬೆಂಗಳೂರು, ಶಿವಮೊಗ್ಗದ ವೀರಭದ್ರೇಶ್ವರ ಚಿತ್ರಮಂದಿರ ಸೇರಿದಂತೆ ರಾಜ್ಯದ ವಿವಿಧೆಡೆ ಚಿತ್ರಮಂದಿರಗಳ ಮೇಲೆ ದರ್ಶನ್ ಅವರ ಕಟೌಟ್ ಗಳು ರಾರಾಜಿಸುತ್ತಿವೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ‘ಡೆವಿಲ್’ ಸಿನಿಮಾ ಇದೇ ಡಿಸೆಂಬರ್ 11ರಂದು ರಿಲೀಸ್ ಆಗುತ್ತಿದೆ. ಈ ಚಿತ್ರದ ಮೇಲೆ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗಿದೆ. ನಾಳೆ ಮಧ್ಯಾಹ್ನ 1: 0ರಿಂದಈ ಸಿನಿಮಾದ ಅಡ್ವಾನ್ಸ್ ಬುಕ್ಕಿಂಗ್ ಓಪನ್ ಓಪನ್ ಆಗಲಿದೆ.

ಇದಕ್ಕಾಗಿ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಬೆಂಗಳೂರು, ಶಿವಮೊಗ್ಗದ ವೀರಭದ್ರೇಶ್ವರ ಚಿತ್ರಮಂದಿರ ಸೇರಿದಂತೆ ರಾಜ್ಯದ ವಿವಿಧೆಡೆ ಚಿತ್ರಮಂದಿರಗಳ ಮೇಲೆ ದರ್ಶನ್ ಅವರ ಕಟೌಟ್ ಗಳು ರಾರಾಜಿಸುತ್ತಿವೆ.

ಬೆಂಗಳೂರಿನ ನವರಂಗ ಚಿತ್ರಮಂದಿರದ ಮುಂಭಾಗ ಪಟಾಕಿ ಸಿಡಿಸಿ, ಬೃಹತ್ ಮೂರು ಕಟೌಟ್ ಹಾಕುವ ಮೂಲಕ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಶಿವಮೊಗ್ಗದಲ್ಲಿಯೂ ಇದೇ ರೀತಿ ಭರ್ಜರಿ ಸಿದ್ಧತೆ ನಡೆಸಲಾಗಿದೆ.

ಇನ್ನೂ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಕೇವಲ ಅರ್ಧ ಗಂಟೆಯಲ್ಲಿ 3 ಲಕ್ಷ ಮಂದಿ ಟ್ರೇಲರ್ ವೀಕ್ಷಿಸಿದ್ದಾರೆ. ಹೊಸ ಅವತಾರದಲ್ಲಿ ದರ್ಶನ್ ಅವರನ್ನು ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಸಿನಿಮಾ ಬಗ್ಗೆ ಟ್ರೇಲರ್ ನಿರೀಕ್ಷೆ ಹೆಚ್ಚಿಸಿದೆ.

ದರ್ಶನ್ ಅವರು ಟ್ರೇಲರ್​ನಲ್ಲಿ ಹಲವು ಗೆಟಪ್​ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಸ್ಟೈಲಿಶ್ ಲುಕ್, ಮಾಸ್ ಡೈಲಾಗ್ ಗಮನ ಸೆಳೆಯುವಂತಿದೆ. ‘ಸೂರ್ಯಂಗೆ ಹೆಚ್ಚು ಹೊತ್ತು ಗ್ರಹಣ ಹಿಡಿಯಲ್ಲ. ನಾನು ಬರ್ತಿದೀನಿ ಚಿನ್ನ’ ಎಂದು ದರ್ಶನ್ ಡೈಲಾಗ್ ಹೇಳುವಾಗ ರಿಲೀಸ್ ದಿನಾಂಕ ತೋರಿಸಲಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

'ಕಳ್ಳಿ, ಕಳ್ಳಿ' ಅಂತಾ ಘೋಷಣೆ ಕೂಗಿ ಮಮತಾ ಬ್ಯಾನರ್ಜಿ ಕಾರಿನ ಮೇಲೆ ಕಲ್ಲು ತೂರಾಟ, ಕೆಸರು ಎರಚಿ ಆಕ್ರೋಶ! ಭಯಾನಕ Video

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಬಿಡದಿ ಟೌನ್‌ಶಿಪ್‌ ಯೋಜನೆ ಬಗ್ಗೆ BJP-JDS ಅಪಪ್ರಚಾರ, ರೈತರ ಭೂಮಿ ಬಲವಂತವಾಗಿ ಪಡೆಯಲ್ಲ: ಸಚಿವ ಯತೀಂದ್ರ

ಖಾತೆ ಹಂಚಿಕೆಗೂ ಮುನ್ನ ಸಚಿವ ನಾಗೇಂದ್ರಗೆ ಸಂಕಷ್ಟ! ವಿಶೇಷ ನ್ಯಾಯಾಲಯದ ಜಾಮೀನು ಷರತ್ತು ಉಲ್ಲಂಘಿಸಿದ ಆರೋಪ