ಹಾವೇರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಜನವರಿಯಲ್ಲಿ ಜಾಮೀನು ಸಿಗುವ ನಿರೀಕ್ಷೆಯಿದೆ ಎಂದು ಸಚಿವ ಜಮೀರ್ ಅಹ್ಮದ್ ಪುತ್ರ ಝೈದ್ ಖಾನ್ ಹೇಳಿದ್ದಾರೆ. ಕಲ್ಟ್ ಸಿನಿಮಾ ಪ್ರಚಾರದ ವೇಳೆ ಮಾತನಾಡಿದ ನಟ ಝೈದ್ ಖಾನ್, ದರ್ಶನ್ ಅಣ್ಣನಿಗೆ ಜನವರಿಯಲ್ಲಿ ಬೇಲ್ ಸಿಗುವ ಸಾಧ್ಯತೆ ಇದೆ. ಒಂದು ವೇಳೆ ಸಿಗದಿದ್ದರೆ ನಾನೇ ಜೈಲಿಗೆ ಹೋಗಿ ಅವರ ಆಶಿರ್ವಾದ ಪಡೆದು ಬರುತ್ತೇನೆ ಎಂದಿದ್ದಾರೆ. ಸಂಕಷ್ಟದ ಸಮಯದಲ್ಲೂ ದರ್ಶನ್ ಅವರು ಅಭಿಮಾನಿಗಳಿಗೆ ಯಶಸ್ವಿ ಚಿತ್ರವನ್ನು ಕೊಟ್ಟಿದ್ದಾರೆ. ಸಿನಿಮಾ ಗೆದ್ದ ನಂತರ ಮಾತನಾಡಿದರೆ ಅದಕ್ಕೆ ತೂಕ ಬರುತ್ತದೆ ಎಂದು ನಾನು ನಂಬಿದ್ದೇನೆ ಎಂದರು.