ದರ್ಶನ್-ರಾಜುಗೌಡ-ಸುದೀಪ್ 
ಸಿನಿಮಾ ಸುದ್ದಿ

ಸುದೀಪ್ ಮುಂದೆ ಮಾಜಿ ಶಾಸಕ ರಾಜುಗೌಡ ನೀಡಿದ್ದ 'ಕಾಂಜಿ, ಪೀಂಜಿ' ಹೇಳಿಕೆಗೆ ದರ್ಶನ್ ಅಭಿಮಾನಿಗಳ ತಿರುಗೇಟು!

ಹುಬ್ಬಳ್ಳಿಯಲ್ಲಿ ನಡೆದ ಮಾರ್ಕ್‌ ಚಿತ್ರದ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್ ನೀಡಿದ್ದ 'ಯುದ್ಧಕ್ಕೆ ಒಂದು ಪಡೆ ಸಿದ್ಧವಾಗಿದೆ' ಎಂಬ ಹೇಳಿಕೆ ಈಗ ಕನ್ನಡ ಚಿತ್ರರಂಗದಲ್ಲಿ ವಿವಾದ ಭುಗಿಲೇಳಲು ಕಾರಣವಾಗಿದೆ. ಈ ಹೇಳಿಕೆಗೆ ಒಬ್ಬೊಬ್ಬರು ಒಂದೊಂದು ರೀತಿ ಅರ್ಥ ಕೊಡುತ್ತಿದ್ದಾರೆ.

ಹುಬ್ಬಳ್ಳಿಯಲ್ಲಿ ನಡೆದ ಮಾರ್ಕ್‌ ಚಿತ್ರದ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್ ನೀಡಿದ್ದ 'ಯುದ್ಧಕ್ಕೆ ಒಂದು ಪಡೆ ಸಿದ್ಧವಾಗಿದೆ' ಎಂಬ ಹೇಳಿಕೆ ಈಗ ಕನ್ನಡ ಚಿತ್ರರಂಗದಲ್ಲಿ ವಿವಾದ ಭುಗಿಲೇಳಲು ಕಾರಣವಾಗಿದೆ. ಈ ಹೇಳಿಕೆಗೆ ಒಬ್ಬೊಬ್ಬರು ಒಂದೊಂದು ರೀತಿ ಅರ್ಥ ಕೊಡುತ್ತಿದ್ದು ತಮ್ಮ ನಾಯಕನನ್ನು ದರ್ಶನ್ ಅಭಿಮಾನಿಗಳು ಸಮರ್ಥಿಸಿಕೊಂಡಿದ್ದಾರೆ.

'ಯುದ್ಧ ಹೇಳಿಕೆ'ಗೆ ನಟ ಕಿಚ್ಚ ಸುದೀಪ್ ಸ್ಪಷ್ಟನೆ ಕೊಟ್ಟಿದ್ದು ಯಾರಿಗಾದರೂ ವಾರ್ನಿಂಗ್ ಕೊಡಬೇಕಿದ್ದರೆ ವೇದಿಕೆ ಬೇಕಿಲ್ಲ. ಭಾಷಣದಲ್ಲಿ ಪೈರಸಿ ಎಂದು ಹೇಳುವ ಅವಶ್ಯಕತೆ ಇರಲಿಲ್ಲ. ಹೀಗಾಗಿ ಪೈರಸಿ ಬಗ್ಗೆ ವಾರ್ನ್​ ಮಾಡಿದ್ದು ತಪ್ಪಾ ಎಂದು ಪ್ರಶ್ನಿಸಿದರು. ಈ ಮಧ್ಯೆ ದರ್ಶನ್ ಅಭಿಮಾನಿಗಳು ಮಾಜಿ ಬಿಜೆಪಿ ಶಾಸಕ ರಾಜುಗೌಡ ವಿರುದ್ಧ ಕಿಡಿಕಾರಿದ್ದಾರೆ.

ಹುಬ್ಬಳ್ಳಿ ಕಾರ್ಯಕ್ರಮದಲ್ಲಿ ರಾಜುಗೌಡ ಮಾತನಾಡಿ, ಸುದೀಪ್ ಸರ್ ಗೆ ಕಾಂಜಿ, ಪೀಂಜಿ ಅಭಿಮಾನಿಗಳಿಲ್ಲ ಎಂದು ಹೇಳಿದ್ದು ಇದು ದರ್ಶನ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ರಾಬರ್ಟ್ ಚಿತ್ರ ಬಿಡುಗಡೆ ವೇಳೆ ರಾಜುಗೌಡ ದರ್ಶನ್ ಜೊತೆಗಿದ್ದ ವಿಡಿಯೋವನ್ನು ಹಂಚಿಕೊಳ್ಳುವ ಮೂಲಕ ತಿರುಗೇಟು ನೀಡಿದ್ದಾರೆ. ಅಂದು ದರ್ಶನ್ ಜೊತೆಗಿದ್ದ ರಾಜುಗೌಡ ಇದೀಗ ಸುದೀಪ್ ಜೊತೆ ಸೇರಿಕೊಂಡಿದ್ದಾರೆ ಎಂದು ಲೇವಡಿ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!

ರಾಮ ಮಂದಿರ ದೇಣಿಗೆ ಕಳ್ಳತನ: ಚಂಪತ್ ರಾಯ್, ಅನಿಲ್ ಮಿಶ್ರಾಗೆ ಉತ್ತರಪ್ರದೇಶ SIT ಕ್ಲೀನ್ ಚಿಟ್!

PM CARES ನಿಧಿ ವಿವರ ಬಹಿರಂಗ; ದೇಣಿಗೆಗಳಲ್ಲಿ ತೀವ್ರ ಕುಸಿತ ವಿದೇಶಿ ದೇಣಿಗಗಳ ಬಗ್ಗೆ ಕೇಂದ್ರ ಹೇಳಿದ್ದೇನು?

ಸಚಿವ ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳ ಪಟ್ಟು: ಗದ್ದಲ, 2ನೇ ದಿನವೂ ವಿಧಾನಸಭೆಯ ಕಲಾಪ ಬಲಿ!

India vs Sri Lanka: ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆದ ರಿಷಭ್ ಪಂತ್; ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟರ್!