ನಂದಿನಿ 
ಸಿನಿಮಾ ಸುದ್ದಿ

ಕ್ಷಮಿಸುಬಿಡು ಅಮ್ಮಾ...: ನಟಿ ನಂದಿನಿ ಆತ್ಮಹತ್ಯೆ; ಡೆತ್‌ ನೋಟ್‌ ಸೀಕ್ರೆಟ್‌ ಬಹಿರಂಗ!

ಕನ್ನಡ, ತೆಲುಗು ಮತ್ತು ತಮಿಳು ಕಿರುತರೆಯಲ್ಲಿ ಮಿಂಚುತ್ತಿದ್ದ ನಟಿ ನಂದಿನಿ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಬೆಂಗಳೂರು: ಕನ್ನಡದ ಖ್ಯಾತ ಸೀರಿಯಲ್ ನಟಿ ನಂದಿನಿ ಸಾವಿಗೆ ಶರಣಾಗಿದ್ದಾರೆ. ಜೀವ ಹೂವಾಗಿದೆ, ಸಂಘರ್ಷ, ನೀನಾದೆ ನಾ ಧಾರಾವಾಹಿ ಮೂಲಕ ಜನಪ್ರಿಯತೆ ಗಳಿಸಿದ್ದರು. ಬೆಂಗಳೂರಿನ ಆರ್‌ ಆರ್‌ ನಗರದಲ್ಲಿ ಈ ಘಟನೆ ನಡೆದಿದೆ.

ಕನ್ನಡ, ತೆಲುಗು ಮತ್ತು ತಮಿಳು ಕಿರುತರೆಯಲ್ಲಿ ಮಿಂಚುತ್ತಿದ್ದ ನಟಿ ನಂದಿನಿ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವೃತ್ತಿಜೀವನದಲ್ಲಿ ಸಕ್ರಿಯರಾಗಿದ್ದ ನಂದಿನಿ ಸರ್ಕಾರಿ ಕೆಲಸಕ್ಕೆ ಒತ್ತಾಯಿಸುತ್ತಿದ್ದ ಹಿನ್ನೆಲೆ ಮೃತಪಟ್ಟಿರುವುದಾಗಿ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಮೂಲತಃ ಬಳ್ಳಾರಿ ಜಿಲ್ಲೆ ಕೊಟ್ಟೂರಿನವರಾದ ನಂದಿನಿ, ಬೆಂಗಳೂರಿನಲ್ಲಿ ವಾಸವಿದ್ದರು. ಕನ್ನಡ ಮಾತ್ರವಲ್ಲ, ತಮಿಳು ಧಾರಾವಾಹಿಗಳಲ್ಲೂ ನಟಿಸಿದ್ದರು. ಪ್ರಸ್ತುತ ತಮಿಳಿನ ಗೌರಿ ಧಾರಾವಾಹಿಯಲ್ಲಿ ಲೀಡ್‌ ರೋಲ್‌ನಲ್ಲಿ ಅಭಿನಯಿಸುತ್ತಿದ್ದರು. ಈ ಧಾರಾವಾಹಿಯಲ್ಲಿ ಕನಕ ಹಾಗೂ ದುರ್ಗಾ ಎನ್ನುವ ದ್ವಿಪಾತ್ರದಲ್ಲಿ ನಟಿಸುತ್ತಿದ್ದರು.

ನಂದಿನಿ ತಂದೆ ಸರ್ಕಾರಿ ಶಿಕ್ಷಕರಾಗಿದ್ದರು. ಮೂರು ವರ್ಷಗಳ ಹಿಂದೆ ಅವರು ನಿಧನರಾಗಿದ್ದರು. ತಂದೆಯ ಕೆಲಸವನ್ನು ಮಾಡುವಂತೆ ಕುಟುಂಬಸ್ಥರಿಂದ ಒತ್ತಾಯ ಇತ್ತು. ಆದರೆ ಟೀಚರ್ ಕೆಲಸ ನಂದಿನಿಗೆ ಇಷ್ಟವಿರಲಿಲ್ಲ. ಅಲ್ಲದೇ ಕೆಲ ಅನಾರೋಗ್ಯ ಸಮಸ್ಯೆಯಿಂದ ನಂದಿನಿದ್ದರು ಎಂದು ತಿಳಿದುಬಂದಿದೆ.

2025ರ ಆಗಸ್ಟ್‌ನಿಂದ ಮೈಲಸಂದ್ರದ ಪಿಜಿಯಲ್ಲಿ ವಾಸಿಸುತ್ತಿದ್ದರು. ಭಾನುವಾರ ತನ್ನ ಗೆಳೆಯ ಪುನೀತ್‌ ಎಂಬುವವರ ಮನೆಗೆ ಹೋಗಿ ರಾತ್ರಿ 11.50ರ ಸುಮಾರಿಗೆ ವಾಪಸ್‌ ಬಂದಿದ್ದರು. ಪುನಃ ಪುನೀತ್‌ ಕರೆ ಮಾಡಿದಾಗ ಸ್ವೀಕರಿಸಿರಲಿಲ್ಲ. ಇದರಿಂದ ಅನುಮಾನಗೊಂಡ ಪುನೀತ್‌, ಪಿಜಿ ಮ್ಯಾನೇಜರ್‌ಗೆ ತಿಳಿಸಿದ್ದರು. ಪಿಜಿ ಮ್ಯಾನೇಜರ್‌ ಹಾಗೂ ಸಿಬ್ಬಂದಿ ನಂದಿನಿ ಕೊಠಡಿ ಬಳಿ ತೆರಳಿ ನೋಡಿದಾಗ ವೇಲ್‌ನಿಂದ ಕಿಟಕಿ ಸರಳಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ನಂದಿನಿ ಅವರು ಡೈರಿಯಲ್ಲಿ ಡೆತ್‌ನೋಟ್‌ ಬರೆದಿರುವುದು ಕಂಡು ಬಂದಿದೆ. ನನಗೆ ಸರಕಾರಿ ಕೆಲಸ ಇಷ್ಟವಿಲ್ಲ. ನಟನೆ ಬಗ್ಗೆ ಆಸಕ್ತಿಯಿದ್ದು, ಅದರಲ್ಲಿಯೇ ಮುಂದುವರಿಯಬೇಕು. ಆದರೆ, ಮನೆಯವರು ಇದಕ್ಕೆ ಒಪ್ಪುತ್ತಿಲ್ಲ ಎಂದು ಬರೆದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

BJPಗೆ ಒಂದು ಅವಕಾಶ ಕೊಡಿ, ಬಂಗಾಳದಲ್ಲಿ ಭ್ರಷ್ಟಾಚಾರ, ಒಳನುಸುಳುವಿಕೆ ಕೊನೆಗೊಳಿಸುತ್ತೇವೆ: ಅಮಿತ್ ಶಾ ಮನವಿ

HAL ನಿರ್ಮಿತ 'ಧ್ರುವ್ ಎನ್‌ಜಿ' ಹೆಲಿಕಾಪ್ಟರ್‌ಗೆ ಸಚಿವ ರಾಮ್ ಮೋಹನ್ ನಾಯ್ಡು ಹಸಿರು ನಿಶಾನೆ

ಕೋಗಿಲು ಮನೆಗಳ ತೆರವು ಕೇಸ್​ಗೆ ಟ್ವಿಸ್ಟ್: 2016ರ ಮೊದಲು ಇಲ್ಲಿ ಮನೆಗಳೇ ಇರಲಿಲ್ಲ, ನಿವಾಸಿಗಳ ಆರೋಪಕ್ಕೆ ಸ್ಯಾಟಲೈಟ್ ಫೋಟೋ ಮೂಲಕ GBA ತಿರುಗೇಟು..!

Kogilu layout Demolition: ಮಾನವೀಯತೆ ನೆಲೆಯಲ್ಲಿ ಅರ್ಹ ಸಂತ್ರಸ್ತರಿಗೆ ಸೂರು ಕಲ್ಪಿಸಿಕೊಡಲಾಗುವುದು; ಸಿಎಂ ಸಿದ್ದರಾಮಯ್ಯ

ರಾಜ್ಯಾದ್ಯಂತ ವೈಕುಂಠ ಏಕಾದಶಿ ಸಂಭ್ರಮ: ತಿಮ್ಮಪ್ಪನ ದರ್ಶನಕ್ಕೆ ದೇವಸ್ಥಾನಗಳಲ್ಲಿ ಭಕ್ತ ಸಾಗರ; ಹಲವೆಡೆ ವಾಹನ ಸಂಚಾರ ನಿರ್ಬಂಧ

SCROLL FOR NEXT