ದರ್ಶನ್ ಅಭಿನಯದ ಡೆವಿಲ್ 
ಸಿನಿಮಾ ಸುದ್ದಿ

Darshan ಅಭಿಮಾನಿಗಳಿಗೆ ಸಿಹಿ ಸುದ್ದಿ; Devil ಟೀಸರ್ ಬಿಡುಗಡೆ ಯಾವಾಗ ಗೊತ್ತಾ?

ಜೈಲುವಾಸದ ಬಳಿಕ ಇದೀಗ ಜಾಮೀನಿನ ಮೇಲೆ ಹೊರಗೆ ಬಂದಿರುವ ನಟ ದರ್ಶನ್ ಶೀಘ್ರದಲ್ಲೇ ತಮ್ಮ ಚಿತ್ರಗಳ ಚಿತ್ರೀಕರಣದಲ್ಲಿ ತೊಡಗಿಲಿದ್ದು, ಇದಕ್ಕೆ ಇಂಬು ನೀಡುವಂತೆ ಇದೀಗ ಡೆವಿಲ್ ಚಿತ್ರದ ಟೀಸರ್ ಬಿಡುಗಡೆಯಾಗುತ್ತಿದೆ.

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಡೆವಿಲ್ ಚಿತ್ರ ತಂಡ ಸಿಹಿಸುದ್ದಿ ನೀಡುತ್ತಿದ್ದು, ಶೀಘ್ರದಲ್ಲೇ ಚಿತ್ರದ ಟೀಸರ್ ಬಿಡುಗಡೆಗೆ ನಿರ್ಧರಿಸಿದೆ.

ಹೌದು.. ಜೈಲುವಾಸದ ಬಳಿಕ ಇದೀಗ ಜಾಮೀನಿನ ಮೇಲೆ ಹೊರಗೆ ಬಂದಿರುವ ನಟ ದರ್ಶನ್ ಶೀಘ್ರದಲ್ಲೇ ತಮ್ಮ ಚಿತ್ರಗಳ ಚಿತ್ರೀಕರಣದಲ್ಲಿ ತೊಡಗಿಲಿದ್ದು, ಇದಕ್ಕೆ ಇಂಬು ನೀಡುವಂತೆ ಇದೀಗ ಡೆವಿಲ್ ಚಿತ್ರದ ಟೀಸರ್ ಬಿಡುಗಡೆಯಾಗುತ್ತಿದೆ. ದರ್ಶನ್ ಅವರ ಜನ್ಮದಿನದಂದು ಟೀಸರ್ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ.

ಬೆನ್ನು ನೋವಿನ ಕಾರಣ ಈಗಾಗಲೇ ನಟ ದರ್ಶನ್ ಈ ವರ್ಷ ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ.. ಹೀಗಾಗಿ ಅಭಿಮಾನಿಗಳಲ್ಲಿ ಕ್ಷಮೆ ಕೋರುತ್ತೇನೆ ಎಂದು ಹೇಳಿದ್ದರು. ಹುಟ್ಟುಹಬ್ಬದ ನೆವದಲ್ಲಾದರೂ ತಮ್ಮ ನೆಚ್ಚಿನ ನಟನ ನೋಡಲು ಕಾತುರರಾಗಿದ್ದ ಅಭಿಮಾನಿಗಳಿಗೆ ದರ್ಶನ್ ನಿರ್ಧಾರ ನಿರಾಶೆ ಮೂಡಿಸಿತ್ತು. ಆದರೆ ಇದೀಗ ಡೆವಿಲ್ ಚಿತ್ರತಂಡ ಅಭಿಮಾನಿಗಳಿಗೆ ಟೀಸರ್ ಮೂಲಕ ಉಡುಗೊರೆ ನೀಡುತ್ತಿದೆ.

ಇಷ್ಟಕ್ಕೂ ಯಾವಾಗ ಟೀಸರ್ ಬಿಡುಗಡೆ?

ಇದೇ ಫೆಬ್ರವರಿ 16ರಂದು ನಟ ದರ್ಶನ್ ರ ಹುಟ್ಟುಹಬ್ಬವಿದ್ದು ಅಂದೇ ಡೆವಿಲ್ ಚಿತ್ರದ ಟೀಸರ್ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿದೆ. ಈ ಸಂಬಂಧ ಚಿತ್ರದ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಟ್ವಿಟರ್ ನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, 'ನಮ್ಮ ಹೊಸ ಪ್ರಯತ್ನದ ಹಾರಿವು ಶೀಘ್ರದಲ್ಲೇ ನಿಮ್ಮ ಮುಂದೆ!' ಎಂದು ಟ್ವೀಟ್ ಮಾಡಿದ್ದಾರೆ.

ಮಿಲನ ಪ್ರಕಾಶ್ ನಿರ್ದೇಶನ

ಇನ್ನು ಡೆವಿಲ್ ಚಿತ್ರವನ್ನು ಮಿಲನ ಖ್ಯಾತಿಯ ನಿರ್ದೇಶಕ ಪ್ರಕಾಶ್ ವೀರ್ ನಿರ್ದೇಸುತ್ತಿದ್ದು, ಚಿತ್ರವನ್ನು ಜೆ ಜಯಮ್ಮ ಅವರು ನಿರ್ಮಾಣ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ