ಎದ್ದೇಳು ಮಂಜುನಾಥ 2 ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

ಗುರುಪ್ರಸಾದ್ ನಿರ್ದೇಶಿಸಿ ನಟಿಸಿರುವ ಕೊನೆಯ ಚಿತ್ರ 'ಎದ್ದೇಳು ಮಂಜುನಾಥ 2' ಟೀಸರ್ ಬಿಡುಗಡೆ

ಮೈಸೂರು ರಮೇಶ್ ನಿರ್ಮಾಣದ ಎದ್ದೇಳು ಮಂಜುನಾಥ 2 ಚಿತ್ರಕ್ಕೆ ಗುರುಪ್ರಸಾದ್ ಅವರ ಬಹುತೇಕ ಎಲ್ಲ ಚಿತ್ರಗಳಿಗೆ ಸಂಗೀತ ಸಂಯೋಜಿಸಿದ್ದ ಅನೂಪ್ ಸೀಳಿನ್ ಅವರ ಸಂಗೀತವಿದೆ.

ನಿರ್ದೇಶಕ ಗುರುಪ್ರಸಾದ್ ಅವರ ಕೊನೆಯ ಚಿತ್ರ 'ಎದ್ದೇಳು ಮಂಜುನಾಥ 2' ಫೆಬ್ರುವರಿ 21 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಗೆ ಸಿದ್ಧವಾಗಿದೆ. ಎದ್ದೇಳು ಮಂಜುನಾಥ ಚಿತ್ರದ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ಗುರುಪ್ರಸಾದ್ ಎದ್ದೇಳು ಮಂಜುನಾಥ 2 ಚಿತ್ರವನ್ನು ನಿರ್ದೇಶಿಸಿದ್ದರು. ಚಿತ್ರದ ಬಿಡುಗಡೆಗೂ ಮುನ್ನವೇ ನಿರ್ದೇಶಕರು ಆತ್ಮಹತ್ಯೆ ಮಾಡಿಕೊಂಡಿದ್ದರಿಂದ ನಿರ್ಮಾಪಕರು ಬಾಕಿ ಉಳಿದಿದ್ದ ಕಾರ್ಯಗಳನ್ನು ಪೂರ್ಣಗೊಳಿಸಿ ಯೋಜನೆಯನ್ನು ತೆರೆಗೆ ತರಲು ಹರಸಾಹಸ ಪಟ್ಟಿದ್ದಾರೆ.

ಚಿತ್ರದ ಟ್ರೇಲರ್ ಬಿಡುಗಡೆ ಮಾಡುವ ಮಾರ್ಗವನ್ನು ಅನುಸರಿಸುವ ಬದಲು, ಟೀಸರ್‌ಗಳ ರೂಪದಲ್ಲಿ ಚಿತ್ರದ ತುಣುಕುಗಳನ್ನು ಹೊರತರುವ ಮೂಲಕ ಸಂಚಲನ ಮೂಡಿಸಲು ಚಿತ್ರತಂಡ ನಿರ್ಧರಿಸಿದೆ. 'ಕಿತ್ತೋದ ಪ್ರೇಮ' ಹಾಡಿನ ಬಿಡುಗಡೆಯ ನಂತರ, ಚಿತ್ರತಂಡ ಇದೀಗ ಮೊದಲ ಟೀಸರ್ ಬಿಡುಗಡೆ ಮಾಡಲು ಸಜ್ಜಾಗಿದೆ.

ಮೈಸೂರು ರಮೇಶ್ ನಿರ್ಮಾಣದ ಎದ್ದೇಳು ಮಂಜುನಾಥ 2 ಚಿತ್ರಕ್ಕೆ ಗುರುಪ್ರಸಾದ್ ಅವರ ಬಹುತೇಕ ಎಲ್ಲ ಚಿತ್ರಗಳಿಗೆ ಸಂಗೀತ ಸಂಯೋಜಿಸಿದ್ದ ಅನೂಪ್ ಸೀಳಿನ್ ಅವರ ಸಂಗೀತವಿದೆ. ಅಶೋಕ್ ಸಾಮ್ರಾಟ್ ಅವರ ಛಾಯಾಗ್ರಹಣವಿದೆ. ಎದ್ದೇಳು ಮಂಜುನಾಥ ಚಿತ್ರದಲ್ಲಿ ನಾಯಕನಾಗಿ ಜಗ್ಗೇಶ್ ಕಾಣಿಸಿಕೊಂಡಿದ್ದರು. ಈ ಬಾರಿ ಗುರುಪ್ರಸಾದ್ ಅವರೇ ಬಣ್ಣ ಹಚ್ಚಿದ್ದರೆ, ನಾಯಕಿಯಾಗಿ ರಚಿತಾ ಮಹಾಲಕ್ಷ್ಮಿ ಕಾಣಿಸಿಕೊಂಡಿದ್ದಾರೆ. ರಂಗನಾಯಕದಲ್ಲಿಯೂ ರಚಿತಾ ನಾಯಕಿಯಾಗಿದ್ದರು. ಚಿತ್ರದ ತಾರಾಗಣದಲ್ಲಿ ಶರತ್ ಲೋಹಿತಾಶ್ವ, ಚೈತ್ರಾ ಆಚಾರ್, ವಿಘ್ನೇಶ್ ಕತ್ತಿ ಮುಂತಾದವರು ಇದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test Day 3: ಫಾಲೋ ಆನ್ ಭೀತಿಯಲ್ಲಿ ಲಂಕಾಪಡೆ, ಮಳೆಯಿಂದಾಗಿ 3ನೇ ದಿನದಾಟ ಮೊಟಕು!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!