ಸಮರ್ಜಿತ್ ಲಂಕೇಶ್ - ಮೋಹನ್‌ಲಾಲ್ 
ಸಿನಿಮಾ ಸುದ್ದಿ

ನಂದ ಕಿಶೋರ್ ನಿರ್ದೇಶನದ, ಮೋಹನ್ ಲಾಲ್ ನಟನೆಯ 'ವೃಷಭ' ಚಿತ್ರದಲ್ಲಿ ಸಮರ್ಜಿತ್ ಲಂಕೇಶ್?

ಚಿತ್ರದಲ್ಲಿ ರಾಗಿಣಿ ದ್ವಿವೇದಿ, ಸಿ ಚಂದ್ರಕಾಂತ್, ರಾಮಚಂದ್ರರಾಜು, ನೇಹಾ ಸಕ್ಸೇನಾ, ಯಶೋಧ, ಮತ್ತು ಸಂಜಯ್ ಕೃಷ್ಣ ಮುಂತಾದವರು ನಟಿಸಿದ್ದಾರೆ.

ನಿರ್ದೇಶಕ ನಂದ ಕಿಶೋರ್ ಅವರು ಮಲಯಾಳಂ ಸೂಪರ್‌ಸ್ಟಾರ್ ಮೋಹನ್‌ಲಾಲ್ ನಟಿಸಿರುವ ಮೊದಲ ಪ್ಯಾನ್-ಇಂಡಿಯಾ ಚಿತ್ರ ವೃಷಭ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಚಿತ್ರವು ತನ್ನ ಪ್ರಾಥಮಿಕ ಚಿತ್ರೀಕರಣವನ್ನು ಮುಗಿಸಿದ್ದು, ವೃಷಭ ಚಿತ್ರವನ್ನು ಆಕ್ಷನ್-ಪ್ಯಾಕ್ಡ್ ಎಂಟರ್‌ಟೈನರ್ ಎಂದು ಬಿಂಬಿಸಲಾಗಿದೆ. ಇದು 500 ವರ್ಷಗಳ ಹಿಂದಿನ ತಂದೆ-ಮಗನ ಕಥೆಯನ್ನು ಒಳಗೊಂಡಿದೆ. ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ಬಿಡುಗಡೆ ಮಾಡುವ ಗುರಿಯನ್ನು ಚಿತ್ರತಂಡ ಹೊಂದಿದೆ. ಇದೀಗ ಚಿತ್ರದಲ್ಲಿ ಸಮರ್ಜಿತ್ ಲಂಕೇಶ್ ನಟಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಪುತ್ರ ಸಮರ್ಜಿತ್ 'ಗೌರಿ' ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರು. ಸಮರ್ಜಿತ್ ಅವರು ಚಿತ್ರದಲ್ಲಿ ನಟಿಸುತ್ತಿರುವ ಬಗ್ಗೆ ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ಮಾಡಲಿದೆ. ಮೂಲಗಳ ಪ್ರಕಾರ, ಈ ಬಹುಭಾಷಾ ಚಿತ್ರದಲ್ಲಿ ತೆಲುಗು ನಟ ರೋಷನ್ ಮೇಕ ಬದಲಿಗೆ ಸಮರ್ಜಿತ್ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಸಮರ್ಜಿತ್ ಈಗಾಗಲೇ ನಾಲ್ಕು ತಿಂಗಳಿಗೂ ಹೆಚ್ಚು ಕಾಲ ಮುಂಬೈ ಮತ್ತು ಇತರ ಸ್ಥಳಗಳಲ್ಲಿ ಈಗಾಗಲೇ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ. ಚಿತ್ರಕ್ಕಾಗಿ ನಟ ಕುದುರೆ ಸವಾರಿ, ಕತ್ತಿವರಸೆ ಮತ್ತು ಜಿಮ್ನಾಸ್ಟಿಕ್ಸ್ ಸೇರಿದಂತೆ ಪಾತ್ರಕ್ಕಾಗಿ ಕಠಿಣ ತರಬೇತಿ ಪಡೆದಿದ್ದಾರೆ.

ಚಿತ್ರದಲ್ಲಿ ರಾಗಿಣಿ ದ್ವಿವೇದಿ, ಸಿ ಚಂದ್ರಕಾಂತ್, ರಾಮಚಂದ್ರರಾಜು, ನೇಹಾ ಸಕ್ಸೇನಾ, ಯಶೋಧ, ಮತ್ತು ಸಂಜಯ್ ಕೃಷ್ಣ ಮುಂತಾದವರು ನಟಿಸಿದ್ದಾರೆ. ಶೋಭಾ ಕಪೂರ್, ಏಕ್ತಾ ಆರ್ ಕಪೂರ್, ಸಿಕೆ ಪದ್ಮ ಕುಮಾರ್, ವರುಣ್ ಮಾಥುರ್, ಸೌರಭ್ ಮಿಶ್ರಾ, ಅಭಿಷೇಕ್ ವ್ಯಾಸ್, ವಿಶಾಲ್ ಗುರ್ನಾನಿ ಮತ್ತು ಜೂಹಿ ಪರೇಖ್ ಮೆಹ್ತಾ ಕನೆಕ್ಟ್ ಮೀಡಿಯಾ ಮತ್ತು ಬಾಲಾಜಿ ಟೆಲಿಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ವೃಷಭ ಚಿತ್ರವನ್ನು ನಿರ್ಮಿಸಿದ್ದಾರೆ.

2023ರಲ್ಲಿ ಸೆಟ್ಟೇರಿದ ವೃಷಭವನ್ನು ಮಲಯಾಳಂ ಮತ್ತು ತೆಲುಗು ಭಾಷೆಗಳಲ್ಲಿ ಏಕಕಾಲದಲ್ಲಿ ಚಿತ್ರೀಕರಿಸಲಾಗಿದೆ. ಇದು ಕನ್ನಡ, ತಮಿಳು ಮತ್ತು ಹಿಂದಿ ಸೇರಿದಂತೆ ಬಹು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel