ಪ್ರಿಯಾ ಆನಂದ್ - ವಿನೋದ್ ಪ್ರಭಾಕರ್ 
ಸಿನಿಮಾ ಸುದ್ದಿ

ಕೆಎಂ ಚೈತನ್ಯ ನಿರ್ದೇಶನದ 'ಬಲರಾಮನ ದಿನಗಳು' ಚಿತ್ರಕ್ಕೆ ಪ್ರಿಯಾ ಆನಂದ್ ಎಂಟ್ರಿ; ವಿನೋದ್ ಪ್ರಭಾಕರ್‌ಗೆ ಜೋಡಿ

ಪುನೀತ್ ರಾಜ್‌ಕುಮಾರ್ ಅಭಿನಯದ ರಾಜಕುಮಾರ ಮತ್ತು ಜೇಮ್ಸ್ ಚಿತ್ರಗಳಲ್ಲಿ ನಾಯಕಿಯಾಗಿ ಮಿಂಚಿದ್ದ ದಕ್ಷಿಣ ಭಾರತದ ನಟಿ ಪ್ರಿಯಾ ಆನಂದ್ ಇದೀಗ ಕೆಎಂ ಚೈತನ್ಯ ನಿರ್ದೇಶನದ 'ಬಾಲರಾಮನ ದಿನಗಳು ಚಿತ್ರತಂಡ ಸೇರಿಕೊಂಡಿದ್ದಾರೆ.

'ಆ ದಿನಗಳು' ಚಿತ್ರವನ್ನು ನಿರ್ದೇಶಿಸಿದ್ದ ಕೆಎಂ ಚೈತನ್ಯ ಇದೀಗ 'ಬಲರಾಮನ ದಿನಗಳು' ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದು, ಚಿತ್ರದ ನಾಯಕಿಯಾಗಿ ರಾಜಕುಮಾರ, ಆರೆಂಜ್ ಮತ್ತು ಜೇಮ್ಸ್ ಪಾತ್ರಗಳಿಗೆ ಹೆಸರುವಾಸಿಯಾದ ಮತ್ತು ಇತ್ತೀಚೆಗೆ ಕರಟಕ ದಮನಕದಲ್ಲಿ ಕಾಣಿಸಿಕೊಂಡಿದ್ದ ನಟಿ ಪ್ರಿಯಾ ಆನಂದ್ ಆಯ್ಕೆಯಾಗಿದ್ದಾರೆ. ಚಿತ್ರದಲ್ಲಿ ಟೈಗರ್ ವಿನೋದ್ ಪ್ರಭಾಕರ್ ಅವರೊಂದಿಗೆ ಇದೇ ಮೊದಲ ಬಾರಿಗೆ ಜೋಡಿಯಾಗಿ ನಟಿಸುತ್ತಿದ್ದಾರೆ. ಅವರು ಚಿತ್ರದಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಹೊಸ ವರ್ಷದಂದು ಚಿತ್ರತಂಡ ಪೋಸ್ಟರ್ ಬಿಡುಗಡೆ ಮಾಡಿದ್ದು, ಪ್ರಿಯಾ ಆನಂದ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಿತು.

ಪದ್ಮಾವತಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಪದ್ಮಾವತಿ ಜಯರಾಮ್ ಮತ್ತು ಶ್ರೇಯಸ್ ನಿರ್ಮಿಸಿರುವ 'ಬಲರಾಮನ ದಿನಗಳು' ಚಿತ್ರವು ವಿನೋದ್ ಪ್ರಭಾಕರ್ ಅವರ 25ನೇ ಚಿತ್ರವಾಗಿದೆ.

1980 ರ ದಶಕದಲ್ಲಿ ನಡೆಯುವ ಕಥೆಯನ್ನು ಹೊಂದಿರುವ 'ಬಲರಾಮನ ದಿನಗಳು' ಚಿತ್ರದ ಆಕರ್ಷಕ ಕಥಾಹಂದರ ಮತ್ತು ರೆಟ್ರೋ ವೈಬ್‌ಗಳ ಮೂಲಕ ಪ್ರೇಕ್ಷಕರಿಗೆ ರಸದೌತಣ ನೀಡುವ ಭರವಸೆ ನೀಡುತ್ತದೆ. ಅಟ್ಟಕಾತಿ, ಕಾಲಾ, ಕಬಾಲಿ, ಭೈರವ, ದಸರಾ ಮತ್ತು ಕಲ್ಕಿಯಂತಹ ಹಿಟ್‌ ಚಿತ್ರಗಳಿಗೆ ಹೆಸರುವಾಸಿಯಾದ ಸಂತೋಷ್ ನಾರಾಯಣನ್ ಅವರು ಈ ಚಿತ್ರಕ್ಕೆ ಸಂಗೀತ ಸಂಯೋಜಿಸಲಿದ್ದಾರೆ. ಇದು ಕನ್ನಡ ಚಿತ್ರರಂಗದಲ್ಲಿ ಅವರ ಚೊಚ್ಚಲ ಚಿತ್ರವಾಗಿದ್ದು, ಒಟ್ಟಾರೆ ಅವರ 51ನೇ ಸಿನಿಮಾವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್