ವಿನಯ್ ರಾಜ್‌ಕುಮಾರ್ - ಬಿಎಸ್‌ಪಿ ವರ್ಮಾ 
ಸಿನಿಮಾ ಸುದ್ದಿ

'ಮರ್ಫಿ' ಖ್ಯಾತಿಯ ಬಿಎಸ್‌ಪಿ ವರ್ಮಾ ನಿರ್ದೇಶನದ ಮುಂದಿನ ಚಿತ್ರದಲ್ಲಿ ವಿನಯ್ ರಾಜ್‌ಕುಮಾರ್?

ಅಕ್ಟೋಬರ್‌ನಲ್ಲಿ ಬಿಡುಗಡೆಯಾದ ಮರ್ಫಿ ಚಿತ್ರವು ವಿಮರ್ಷಾತ್ಮಕವಾಗಿ ಮೆಚ್ಚುಗೆ ಗಳಿಸಿತು ಮತ್ತು ಒಟಿಟಿ ವೇದಿಕೆಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ.

ಸಿಂಪಲ್ ಸುನಿ ನಿರ್ದೇಶನದ 'ಒಂದು ಸರಳ ಪ್ರೇಮ ಕಥೆ' ಚಿತ್ರದ ಅಭಿನಯಕ್ಕಾಗಿ ಮೆಚ್ಚುಗೆ ಪಡೆದ ನಟ ವಿನಯ್ ರಾಜ್‌ಕುಮಾರ್, ಇತ್ತೀಚೆಗಷ್ಟೇ ಬಿಡುಗಡೆಯಾದ ಪೆಪೆ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಬಹುಮುಖ ಪ್ರತಿಭೆಗೆ ಹೆಸರುವಾಸಿಯಾದ ವಿನಯ್ ರಾಜ್‌ಕುಮಾರ್, ಗ್ರಾಮಾಯಣ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಈ ಬೆನ್ನಲ್ಲೇ, ಪ್ರಭು ಮುಂಡ್ಕೂರ್ ಮತ್ತು ರೋಶಿನಿ ಪ್ರಕಾಶ್ ಅಭಿನಯದ ಮರ್ಫಿ ಚಿತ್ರ ನಿರ್ದೇಶಕ ಬಿಎಸ್‌ಪಿ ವರ್ಮಾರೊಂದಿಗೆ ವಿನಯ್ ರಾಜ್‌ಕುಮಾರ್ ಮಾತುಕತೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಕ್ಟೋಬರ್‌ನಲ್ಲಿ ಬಿಡುಗಡೆಯಾದ ಮರ್ಫಿ ಚಿತ್ರವು ವಿಮರ್ಷಾತ್ಮಕವಾಗಿ ಮೆಚ್ಚುಗೆ ಗಳಿಸಿತು ಮತ್ತು ಒಟಿಟಿ ವೇದಿಕೆಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಇದೀಗ ಬಿಎಸ್‌ಪಿ ವರ್ಮಾ ಅವರು ಮೊದಲ ಬಾರಿಗೆ ವಿನಯ್ ರಾಜ್‌ಕುಮಾರ್ ಅವರೊಂದಿಗೆ ಚಿತ್ರ ಮಾಡಲು ಮುಂದಾಗಿದ್ದಾರೆ ಎನ್ನಲಾಗಿದೆ. ಇವರಿಬ್ಬರು ಈಗಾಗಲೇ ಈ ಪ್ರಾಜೆಕ್ಟ್ ಕುರಿತು ಹಲವಾರು ಚರ್ಚೆಗಳನ್ನು ನಡೆಸಿದ್ದು, ವರ್ಮಾ ಅವರ ವಿಶಿಷ್ಟ ಕಥೆಯ ಬಗ್ಗೆ ವಿನಯ್ ಉತ್ಸುಕರಾಗಿದ್ದಾರೆ ಎಂದು ವರದಿಯಾಗಿದೆ.

ಸ್ಕ್ರಿಪ್ಟ್ ಕಮರ್ಷಿಯಲ್ ಅಂಶಗಳನ್ನು ಒಳಗೊಂಡಿದೆ ಎಂದು ಹೇಳಲಾಗುತ್ತಿದೆ. ವಿನಯ್ ಅವರ ವ್ಯಕ್ತಿತ್ವದೊಂದಿಗೆ ಸಂಪೂರ್ಣವಾಗಿ ಹೊಂದಿಕೊಳ್ಳುತ್ತದೆ ಮತ್ತು ವಿವಿಧ ಪ್ರಕಾರಗಳ ಪಾತ್ರಗಳಲ್ಲಿ ನಟಿಸುವ ಅವರ ಆಯ್ಕೆಗೆ ಅನುವು ಮಾಡಿಕೊಡುತ್ತದೆ. ಈ ಚಿತ್ರವು ಸದ್ಯ ಪ್ರೀ-ಪ್ರೊಡಕ್ಷನ್ ಹಂತದಲ್ಲಿದ್ದು, ಸ್ಕ್ರಿಪ್ಟ್ ಅನ್ನು ಇನ್ನಷ್ಟು ಉತ್ತಮಗೊಳಿಸಲಾಗುತ್ತಿದೆ. ನಿರ್ದೇಶಕ ಮತ್ತು ನಟರಿಂದ ಅಂತಿಮ ದೃಢೀಕರಣಕ್ಕಾಗಿ ಕಾಯಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್