ಹೆಬಾ ಪಟೇಲ್ - ರಾಮರಸ ಚಿತ್ರದ ಪೋಸ್ಟರ್ 
ಸಿನಿಮಾ ಸುದ್ದಿ

'ರಾಮರಸ' ಚಿತ್ರದ ಮೂಲಕ ಹೆಬಾ ಪಟೇಲ್ ಕನ್ನಡಕ್ಕೆ ಕಂಬ್ಯಾಕ್; ಬಿಗ್ ಬಾಸ್ ಖ್ಯಾತಿಯ ಮಹೇಶ್ ಕಾರ್ತಿಕ್ ನಾಯಕ

ಅಧ್ಯಕ್ಷ ಸಿನಿಮಾದಲ್ಲಿ ನಟಿಸಿದ್ದ ನಟಿ ಹೆಬಾ ಪಟೇಲ್ 10 ವರ್ಷಗಳ ಬಳಿಕ ಮತ್ತೆ ಕನ್ನಡ ಚಿತ್ರವೊಂದರಲ್ಲಿ ನಟಿಸುತ್ತಿದ್ದಾರೆ.

ಶರಣ್ ನಟನೆಯ ಅಧ್ಯಕ್ಷ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ನಟಿ ಹೆಬಾ ಪಟೇಲ್, ತಮ್ಮ ನಟನೆಯ ಮೂಲಕ ಪ್ರೇಕ್ಷಕರ ಮನಸ್ಸನ್ನು ಬಹುಬೇಗ ಗೆದ್ದರು. ನಂತರ ಅವರು ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆಯಾದ 'ಕುಮಾರಿ 21F' ನಲ್ಲಿನ ಪಾತ್ರಕ್ಕಾಗಿ ಮನ್ನಣೆ ಗಳಿಸಿದರು. ಈ ಚಿತ್ರದಲ್ಲಿ ಪ್ರಣಮ್ ದೇವರಾಜ್ ಜೊತೆ ತೆರೆಹಂಚಿಕೊಂಡಿದ್ದರು. ಹೆಬಾ ಪಟೇಲ್ ಅವರು ವಿವಿಧ ಭಾಷೆಗಳಲ್ಲಿ ಹಲವಾರು ಪಾತ್ರಗಳನ್ನು ನಿರ್ವಹಿಸಿದ್ದು, ಇದೀಗ 'ರಾಮರಸ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮರಳುತ್ತಿದ್ದಾರೆ.

ಜಿ ಸಿನಿಮಾಸ್ ಮತ್ತು ಸೆವೆನ್ ಸ್ಟಾರ್ ಸ್ಟುಡಿಯೋಸ್ ಬ್ಯಾನರ್‌ ಅಡಿಯಲ್ಲಿ ಗುರು ದೇಶಪಾಂಡೆ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ರಾಷ್ಟ್ರ ಪ್ರಶಸ್ತಿ ವಿಜೇತ ಬಿಎಂ ಗಿರಿರಾಜ್ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ರಾಮರಸ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಸದ್ಯ ಪೋಸ್ಟ್ ಪ್ರೊಡಕ್ಷನ್‌ ಹಂತದಲ್ಲಿದೆ.

ರಾಮರಸ ಚಿತ್ರದಲ್ಲಿ ಬಿಗ್ ಬಾಸ್ ಕನ್ನಡ ಸೀಸನ್ 10ರ ವಿಜೇತ ಕಾರ್ತಿಕ್ ಮಹೇಶ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹೆಬಾ ಪಟೇಲ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಚಿತ್ರತಂಡ ನಟಿಯ ಫಸ್ಟ್ ಲುಕ್ ಪೋಸ್ಟರ್ ಹಂಚಿಕೊಂಡಿದೆ. 'ಅವಳ‌ ಅಂದಕ್ಕೆ ಸೋತವರು, ಮಾತಿಗೆ ಮರುಳಾದವರು, ನಡಿಗೆಗೆ ನಡುಗಿದವರಾರೂ ಭೂಮಿ‌ ಮೇಲೆ ಉಳಿದೇ ಇಲ್ಲ. ಗಂಡಸರ ಆಸೆಗೆ she is a mystery. Her name is Bhramari. ರಾಮರಸ ಕುಡಿಸಲು, ನಿತ್ಯ ರತಿರಸವ ಸುರಿಸಲು, ಪಾತಾಳ ಮೋಹಿನಿ ಭ್ರಮರಿಯಾಗಿರುವ ಹೆಬಾ ಪಟೇಲ್ ಅವರಿಗೆ ಹುಟ್ಟು ಹಬ್ಬದ ನಲ್ವಾರೈಕೆಗಳು' ಎಂದು ಬರೆದುಕೊಂಡಿದೆ.

ಭ್ರಮರಿ ಪಾತ್ರದಲ್ಲಿ ಹೆಬಾ ಪಟೇಲ್ ಕಾಣಿಸಿಕೊಳ್ಳುತ್ತಿದ್ದಾರೆ. ಆ ಪಾತ್ರವನ್ನು ಅಮಲೇರಿಸುವ ಶಕ್ತಿಯಾಗಿ, ಮಕರಂದವನ್ನು ಬೆನ್ನಟ್ಟುವ ಜೇನುನೊಣದ ಭ್ರಮೆಯಾಗಿ, ಅದರಿಂದ ಶಾಶ್ವತವಾಗಿ ತಪ್ಪಿಸಿಕೊಳ್ಳಲಾಗದ ಮತ್ತು ಅಪಾಯಕಾರಿಯನ್ನಾಗಿ ಚಿತ್ರಿಸಲಾಗಿದೆ. ಅಲ್ಲದೆ, ಈ ಚಿತ್ರದಲ್ಲಿ ರಾಮರಸದ ಬಯಕೆ, ನಿಗೂಢತೆ ಮತ್ತು ಭಾವೋದ್ರೇಕದ ವಿಷಯಗಳನ್ನು ತೆರೆ ಮೇಲೆ ತರಲಾಗಿದೆ ಎಂದು ನಿರ್ಮಾಪಕ ಗುರು ದೇಶಪಾಂಡೆ ವಿವರಿಸುತ್ತಾರೆ.

ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಚಿತ್ರವನ್ನು ತೆರೆ ಮೇಲೆ ತರಲು ಚಿತ್ರತಂಡ ಉತ್ಸುಕವಾಗಿದೆ. ಚಿತ್ರಕ್ಕೆ ಬಿಜೆ ಭರತ್ ಅವರ ಸಂಗೀತ ಸಂಯೋಜನೆ ಮತ್ತು ಕೃಷ್ಣ ಕುಮಾರ್ ಅವರ ಛಾಯಾಗ್ರಹಣವಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT