ಗಜರಾಮ ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

ರಾಜವರ್ಧನ್ ಅಭಿನಯದ 'ಗಜರಾಮ' ಚಿತ್ರ ಫೆಬ್ರುವರಿ 7ಕ್ಕೆ ಬಿಡುಗಡೆ

ರಗಡ್ ಲುಕ್​ ನಲ್ಲಿ ಕಾಣಿಸಿಕೊಂಡಿರುವ ರಾಜವರ್ಧನ್ ಅವರಿಗೆ ಜೋಡಿಯಾಗಿ ತಪಸ್ವಿನಿ ಪೂಣಚ್ಚ ಬಣ್ಣ ಹಚ್ಚಿದ್ದಾರೆ.

ಬಿಚ್ಚುಗತ್ತಿ: ಅಧ್ಯಾಯ 1- ದಳವಾಯಿ ದಂಗೆ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟಿರುವ ನಟ ರಾಜವರ್ಧನ್ ಇದೀಗ ತಮ್ಮ ಮೂರನೇ ಸಿನಿಮಾ 'ಗಜರಾಮ' ರಿಲೀಸ್‌ಗೆ ಎದುರು ನೋಡುತ್ತಿದ್ದಾರೆ. 2024ರ ಕೊನೆಯಲ್ಲಿಯೇ ತೆರೆಕಾಣಬೇಕಿದ್ದ ಚಿತ್ರದ ಬಿಡುಗಡೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿತ್ತು. ಇದೀಗ ಚಿತ್ರ ಬಿಡುಗಡೆಯ ದಿನಾಂಕವನ್ನು ಫೆಬ್ರುವರಿ 7ಕ್ಕೆ ನಿಗದಿ ಮಾಡಲಾಗಿದೆ.

ಸುನೀಲ್ ಕುಮಾರ್ ವಿಎ ನಿರ್ದೇಶಿಸಿರುವ 'ಗಜರಾಮ' ಚಿತ್ರ ರಾಜವರ್ಧನ್ ಅವರ ಪೂರ್ಣ ಪ್ರಮಾಣದ ಚೊಚ್ಚಲ ಆ್ಯಕ್ಷನ್ ಸಿನಿಮಾ ಆಗಿದೆ. ರಾಜವರ್ಧನ್ ಅವರಿಗೆ ಜೋಡಿಯಾಗಿ ತಪಸ್ವಿನಿ ಪೂಣಚ್ಚ ನಟಿಸಿದ್ದಾರೆ.

ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಶಿಷ್ಯ ದೀಪಕ್ ಮತ್ತು ಖಳನಾಯಕನಾಗಿ ಕಬೀರ್ ಸಿಂಗ್ ಕಾಣಿಸಿಕೊಂಡಿದ್ದಾರೆ. ಹೆಚ್ಚುವರಿಯಾಗಿ, ನಟಿ ರಾಗಿಣಿ ದ್ವಿವೇದಿ ಜನಪ್ರಿಯ ಹಾಡು 'ಸಾರಾಯಿ ಶಾಂತಮ್ಮ'ದಲ್ಲಿ ಕಾಣಿಸಿಕೊಂಡಿದ್ದಾರೆ.

ಚಿತ್ರಕ್ಕೆ ಕೆಎಸ್ ಚಂದ್ರಶೇಖರ್ ಅವರ ಛಾಯಾಗ್ರಹಣ ಮತ್ತು ಜ್ಞಾನೇಶ್ ಬಿ ಮಠದ್ ಅವರ ಸಂಕಲನವಿದೆ. ಲೈಫ್ ಲೈನ್ ಫಿಲ್ಮ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಗಜರಾಮ ಚಿತ್ರವನ್ನು ನರಸಿಂಹ ಮೂರ್ತಿ, ಮಲ್ಲಿಕಾರ್ಜುನ ಕಾಶಿ ಮತ್ತು ಕ್ಸೇವಿಯರ್ ಫರ್ನಾಂಡಿಸ್ ನಿರ್ಮಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT