ಬೆಂಗಳೂರು: ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಚಿತ್ರಕ್ಕೆ ಸಂಬಂಧಿಸಿದಂತೆ ಮೋಹಕ ತಾರೆ ನಟಿ ರಮ್ಯಾ ಕೋರ್ಟ್ ವಿಚಾರಣೆಗೆ ಹಾಜರಾಗಿದ್ದಾರೆ. ನಾಗರಹಾವು ಚಿತ್ರದ ನಂತರ ಬರೋಬ್ಬರಿ 7 ವರ್ಷಗಳ ಬಳಿಕ ರಮ್ಯಾ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಆ ಚಿತ್ರದ ಪ್ರೊಮೋಷನಲ್ ವಿಡಿಯೋನಲ್ಲೂ ರಮ್ಯಾ ಕಾಣಿಸಿಕೊಂಡಿದ್ದರು. ಪ್ರೋಮೋ ಶೂಟ್ಗೆ ಮಾತ್ರ ನನ್ನ ಪರ್ಮೀಷನ್ ಇತ್ತು. ಆದರೆ ಆ ದೃಶ್ಯಗಳನ್ನು ನನ್ನ ಅನುಮತಿ ಇಲ್ಲದೆ ಚಿತ್ರ ಮತ್ತು ಟ್ರೈಲರ್ನಲ್ಲೂ ಬಳಸಿಕೊಂಡಿದ್ದಾರೆ ಎಂದು ಆರೋಪಿ ಕೋರ್ಟ್ ಮೆಟ್ಟಿಲೇರಿದ್ದರು. ಈ ಸಂಬಂಧ ಒಂದು ವರ್ಷದ ಹಿಂದೆಯೇ ನಟಿ ಕೋರ್ಟ್ ಮೆಟ್ಟಿಲೇರಿದ್ದು ಸಿನಿಮಾ ಬಿಡುಗಡೆಗೆ ತಡೆ ನೀಡಬೇಕು. ಚಿತ್ರತಂಡದಿಂದ ಒಂದು ಕೋಟಿ ಪರಿಹಾರ ಕೊಡಿಸುವಂತೆ ಮನವಿ ಮಾಡಿದ್ದರು. ಆ ಪ್ರಕರಣದ ವಿಚಾರಣೆ ಇಂದು ನಡೆಯುತ್ತಿದೆ.