ರಶ್ಮಿಕಾ ಮಂದಣ್ಣ 
ಸಿನಿಮಾ ಸುದ್ದಿ

ಜಿಮ್‌ನಲ್ಲಿ ವರ್ಕ್ ಔಟ್ ಮಾಡುವಾಗ ರಶ್ಮಿಕಾ ಮಂದಣ್ಣಗೆ ಗಾಯ: 'ಸಿಕಂದರ್' ಚಿತ್ರೀಕರಣ ತಾತ್ಕಾಲಿಕ ಸ್ಥಗಿತ!

ರಶ್ಮಿಕಾ ಅವರು ಸಲ್ಮಾನ್‌ ಖಾನ್‌ ನಟನೆಯ ಸಿಖಂದರ್‌ ಸಿನಿಮಾದ ಶೂಟಿಂಗ್‌ಗೆ ಹೋಗಬೇಕಿತ್ತು. ಇದರ ನಡುವೆಯೇ ರಶ್ಮಿಕಾ ಜಿಮ್‌ನಲ್ಲಿ ಪೆಟ್ಟು ಮಾಡಿಕೊಂಡಿದ್ದಾರೆ.

ಬಹುಭಾಷಾ ನಟಿ ಹಾಗೂ ಕನ್ನಡತಿ ರಶ್ಮಿಕಾ ಮಂದಣ್ಣ ಅವರ ಅಭಿಮಾನಿಗಳಿಗೆ ಶಾಕಿಂಗ್‌ ವಿಚಾರವೊಂದು ಹೊರಬಿದ್ದಿದೆ. ನಟಿ ರಶ್ಮಿಕಾ ಮಂದಣ್ಣ ಅವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ರಶ್ಮಿಕಾ ಅವರು ಜಿಮ್‌ನಲ್ಲಿ ವರ್ಕೌಟ್ ಮಾಡುವಾಗ ಪೆಟ್ಟು ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ರಶ್ಮಿಕಾ ಅವರು ಸಲ್ಮಾನ್‌ ಖಾನ್‌ ನಟನೆಯ ಸಿಖಂದರ್‌ ಸಿನಿಮಾದ ಶೂಟಿಂಗ್‌ಗೆ ಹೋಗಬೇಕಿತ್ತು. ಇದರ ನಡುವೆಯೇ ರಶ್ಮಿಕಾ ಜಿಮ್‌ನಲ್ಲಿ ಪೆಟ್ಟು ಮಾಡಿಕೊಂಡಿದ್ದಾರೆ.

ದೃಷ್ಟವಶಾತ್‌ ರಶ್ಮಿಕಾ ಅವರಿಗೆ ಹೆಚ್ಚಿನ ಅನಾಹುತವಾಗಿಲ್ಲ. ಜಿಮ್‌ನಲ್ಲಿ ವ್ಯಾಯಾಮ ಮಾಡುವಾಗ ಪೆಟ್ಟಾಗಿದೆ ಎಂದು ಹೇಳಲಾಗಿದ್ದು, ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಸದ್ಯ ಪೆಟ್ಟಾಗಿರುವ ಕಾರಣ ರಶ್ಮಿಕಾ ಅವರು ಕೆಲ ದಿನಗಳವರೆಗೆ ರೆಸ್ಟ್‌ ಮಾಡಬೇಕಾಗಿದೆ. ಈ ಹಿನ್ನೆಲೆ ಸಲ್ಮಾನ್ ಖಾನ್ 'ಸಿಖಂದರ್' ಚಿತ್ರದ ಶೂಟಿಂಗ್ ಕೂಡ ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಇನ್ನು ರಶ್ಮಿಕಾ ಅವರು ಸಂಪೂರ್ಣವಾಗಿ ಗುಣಮುಖರಾದ ಮೇಲೆಯೇ ಶೂಟಿಂಗ್‌ಗೆ ಮರಳಲಿದ್ದಾರೆ ಎಂದು ವರದಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾಪಟ್ಟಿ...

ಆರ್ ಎಸ್ಎಸ್ ಸಭೆ ನಡೆದಾಗಲೆಲ್ಲಾ ಅನೇಕ ಅನಾಹುತಗಳಾಗಿವೆ- ಬಿಕೆ ಹರಿಪ್ರಸಾದ್

ದೀದಿಗೆ ಮತ್ತೊಂದು ಶಾಕ್; ಮಮತಾ ನೇತೃತ್ವದ TMC ಬಣದ 12 ಬ್ಯಾಂಕ್ ಖಾತೆ ಫ್ರೀಜ್ ಮಾಡಿದ ಪೋಲೀಸರು!

2029ರ ಲೋಕಸಭೆ ಚುನಾವಣೆಯಿಂದಲೇ 'ಒಂದು ರಾಷ್ಟ್ರ–ಒಂದು ಚುನಾವಣೆ' ಜಾರಿ ಸಾಧ್ಯತೆ: JPC ಮುಖ್ಯಸ್ಥ ಪಿ.ಪಿ ಚೌಧರಿ