ಸಂಜನಾ ಆನಂದ್ - ಯುವ ರಾಜ್‌ಕುಮಾರ್ 
ಸಿನಿಮಾ ಸುದ್ದಿ

'ಎಕ್ಕ' ಚಿತ್ರಕ್ಕೆ ನಾಯಕಿಯಾಗಿ ಸಂಜನಾ ಆನಂದ್ ಆಯ್ಕೆ; ಯುವ ರಾಜ್‌ಕುಮಾರ್‌ಗೆ ಜೋಡಿ

ಎಕ್ಕ ಬೆಂಗಳೂರಿನ ಕರಾಳ ಮತ್ತು ಅಪಾಯಕಾರಿ ಭೂಗತ ಜಗತ್ತಿನ ಓರ್ವ ವ್ಯಕ್ತಿಯ ಪ್ರಯಾಣದ ಕಥೆಯಾಗಿದೆ.

ಯುವ ರಾಜ್‌ಕುಮಾರ್ ಅವರ ಎರಡನೇ ಸಿನಿಮಾ, ರೋಹಿತ್ ಪದಕಿ ನಿರ್ದೇಶನದ ಎಕ್ಕ ಚಿತ್ರ ಸದ್ಯ ನಿರ್ಮಾಣ ಹಂತದಲ್ಲಿದೆ. ಈ ಚಿತ್ರವು ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರ PRK ಪ್ರೊಡಕ್ಷನ್ಸ್, ಜಯಣ್ಣ ಫಿಲಂಸ್ (ಜಯಣ್ಣ ಮತ್ತು ಬೋಗೇಂದ್ರ), ಮತ್ತು KRG ಸ್ಟುಡಿಯೋಸ್ (ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್) ನಡುವಿನ ಸಹಯೋಗವಾಗಿದೆ.

ಆರಂಭದಲ್ಲಿ ಇಬ್ಬರು ನಾಯಕಿಯರು ಚಿತ್ರದಲ್ಲಿ ನಟಿಸಲಿದ್ದಾರೆ ಎಂದು ಚಿತ್ರತಂಡ ಘೋಷಿಸಿತ್ತು. ನಟಿ ಸಂಪದಾ ಈಗಾಗಲೇ ನಾಯಕಿಯಾಗಿ ಆಯ್ಕೆಯಾಗಿದ್ದರೆ, ಚಿತ್ರತಂಡ ಇದೀಗ ಸಂಜನಾ ಆನಂದ್ ಅವರನ್ನು ನಾಯಕಿಯಾಗಿ ಆಯ್ಕೆ ಮಾಡಿದೆ.

ಕೆಮಿಸ್ಟ್ರಿ ಆಫ್ ಕರಿಯಪ್ಪ ಚಿತ್ರದಲ್ಲಿನ ಪಾತ್ರದಿಂದ ಗಮನ ಸೆಳೆದ ಸಂಜನಾ ನಂತರ ದುನಿಯಾ ವಿಜಯ್ ಅವರೊಂದಿಗೆ ಸಲಗ ಚಿತ್ರದಲ್ಲಿ ನಟಿಸಿದರು. ದಿನಕರ್ ತೂಗುದೀಪ ನಿರ್ದೇಶನದ ಮುಂಬರುವ ರಾಯಲ್ ಚಿತ್ರ ಬಿಡುಗಡೆಗೆ ಎದುರು ನೋಡುತ್ತಿದ್ದು, ನಟ ವಿರಾಟ್ ಅವರಿಗೆ ಜೋಡಿಯಾಗಿದ್ದಾರೆ. ಈ ಚಿತ್ರ ಜನವರಿ 24 ರಂದು ಬಿಡುಗಡೆಯಾಗಲಿದೆ. ಈಗ ಸಂಜನಾ ಎಕ್ಕ ಚಿತ್ರತಂಡ ಸೇರಲು ಸಿದ್ಧವಾಗಿದ್ದಾರೆ. ಯುವ ರಾಜಕುಮಾರ್ ಅವರೊಂದಿಗೆ ಮೊದಲ ಬಾರಿಗೆ ಜೋಡಿಯಾಗಲಿದ್ದಾರೆ.

ಎಕ್ಕ ಬೆಂಗಳೂರಿನ ಕರಾಳ ಮತ್ತು ಅಪಾಯಕಾರಿ ಭೂಗತ ಜಗತ್ತಿನ ಓರ್ವ ವ್ಯಕ್ತಿಯ ಪ್ರಯಾಣದ ಕಥೆಯಾಗಿದೆ. ಚಿತ್ರದಲ್ಲಿ ಅತುಲ್ ಕುಲಕರ್ಣಿ, ಶ್ರುತಿ ಕೃಷ್ಣ ಮತ್ತು ರಾಹುಲ್ ದೇವ್ ಶೆಟ್ಟಿ ಕೂಡ ಇದ್ದಾರೆ. ಚಿತ್ರಕ್ಕೆ ಚರಣ್ ರಾಜ್ ಸಂಗೀತ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ