45 ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

ಶಿವರಾಜ್‌ಕುಮಾರ್ ನಟನೆಯ, ಅರ್ಜುನ್ ಜನ್ಯ ನಿರ್ದೇಶನದ ಬಹುನಿರೀಕ್ಷಿತ '45' ಬಿಡುಗಡೆಗೆ ದಿನಾಂಕ ಫಿಕ್ಸ್!

ನಟ ಉಪೇಂದ್ರ ಈ ಕಾರ್ಯಕ್ರಮವು ಆಚರಣೆಯಾಗಿದೆ ಎಂದರೆ, ರಾಜ್ ಬಿ ಶೆಟ್ಟಿ ಅವರು ಈ ಸಿನಿಮಾ 'ಕನಸಿನ ಸಹಯೋಗ' ಎಂದು ವಿವರಿಸಿದರು.

ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನದ ಬಹುನಿರೀಕ್ಷಿತ ಚಿತ್ರ '45' ತೆರೆಗೆ ಬರಲು ಸಜ್ಜಾಗಿದೆ. ಚಿತ್ರತಂಡ ನವೀನ 3D ವಿಡಿಯೋ ಮೂಲಕ ಚಿತ್ರ ಬಿಡುಗಡೆ ದಿನಾಂಕವನ್ನು ಘೋಷಿಸಿದೆ. ನಟ ಶಿವರಾಜ್‌ಕುಮಾರ್ ಅಭಿನಯದ '45' ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ತ್ರತಂಡವು ದೃಶ್ಯಾತ್ಮಕವಾಗಿರುವ ಕ್ಲಿಪ್ ಮೂಲಕ ಚಿತ್ರ ಬಿಡುಗಡೆ ದಿನಾಂಕವನ್ನು ಘೋಷಿಸಿದ್ದು, ನಟ ಶಿವಣ್ಣ ಸ್ಟೈಲಿಶ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಬೈಕ್ ಮುಂಭಾಗ ಮೂರು ಬಂದೂಕುಗಳನ್ನು ಅಳವಡಿಸಿಕೊಂಡು ದಾಳಿಕೋರರಿಗೆ ಶೂಟ್ ಮಾಡುತ್ತಾ ಮುಂದೆ ಸಾಗುವುದನ್ನು ಕಾಣಬಹುದು. ಕೊನೆಯಲ್ಲಿ ನಟನೆ ಮುಖದೊಂದಿಗೆ ಚಿತ್ರಬಿಡುಗಡೆ ದಿನಾಂಕವನ್ನು ಘೋಷಿಸಲಾಗಿದೆ.

ಸದ್ಯ ಅಮೆರಿಕದ ಮಿಯಾಮಿಯಲ್ಲಿ ಚೇತರಿಸಿಕೊಳ್ಳುತ್ತಿರುವ ಶಿವರಾಜಕುಮಾರ್, 'ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ಅವರೊಂದಿಗೆ ಇದು ನನ್ನ ಮೊದಲ ಸಹಯೋಗವಾಗಿದೆ. ಅರ್ಜುನ್ ಜನ್ಯ ಅವರು ಚಿತ್ರದಲ್ಲಿ ಅದ್ಭುತಗಳನ್ನು ಮಾಡಿದ್ದಾರೆ ಮತ್ತು MARZ VFX ಸ್ಟುಡಿಯೋ ಕನ್ನಡ ಚಿತ್ರರಂಗಕ್ಕೆ ದೊಡ್ಡ ಕೊಡುಗೆ ನೀಡಿದೆ ಎಂದರು.

ಕಾರ್ಯಕ್ರಮದಲ್ಲಿ ಗಣ್ಯರು ಮತ್ತು ಉದ್ಯಮದ ದಿಗ್ಗಜರು ಭಾಗವಹಿಸಿದ್ದರು. ನಿರ್ಮಾಪಕ ರಮೇಶ್ ರೆಡ್ಡಿ ಮಾತನಾಡಿ, 'ಕಥೆಯು ಗಮನಾರ್ಹ ಹೂಡಿಕೆಯನ್ನು ಬಯಸಿದೆ ಮತ್ತು ಅಂತಿಮವಾಗಿ ಪ್ರೇಕ್ಷಕರು ಚಿತ್ರವನ್ನು ಮೆಚ್ಚುತ್ತಾರೆ ಎಂದು ನಾನು ನಂಬುತ್ತೇನೆ' ಎಂದರು.

ಉಪೇಂದ್ರ, ರಮೇಶ್ ರೆಡ್ಡಿ ಮತ್ತು ರಾಜ್ ಬಿ ಶೆಟ್ಟಿ

ಕೃತಜ್ಞತೆ ತಿಳಿಸಿದ ನಿರ್ದೇಶಕ ಅರ್ಜುನ್ ಜನ್ಯ, ದೊಡ್ಡ ದೊಡ್ಡ ಸ್ಟಾರ್‌ಗಳು ಮತ್ತು ಅಂತರಾಷ್ಟ್ರೀಯ VFX ಪರಿಣತಿಯೊಂದಿಗೆ ಇದು ಚೊಚ್ಚಲ ಕನಸಿನ ಯೋಜನೆಯಾಗಿದೆ ಎಂದು ಹೇಳಿದರು.

ನಟ ಉಪೇಂದ್ರ ಈ ಕಾರ್ಯಕ್ರಮವು ಆಚರಣೆಯಾಗಿದೆ ಎಂದರೆ, ರಾಜ್ ಬಿ ಶೆಟ್ಟಿ ಅವರು ಈ ಸಿನಿಮಾ 'ಕನಸಿನ ಸಹಯೋಗ' ಎಂದು ವಿವರಿಸಿದರು.

ಸೂರಜ್ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗಿರುವ 45 ಚಿತ್ರವು ಬಹುಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿ ಬಿಡುಗಡೆಯಾಗಲಿದ್ದು, ಪ್ರೇಕ್ಷಕರಿಗೆ ಉತ್ತಮ ಮನರಂಜನೆ ನೀಡುವ ಭರವಸೆ ವ್ಯಕ್ತವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಹಾರದ ಲಖಿಸರಾಯಿ ದೇವಾಲಯದ ಬಳಿ ಭೀಕರ ಕಾಲ್ತುಳಿತ: 7 ಭಕ್ತರ ಸಾವು, ಹಲವರಿಗೆ ಗಾಯ

ಬೆಂಗಳೂರಿನ ಕ್ಲಾರೆನ್ಸ್ ಶಾಲೆಯಲ್ಲಿ H1N1 ಫ್ಲೂ ಆತಂಕ: ಇಬ್ಬರಲ್ಲಿ ಸೋಂಕು ದೃಢ, 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗೈರು, ಕಬಾಬ್ ಅಂಗಡಿಗಳ ತೆರವಿಗೆ ಆಗ್ರಹ!

'ನಾನು ನಲ್ಸಾರ್ ಆಹ್ವಾನವನ್ನೇ ಸ್ವೀಕರಿಸಿಲ್ಲ; ಅಲ್ಲಿಗೆ ಹೋಗುವ ಪ್ರಶ್ನೆಯೇ ಇಲ್ಲ': CJI ಸೂರ್ಯಕಾಂತ್ ಸ್ಪಷ್ಟನೆ

ಚಾಮರಾಜನಗರ ಶೂಟೌಟ್‌ ಕೇಸ್: ‘ಮೃತರು ರೈತರೇ ಹೊರತು ಬೇಟೆಗಾರರಲ್ಲ’; ಮೂವರು ತಮಿಳರ ಹತ್ಯೆಗೆ ಸಿಎಂ ವಿಜಯ್ ತೀವ್ರ ಖಂಡನೆ, ಉನ್ನತ ಮಟ್ಟದ ತನಿಖೆಗೆ ಆಗ್ರಹ..!

ಪರೀಕ್ಷೆ ಅಕ್ರಮ; ಜಾರ್ಖಂಡ್ ಸಿಎಂ ಸೊರೇನ್, ರಾಹುಲ್ ಗಾಂಧಿ, ತೇಜಸ್ವಿ ಯಾದವ್ ಪ್ರತಿಕೃತಿ ದಹಿಸಿ JPSC-JSSC ಆಕಾಂಕ್ಷಿಗಳ ಪ್ರತಿಭಟನೆ