ಮಾಂಕ್ ದಿ ಯಂಗ್ ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

ಫೆಬ್ರುವರಿಯಲ್ಲಿ 'Monk the Young' ತೆರೆಗೆ; ಪ್ಯಾನ್ ಇಂಡಿಯಾ ಸಿನಿಮಾ ನಿರ್ಮಾಣಕ್ಕೆ ಚಿತ್ರತಂಡ ಸಿದ್ಧತೆ

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಎನ್‌ಜಿಒ ನಾಯಕಿ ಉಷಾ, ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

ತನ್ನ ಶೀರ್ಷಿಕೆಯಿಂದಲೇ ತೀವ್ರ ಕುತೂಹಲ ಕೆರಳಿಸಿರುವ 'Monk The Young' ಚಿತ್ರವನ್ನು ಫೆಬ್ರುವರಿಯಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ನಡೆಸಿದೆ. ಇತ್ತೀಚೆಗಷ್ಟೇ ಚಿತ್ರದ 'ಮಾಯೆ' ಹಾಡು ಬಿಡುಗಡೆಯಾಗಿದ್ದು, ಆನಂದ್ ಆಡಿಯೋ ಯೂಟ್ಯೂಬ್ ಚಾನಲ್‌ನಲ್ಲಿ ವೀಕ್ಷಣೆಗೆ ಲಭ್ಯವಿದೆ. ಹಾಡಿಗೆ ಪ್ರತಾಪ್ ಭಟ್ ಅವರು ಸಾಹಿತ್ಯ ಬರೆದಿದ್ದು, ಸಿರಿ ಕಟ್ಟೆ ಹಾಡಿದ್ದಾರೆ. ಸ್ವಾಮಿನಾಥನ್ ಅವರ ಸಂಗೀತ ಸಂಯೋಜನೆಯಿದ್ದು, ಈ ಹಾಡಿಗೆ ಈಗಾಗಲೇ ಕೇಳುಗರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಎನ್‌ಜಿಒ ನಾಯಕಿ ಉಷಾ, ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

'ಕೆಆರ್‌ಜಿ ಸ್ಟುಡಿಯೋಸ್ ಚಿತ್ರದ ವಿತರಣೆಯ ಹಕ್ಕನ್ನು ಪಡೆದುಕೊಂಡಿದ್ದು, ಫೆಬ್ರುವರಿ ಮಧ್ಯ ಅಥವಾ ಕೊನೆಯಲ್ಲಿ ಚಿತ್ರವನ್ನು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಕನ್ನಡ ಸೇರಿದಂತೆ ಮೂರು ಭಾಷೆಗಳಲ್ಲಿ 'ಮಾಂಕ್ ದಿ ಯಂಗ್' ಚಿತ್ರ ಬಿಡುಗಡೆಯಾಗಲಿದೆ. ಈ ಚಿತ್ರಕ್ಕೆ ಐವರು ನಿರ್ಮಾಪಕರಿದ್ದು, ಪ್ರತಿಯೊಬ್ಬರು ಒಂದೊಂದು ರಾಜ್ಯವನ್ನು ಪ್ರತಿನಿಧಿಸುತ್ತಾರೆ. ಹೀಗಾಗಿ, ಚಿತ್ರವನ್ನು ಪ್ಯಾನ್-ಇಂಡಿಯಾ ಆಗಿ ಮಾಡುವ ಗುರಿಯನ್ನು ಚಿತ್ರತಂಡ ಹೊಂದಿದೆ ಎಂದು ನಿರ್ಮಾಪಕರಾದ ಕರ್ನಲ್ ರಾಜೇಂದ್ರನ್, ಗೋಪಿಚಂದ್ ಮತ್ತು ಲಾಲ್ ಚಂದ್ ಖಟ್ಟರ್ ತಿಳಿಸಿದರು. ಇವರೊಂದಿಗೆ ವಿನಯ್ ಬಾಬು ರೆಡ್ಡಿ ಶೆಟ್ಟಿಹಳ್ಳಿ ಮತ್ತು ಸರೋವರ್ ಅವರು ಸಹ ನಿರ್ಮಾಪಕರಾಗಿದ್ದಾರೆ.

ಮಾಂಕ್ ದಿ ಯಂಗ್ ಸಿನಿಮಾ ವಿಂಟೇಜ್ ಫ್ಯಾಂಟಸಿ ಕಥಾಹಂದರವನ್ನು ಹೊಂದಿದ್ದು, ಚಿತ್ರದ ಪ್ರಯಾಣವು 1869 ರಲ್ಲಿ ಪ್ರಾರಂಭವಾಗುತ್ತದೆ ಮತ್ತು ವಿವಿಧ ಕಾಲಘಟ್ಟಗಳ ಕಥೆಯನ್ನು ಒಳಗೊಂಡಿದೆ. ನಿರ್ದೇಶಕ ಮಾಸ್ಚಿತ್ ಸೂರ್ಯ ಅದರ ಲೇಯರ್ಡ್ ಕಥಾಹಂದರವು ವೀಕ್ಷಕರೊಂದಿಗೆ ಸಂಪರ್ಕ ಸಾಧಿಸುತ್ತದೆ. ಆತ್ಮಾವಲೋಕನ ಮಾಡಿಕೊಂಡಾಗ ಎಲ್ಲ ಪ್ರಶ್ನೆಗಳಿಗೂ ಉತ್ತರ ಸಿಗಲಿದೆ.

ನಾಯಕ ಸರೋವರ್ ಮಾತನಾಡಿ, ತಮ್ಮ ಪಾತ್ರ ಮತ್ತು ಚಿತ್ರದ ನಿರೂಪಣೆಯು ಪ್ರೇಕ್ಷಕರ ಮೇಲೆ ಶಾಶ್ವತವಾದ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.

ಮಾಂಕ್ ದಿ ಯಂಗ್ ಚಿತ್ರದ ಪೋಸ್ಟರ್

ಚಿತ್ರದ ತಾರಾಗಣದಲ್ಲಿ ನಾಯಕಿಯಾಗಿ ಸೌಂದರ್ಯ ಗೌಡ ನಟಿಸಿದ್ದಾರೆ. ಇನ್ನುಳಿದಂತೆ ಕೃತಿ, ರವಿಶಂಕರ್, ಸಾರಸ್ ಮಂಜುನಾಥ್, ರವಿ ಮಟ್ಟಿ, ಸುಮಂತ್ ಮತ್ತು ಶಿವಪ್ಪ ಇದ್ದಾರೆ. ಚಿತ್ರಕ್ಕೆ ಕಾರ್ತಿಕ್ ಶರ್ಮಾ ಅವರ ಛಾಯಾಗ್ರಹಣ, ಸ್ವಾಮಿನಾಥನ್ ಅವರ ಸಂಗೀತ ಸಂಯೋಜನೆಯಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT