ರಾಮ್ ಗೋಪಾಲ್ ವರ್ಮಾ 
ಸಿನಿಮಾ ಸುದ್ದಿ

ಚೆಕ್ ಬೌನ್ಸ್ ಪ್ರಕರಣ: ಟಾಲಿವುಡ್ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾಗೆ 3 ತಿಂಗಳು ಜೈಲು ಶಿಕ್ಷೆ!

ರಾಮ್ ಗೋಪಾಲ್ ವರ್ಮಾ ನ್ಯಾಯಾಲಯಕ್ಕೆ ಗೈರಾಗಿದ್ದರಿಂದ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಹೊರಡಿಸಿದೆ ಎಂದು ವರದಿಯಾಗಿದೆ.

ಮುಂಬೈ: ಹಳೆಯ ಚೆಕ್ ಬೌನ್ಸ್ ಪ್ರಕರಣದಲ್ಲಿ ತೆಲುಗಿನ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರಿಗೆ ಮುಂಬೈ ನ್ಯಾಯಾಲಯವು ಮೂರು ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಏಳು ವರ್ಷ ಪ್ರಕರಣದ ವಿಚಾರಣೆ ನಡೆಸಿದ ಬಳಿಕ ಕೊನೆಗೂ ಇಂದು ತೀರ್ಪು ಹೊರಬಿದ್ದಿದೆ.

ಅಂಧೇರಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಮಂಗಳವಾರ (ಜ. 21) ಚೆಕ್ ಬೌನ್ಸ್ ಪ್ರಕರಣದ ತೀರ್ಪನ್ನು ನೀಡಬೇಕಿತ್ತು. ಆದರೆ, ರಾಮ್ ಗೋಪಾಲ್ ವರ್ಮಾ ನ್ಯಾಯಾಲಯಕ್ಕೆ ಗೈರಾಗಿದ್ದರಿಂದ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಹೊರಡಿಸಿದೆ ಎಂದು ವರದಿಯಾಗಿದೆ.

ಜೈಲು ಶಿಕ್ಷೆಯ ಜೊತೆಗೆ, ದೂರುದಾರರಿಗೆ ಪರಿಹಾರವಾಗಿ 3.75 ಲಕ್ಷ ರೂಪಾಯಿಗಳನ್ನು ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಮೂರು ತಿಂಗಳಲ್ಲಿ ಪರಿಹಾರ ಪಾವತಿಸಲು ವಿಫಲವಾದರೆ, ಹೆಚ್ಚುವರಿಯಾಗಿ ಮೂರು ತಿಂಗಳ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ ಎಂದು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಸೂಚಿಸಿದೆ.

2018ರಲ್ಲಿ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ವಿರುದ್ಧ ಮುಂಬೈನಲ್ಲಿ ಚೆಕ್ ಬೌನ್ಸ್ ಪ್ರಕರಣ ದಾಖಲಾಗಿತ್ತು. ಮಹೇಶ್ಚಂದ್ರ ಮಿಶ್ರಾ ಎಂಬುವವರು ವರ್ಮಾ ವಿರುದ್ಧ ಪ್ರಕರಣ ದಾಖಲಿಸಿದ್ದರು. 2022ರ ಜೂನ್‌ನಲ್ಲಿ ವರ್ಮಾ ಅವರಿಗೆ ವೈಯಕ್ತಿಕ ಬಾಂಡ್ ಮತ್ತು 5000 ರೂ. ಭದ್ರತಾ ಠೇವಣಿ ನೀಡಿದ ನಂತರ ಜಾಮೀನು ನೀಡಲಾಗಿತ್ತು. ಈ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಹಲವು ಬಾರಿ ನೋಟಿಸ್ ನೀಡಿದ್ದರೂ, ರಾಮ್ ಗೋಪಾಲ್ ವರ್ಮಾ ಅವರು ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ.

ಹಲವಾರು ವಿಚಾರಣೆಗಳು ಮತ್ತು ಕಾನೂನು ಪ್ರಕ್ರಿಯೆಗಳ ನಂತರ, ನ್ಯಾಯಾಲಯವು ನಿರ್ದೇಶಕ ವರ್ಮಾ ವಿರುದ್ಧ ತೀರ್ಪು ನೀಡಿದೆ. ಆರೋಪಗಳನ್ನು ಸಾಬೀತುಪಡಿಸಲು ಸಾಕಷ್ಟು ಪುರಾವೆಗಳಿವೆ ಎಂದು ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!