ನವದೆಹಲಿ: 'ಪುಷ್ಪ 2' ಸಿನಿಮಾದ ಭರ್ಜರಿ ಯಶಸ್ಸಿನ ಬಳಿಕ ನಟ ಅಲ್ಲು ಅರ್ಜುನ್ ನಿರ್ದೇಶಕ ಅಟ್ಲೀ ಅವರ ಮುಂಬರುವ ಚಿತ್ರದಲ್ಲಿ ನಟಿಸಲಿದ್ದಾರೆ. ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ನಟಿಸಲಿರುವ ಈ ಚಿತ್ರದಲ್ಲಿ ನಟ ವಿಭಿನ್ನ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಸನ್ ಪಿಕ್ಚರ್ಸ್ ನಿರ್ಮಾಣ ಸಂಸ್ಥೆಯಿಂದ ಬೆಂಬಲಿತವಾದ ಈ ಚಿತ್ರಕ್ಕೆ ತಾತ್ಕಾಲಿಕವಾಗಿ AA22 X A6 ಎಂದು ಹೆಸರಿಸಲಾಗಿದೆ. ಬಹು ನಿರೀಕ್ಷಿತ ಚಿತ್ರದಲ್ಲಿ ನಟ ಅಜ್ಜ, ತಂದೆ ಮತ್ತು ಇಬ್ಬರು ಗಂಡು ಮಕ್ಕಳ ಪಾತ್ರವನ್ನು ನಿರ್ವಹಿಸಲಿದ್ದಾರೆ ಎಂದು ಮೂಲಗಳು ಸೂಚಿಸಿವೆ.
AA22 X A6 ಈಗಾಗಲೇ ಸಿನಿ ಉದ್ಯಮದಲ್ಲಿ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾಗಿದೆ.
ಜೂನ್‌ನಲ್ಲಿ ನಟಿ ದೀಪಿಕಾ ಪಡುಕೋಣೆ ಅಧಿಕೃತವಾಗಿ ಚಿತ್ರತಂಡ ಸೇರಿದರು. ನಟಿ ದೀಪಿಕಾ ಪಡುಕೋಣೆ ಚಿತ್ರತಂಡ ಸೇರಿರುವ ಕುರಿತು ವಿಡಿಯೋ ಒಂದನ್ನು ನಿರ್ಮಾಣ ಸಂಸ್ಥೆ ಸನ್ ಪಿಕ್ಚರ್ಸ್ ಹಂಚಿಕೊಂಡಿತು.
2023ರ ಬ್ಲಾಕ್‌ಬಸ್ಟರ್ ಚಿತ್ರ 'ಜವಾನ್' ನಂತರ ದೀಪಿಕಾ ಪಡುಕೋಣೆ ಮತ್ತು ನಿರ್ದೇಶಕ ಅಟ್ಲೀ ಮತ್ತೆ ಕೆಲಸ ಮಾಡುತ್ತಿದ್ದಾರೆ. ಅಲ್ಲು ಅರ್ಜುನ್ ಮತ್ತು ದೀಪಿಕಾ ಇದೇ ಮೊದಲ ಬಾರಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ.