ಬಾಲಿವುಡ್ ನಟ ವಿಜಯ್ ದೇವರಕೊಂಡ ಕೆಲವೇ ದಿನಗಳಲ್ಲಿ ‘ಕಿಂಗ್‌ಡಮ್’ ಚಿತ್ರದ ಮೂಲಕ ಪ್ರೇಕ್ಷಕರ ಎದುರು ಬರಲಿದ್ದಾರೆ. ಗೌತಮ್ ತಿನ್ನನುರಿ ನಿರ್ದೇಶನದ ಈ ಚಿತ್ರದಲ್ಲಿ ಭಾಗ್ಯಶ್ರೀ ಭೋರ್ಸ್ ನಾಯಕಿಯಾಗಿ ನಟಿಸಿದ್ದಾರೆ.
ಈ ಚಿತ್ರ ಜುಲೈ 31 ರಂದು ಬಿಡುಗಡೆಯಾಗಲಿದೆ. ಸಿನಿಮಾ ರಿಲೀಸ್ಗೆ ಕೆಲವೇ ದಿನ ಬಾಕಿ ಇರುವಾಗ ವಿಜಯ್ ದೇವರಕೊಂಡ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಪ್ರಸ್ತುತ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.
ಡೆಂಗ್ಯೂ ಆದಾಗ ಬಿಳಿ ರಕ್ತ ಕಣದಲ್ಲಿ ಸಾಕಷ್ಟು ಇಳಿಕೆ ಕಾಣುತ್ತದೆ. ಇದು ಜೀವಕ್ಕೂ ಅಪಾಯ ತಂದೊಡ್ಡಬಹುದು. ಹೀಗಾಗಿ, ವಿಜಯ್‌ಗೆ ಸಾಕಷ್ಟು ವಿಶ್ರಾಂತಿ ಬೇಕು ಎಂದು ವೈದ್ಯರು ಹೇಳಿದ್ದಾರೆ. ಈ ತಿಂಗಳ 20ರಂದು ವಿಜಯ್ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುತ್ತದೆ ಎಂದು ವರದಿ ಆಗಿದೆ.