ನಟಿ ರಮ್ಯಾ  
ಸಿನಿಮಾ ಸುದ್ದಿ

ದರ್ಶನ್ ಅಭಿಮಾನಿಗಳಿಂದ ಟ್ರೋಲ್: ಡಿ ಬಾಸ್ ಅಭಿಮಾನಿಗಳಿಗೆ ನಟಿ ರಮ್ಯಾ ಖಡಕ್ ತಿರುಗೇಟು

ಇತ್ತೀಚೆಗೆ ದರ್ಶನ್ ಕೇಸ್ ನಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಕಾಯ್ದಿರಿಸಿದ ದಿನ ರಮ್ಯಾ ಪೋಸ್ಟ್ ಮಾಡಿದ್ದರು.

ನಟಿ ರಮ್ಯಾ ನಟ ದರ್ಶನ್ ಕೇಸಿನ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದು ದರ್ಶನ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಇತ್ತೀಚೆಗೆ ದರ್ಶನ್ ಕೇಸ್ ನಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಕಾಯ್ದಿರಿಸಿದ ದಿನ ರಮ್ಯಾ ಪೋಸ್ಟ್ ಮಾಡಿದ್ದರು. ಆ ಬಳಿಕ ದರ್ಶನ್ ಅಭಿಮಾನಿಗಳು ಕಮೆಂಟ್ ಮಾಡಿದ ರೀತಿಗೆ ರಮ್ಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಅವರು ಇನ್​ಸ್ಟಾಗ್ರಾಮ್ ಸ್ಟೋರಿ ಮೂಲಕ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ.

‘ಎಲ್ಲ ಡಿ ಬಾಸ್ ಅಭಿಮಾನಿಗಳಿಗೆ ನನ್ನ ಇನ್​ಸ್ಟಾಗ್ರಾಮ್ ಖಾತೆಗೆ ಸ್ವಾಗತ. ರೇಣುಕಾಸ್ವಾಮಿ ಕುಟುಂಬಕ್ಕೆ ಯಾಕೆ ನ್ಯಾಯ ಸಿಗಬೇಕು ಎಂಬುದಕ್ಕೆ ನಿಮ್ಮ ಕಮೆಂಟ್​ಗಳೇ ಸಾಕ್ಷಿ' ಎಂದು ರಮ್ಯಾ ಅವರು ಬರೆದುಕೊಂಡಿದ್ದಾರೆ.

ದರ್ಶನ್ ಕೇಸ್ ಬಗ್ಗೆ ರಮ್ಯಾ ಹೇಳಿದ್ದೇನು?

ಭಾರತದ ಜನಸಾಮಾನ್ಯರಿಗೆ ಸುಪ್ರೀಂ ಕೋರ್ಟ್ ಒಂದು ಭರವಸೆಯ ಬೆಳಕಾಗಿದೆ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುವ ಭರವಸೆ ಮೂಡಿದೆ ಎಂದು ರಮ್ಯಾ ಅವರು ಇನ್​ಸ್ಟಾಗ್ರಾಮ್ ಸ್ಟೋರಿ ಮತ್ತು ಎಕ್ಸ್ (ಟ್ವಿಟರ್) ಖಾತೆಯಲ್ಲಿ ಬರೆದುಕೊಂಡಿದ್ದರು. ಇತ್ತೀಚೆಗೆ ಸುಪ್ರೀಂ ಕೋರ್ಟ್​ನಲ್ಲಿ ದರ್ಶನ್ ಜಾಮೀನು ವಿಚಾರಣೆ ನಡೆದ ಬಳಿಕ ರಮ್ಯಾ ಈ ರೀತಿ ಪೋಸ್ಟ್ ಮಾಡಿದ್ದರು. ಆದರೆ ಬಳಿಕ ಕಮೆಂಟ್ ಆಯ್ಕೆಯನ್ನು ಅವರು ಆಫ್ ಮಾಡಿದ್ದಾರೆ.

ಅತ್ಯಂತ ಕೊಳಕು ಭಾಷೆಯಲ್ಲಿ ನನ್ನನ್ನು ಟ್ರೋಲ್ ಮಾಡುತ್ತಿದ್ದಾರೆ. ಇದು ನನಗೊಬ್ಬಳಿಗೇ ಅಲ್ಲ, ಬೇರೆ ನಟ-ನಟಿಯರಿಗೂ ಹೀಗೆ ಆಗಿದೆ. ಅವರ ಪತ್ನಿ-ಮಕ್ಕಳನ್ನೂ ಬಿಟ್ಟಿಲ್ಲ. ನಾನು ಈ ಬಗ್ಗೆ ಕೇಸು ದಾಖಲಿಸಿದ್ದೇನೆ. ಹೀಗೆ ಟ್ರೋಲ್ ಮಾಡುವವರು ಬಹುತೇಕರು ಯುವ ವಯಸ್ಸಿನವರು, ಅವರು ತಮ್ಮ ಮೌಲ್ಯಯುತ ಸಮಯ, ವರ್ಷಗಳನ್ನು ಈ ರೀತಿ ನಿಷ್ಕಾರಣವಾಗಿ ಹಾಳು ಮಾಡುತ್ತಿದ್ದಾರೆ ಯಾರೂ ಕಾನೂನಿಗಿಂತ ಮಿಗಿಲು ಇಲ್ಲ.ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ ಎಂದು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್ ಶಾಕ್: ಪ್ರದೋಷ್‌ ಮಾಫಿ ಸಾಕ್ಷಿಗೆ ಕೋರ್ಟ್‌ ಅಸ್ತು

17 ದಿನಗಳಿಂದ ಸಂಸತ್ತಿನ ಎರಡೂ ಸದನಗಳು ಸ್ತದ್ಧ; ಈ ಸ್ಥಗಿತಕ್ಕೆ PM ಮೋದಿ, ಅಮಿತ್ ಶಾ ಕಾರಣ: ಖರ್ಗೆ

ಪ್ರತಿಪಕ್ಷಗಳು ಸಂಪುಟದಿಂದ ವಜಾಕ್ಕೆ ಆಗ್ರಹಿಸುತ್ತಿರುವ ಮಧ್ಯೆ ಸಚಿವ ಬಿ. ನಾಗೇಂದ್ರಗೆ ಹೈಕೋರ್ಟ್ ಬಿಗ್ ರಿಲೀಫ್!

ರಾಜ್‌ಗಢದಲ್ಲಿ ಭಾರೀ ಮಳೆ: 11 ಪ್ರಯಾಣಿಕರ ಸಮೇತ ಚರಂಡಿಯಲ್ಲಿ ಕೊಚ್ಚಿ ಹೋದ ವ್ಯಾನ್; 9 ಮಂದಿ ಸಾವು!

ದೇಶದ ಅತ್ಯಂತ ದುಬಾರಿ ಪೆಂಟ್‌ಹೌಸ್! ಈ ಐಷಾರಾಮಿ ಮನೆ 271 ಕೋಟಿಗೆ ಮಾರಾಟ!